ವಾರದೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ


Team Udayavani, Dec 2, 2018, 11:55 AM IST

bbmp2-copy.jpg

ಬೆಂಗಳೂರು: ನಗರದಲ್ಲಿ ಜಾಹೀರಾತು ಅಳವಡಿಕೆ ಸಂಬಂಧ ಒಂದು ವಾರದಲ್ಲಿ ಸಾರ್ವಜನಿಕರ ಆಕ್ಷೇಪಣೆಗಳನ್ನು ಸ್ವೀಕಾರ ಮಾಡಿ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುವುದಾಗಿ ಬಿಬಿಎಂಪಿ ಹೈಕೋರ್ಟ್‌ಗೆ ಶನಿವಾರ ತಿಳಿಸಿದೆ.

ಬೆಂಗಳೂರು ಮಹಾನಗರ ಪಾಲಿಕೆ  ವ್ಯಾಪ್ತಿಯಲ್ಲಿ ಫ್ಲೆಕ್ಸ್‌, ಬ್ಯಾನರ್‌, ಹೋರ್ಡಿಂಗ್ಸ್‌ ತೆರವು ಕುರಿತಂತೆ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದಿನೇಶ್‌ ಮಹೇಶ್ವರಿ ಹಾಗೂ ನ್ಯಾಯಮೂರ್ತಿ ಎಸ್‌.ಸುಜಾತ ಅವರಿದ್ದ ವಿಭಾಗೀಯ ಪೀಠಕ್ಕೆ ಬಿಬಿಎಂಪಿ ಪರ ವಕೀಲರು ಈ ಮಾಹಿತಿ ನೀಡಿದರು.

ವಿಚಾರಣೆ ವೇಳೆ ಬಿಬಿಎಂಪಿ ಪರ ವಾದ ಮಂಡಿಸಿದ ವಕೀಲ ವಿ. ಶ್ರೀನಿಧಿ, ಕರಡು ಜಾಹೀರಾತು ನೀತಿಗೆ 1,200ಕ್ಕೂ ಅಧಿಕ ಆಕ್ಷೇಪಣೆಗಳು ಬಂದಿದ್ದವು.  ಡಿ.5ರಂದು ಸಾರ್ವಜನಿಕ ವಿಚಾರಣೆ ನಡೆಸಲಾಗುತ್ತದೆ. ಆ ನಂತರ ನೀತಿ ಮತ್ತು ಬೈಲಾ ಅಂತಿಮಗೊಳಿಸಿ 10 ದಿನಗಳಲ್ಲಿ ಸರ್ಕಾರಕ್ಕೆ ಸಲ್ಲಿಕೆ ಮಾಡಲಾಗುವುದು ಎಂದು ತಿಳಿಸಿದರು.

 ನ್ಯಾಯಪೀಠ, ಕಳೆದ ವಿಚಾರಣೆ ವೇಳೆಯೇ ಜಾಹೀರಾತು ನೀತಿಯನ್ನು ಶೀಘ್ರ ಅಂತಿಮಗೊಳಿಸುವುದಾಗಿ ಹೇಳಿದ್ದೀರಿ.  ಈವರೆಗೆ ಯಾಕೆ ಅಂತಿಮಗೊಳಿಸಿಲ್ಲ. ಹತ್ತು ದಿನ ಸಮಯ ನೀಡಲು ಸಾಧ್ಯವಿಲ್ಲ. ಒಂದು ವಾರದಲ್ಲಿ ನೀತಿ ಅಂತಿಮಗೊಳಿಸಿ ಎಂದು ಮೌಖೀಕ ಸೂಚನೆ ನೀಡಿತು. 

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅರ್ಜಿದಾರರ ಪರ ವಕೀಲ ಜಿ.ಆರ್‌.ಮೋಹನ್‌, ಕರಡು ನೀತಿ ರಚನೆಗೆ ಸಂಬಂಧಿಸಿದಂತೆ 2018ರ ಸೆಪ್ಟೆಂಬರ್‌ 25ರಂದು ಸಾರ್ವಜನಿಕರಿಂದ ಆಕ್ಷೇಪಣೆ ಮತ್ತು ಸಲಹೆ ನೀಡುವಂತೆ ಕೋರಲಾಗಿದೆ. ಆದರೆ, ಪಾಲಿಕೆ ಅಧಿಕಾರಿಗಳು ಇಲ್ಲಿವರೆಗೂ ಈ ಸಂಬಂಧ ಅಂತಿಮ ನಿರ್ಧಾರಕ್ಕೆ ಕೈಗೊಂಡಿಲ್ಲ.

ಬೆಂಗಳೂರು ಅಭಿವೃದ್ಧಿ ಸಚಿವರೂ ಆದ ಉಪ ಮುಖ್ಯಮಂತ್ರಿ, ಬಿಬಿಎಂಪಿ ಆಯುಕ್ತರು ಸೇರಿದಂತೆ ಹಲವು ಅಧಿಕಾರಿಗಳ ತಂಡ ತ್ಯಾಜ್ಯ ವಿಲೇವಾರಿ ಅಧ್ಯಯನಕ್ಕೆಂದು ವಿದೇಶಕ್ಕೆ ತೆರಳಿದ್ದಾರೆ ಎಂದು ಪ್ರಮಾಣ ಪತ್ರ ಸಲ್ಲಿಸಿದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಪೀಠ, “ನೀವು ಪ್ರಕರಣಕ್ಕೆ ಮಾತ್ರವೇ ಸೀಮಿತವಾಗಿರಬೇಕೇ ವಿನಃ ಇತರೆ ವಿಚಾರಗಳನ್ನು ನ್ಯಾಯಾಲಯಕ್ಕೆ ತಿಳಿಸುವುದು ಬೇಡ ಎಂದು ಕಿವಿಮಾತು ಹೇಳಿತು.

ಟಾಪ್ ನ್ಯೂಸ್

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

16-cm

Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ

15-ccb

Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್‌ ಸಾಧ್ಯತೆ

14-fruad

Bengaluru: ಸಾಲ ಕೊಡಿಸುವುದಾಗಿ 37 ಲಕ್ಷ ವಂಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Untitled-1

Missing case: ಎರಡು ಪ್ರತ್ಯೇಕ ನಾಪತ್ತೆ ಪ್ರಕರಣ; ದೂರು ದಾಖಲು

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

de

Guttigar: ಮಾವಿನಕಟ್ಟೆ; ಮರದಿಂದ ಬಿದ್ದು ವ್ಯಕ್ತಿ ಸಾವು

9

Kaup: ಬೀಚ್‌ನಲ್ಲಿನ್ನು ಪ್ಯಾರಾ ಮೋಟರಿಂಗ್‌

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.