ಬ್ಯಾಂಕ್ ನೋಟಿಸ್‌ಗೆ ಹೆದರಿ ರೈತ ಆತ್ಮಹತ್ಯೆ
Team Udayavani, Dec 2, 2018, 6:20 AM IST
ಚನ್ನಗಿರಿ(ದಾವಣಗೆರೆ): ಬ್ಯಾಂಕ್ ಸಾಲ ಮರುಪಾವತಿ ನೋಟಿಸ್‌ಗೆ ಭಯಗೊಂಡು ರೈತನೋರ್ವ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಯಲೋದಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಟಿ. ಶಾಂತಪ್ಪ (68) ಆತ್ಮಹತ್ಯೆ ಮಾಡಿಕೊಂಡ ರೈತ. ಅವರು ಶುಕ್ರವಾರ ರಾತ್ರಿ ತಮ್ಮ ಜಮೀನಿನಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರು ಎಕರೆ ಜಮೀನು ಹೊಂದಿದ್ದ ಶಾಂತಪ್ಪ, ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕ್‌ನ ಹೊನ್ನಾಳಿ ಶಾಖೆಯಲ್ಲಿ 6 ಲಕ್ಷ ರೂ.ಸಾಲ ಪಡೆದಿದ್ದರು.
ಕೃಷಿ ಪತ್ತಿನ ಸಹಕಾರಿ ಬ್ಯಾಂಕ್ ಹಾಗೂ ವಿವಿಧೆಡೆ ಸಾಲ ಸೇರಿ ಸುಮಾರು 9 ಲಕ್ಷ ರೂ.ಸಾಲವಿತ್ತು. ಸಾಲ ಮರುಪಾವತಿಸಲಾಗದೆ, ಇತ್ತ ತೋಟ ಉಳಿಸಿಕೊಳ್ಳಲಾಗದೆ ಜಿಗುಪ್ಸೆಗೊಂಡಿದ್ದರು. ಈ ಮಧ್ಯೆ, ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕ್‌ನ ಹೊನ್ನಾಳಿ ಶಾಖೆಯಿಂದ ಸಾಲ ಮರುಪಾವತಿಗಾಗಿ ಮನೆ ಆಸ್ತಿ ಮುಟ್ಟುಗೋಲು ನೋಟಿಸ್ ಎರಡು ದಿನಗಳ ಹಿಂದೆ ತಲುಪಿತ್ತು. ನೋಟಿಸ್ ನೋಡಿದ ಶಾಂತಪ್ಪ ಭಯಭೀತರಾಗಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಬಸವಾಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.