ಹೊಂದಾಣಿಕೆ ಇದ್ದಲ್ಲಿ ಅಪರಾಧ ಪ್ರಕರಣ ಕಡಿಮೆ


Team Udayavani, Dec 2, 2018, 3:13 PM IST

ray-2.jpg

ರಾಯಚೂರು: ಸಮಾಜದಲ್ಲಿ ಪರಸ್ಪರ ಹೊಂದಾಣಿಕೆ ಮನೋಭಾವದಿಂದ ಬಾಳಿದರೆ ಅಪರಾಧ ಪ್ರಕರಣಗಳನ್ನು ಕಡಿಮೆ ಮಾಡಬಹುದು ಎಂದು ಜಿಲ್ಲಾಧಿಕಾರಿ ಶರತ್‌ ಬಿ. ಅಭಿಪ್ರಾಯಪಟ್ಟರು. ನಗರದ ಜಿಲ್ಲಾ ಪೊಲೀಸ್‌ ಕಚೇರಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸಣ್ಣಪುಟ್ಟ ವಿಷಯಗಳಿಗೂ ಇಂದು ಜನ ಅತಿರೇಕದ ವರ್ತನೆ ತೋರುತ್ತಿದ್ದಾರೆ. ಸಹನೆ ಕ್ಷೀಣಿಸುತ್ತಿದ್ದು, ಪರಸ್ಪರ ದ್ವೇಷ, ಅಸೂಯೆ ಪ್ರವೃತ್ತಿ ಹೆಚ್ಚಾಗುತ್ತಿದೆ. ಇಂಥ ಗುಣಗಳಿಂದಲೇ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಎಲ್ಲರೂ ಸಹಿಷ್ಣು ಮನೋಭಾವ ಹೊಂದಬೇಕು. ಅಂದಾಗ ಮಾತ್ರ ಸಣ್ಣಪುಟ್ಟ ವಿಚಾರಗಳಿಗೆ ಠಾಣೆಗೆ ಬರುವ ಸನ್ನಿವೇಶ ತಪ್ಪಲಿದೆ ಎಂದು ತಿಳಿಸಿದರು.

ಅಪರಾಧ ಪ್ರಕರಣಗಳ ಹೆಚ್ಚಳಕ್ಕೆ ಸಾಮಾಜಿಕ ವ್ಯವಸ್ಥೆಯೂ ಕಾರಣವಾಗುತ್ತಿದೆ. ವಿಭಕ್ತ ಕುಟುಂಬಗಳ ಸಂಖ್ಯೆ ದಿನೇದಿನೆ
ಹೆಚ್ಚುತ್ತಿದ್ದು, ಆಪ್ತ ವಲಯವೇ ಇಲ್ಲದಂಥ ಸನ್ನಿವೇಶ ಇದೆ. ಇದರಿಂದ ಅಭದ್ರತೆ ಕಾಡುತ್ತಿದೆ. ಹಿಂದೆ ಅವಿಭಕ್ತ ಕುಟುಂಬಗಳು ಹೆಚ್ಚಾಗಿರುವ ಕಾರಣ ಭದ್ರತೆ ಇರುತ್ತಿತ್ತು. ಆದರೆ, ಈಗ ನಗರ ಪ್ರದೇಶಗಳಲ್ಲಿ ನಮ್ಮ ನೆರೆಹೊರೆಯವರೇ ನಮಗೆ ಪರಿಚಯ ಇಲ್ಲದಂಥ ಸನ್ನಿವೇಶ ಇದೆ ಎಂದರು.

ಇಂದು ಸಾಕಷ್ಟು ಅಪರಾಧ ಪ್ರಕರಣಗಳು ಮಾಧ್ಯಮಗಳ ಮೂಲಕ ಬಯಲಾಗುತ್ತಿವೆ. ಪೊಲೀಸ್‌ ಇಲಾಖೆ ಗಮನಕ್ಕೂ ಬಾರದಂತೆ ಸಾಕಷ್ಟು ಅಕ್ರಮ ನಡೆಯುತ್ತಿದ್ದು, ಅವುಗಳನ್ನು ಸಮಾಜಕ್ಕೆ ತೋರಿಸುವಲ್ಲಿ ಮಾಧ್ಯಮಗಳು ಮಹತ್ವದ ಪಾತ್ರ ವಹಿಸುತ್ತಿವೆ. ಯಾವ ವ್ಯಕ್ತಿ ಕಾನೂನು ಪಾಲಿಸುವುದಿಲ್ಲವೋ ಅವರಿಗೆ ವ್ಯವಸ್ಥೆ ಬಗ್ಗೆ ಪ್ರಶ್ನಿಸುವ, ಟೀಕಿಸುವ ಹಕ್ಕು ಇರುವುದಿಲ್ಲ. ನಾವು ಮೊದಲು ಕಾನೂನು ಪಾಲಿಸಬೇಕು. ಆಮೇಲೆ ಇತರರ ಬಗ್ಗೆ ಮಾತನಾಡಬೇಕು ಎಂದರು.

ಜಿಪಂ ಸಿಇಒ ನಲಿನ್‌ ಅತುಲ್‌ ಮಾತನಾಡಿ, ಪ್ರತಿಯೊಬ್ಬರಿಗೂ ಕಾನೂನಿನ ತಿಳಿವಳಿಕೆ ಮುಖ್ಯ. ಕೆಲವೊಂದು ಪ್ರಾಥಮಿಕ ಮಾಹಿತಿ ತಿಳಿಯುವುದು ಎಲ್ಲರ ಕರ್ತವ್ಯ. ಕಾನೂನಿನ ಅರಿವು ಮೂಡಿದಾಗಲೇ ಅಪರಾಧಗಳನ್ನು ಮಾಡಬಾರದು ಎಂಬ ಮನೋಭಾವ
ಮೂಡಲಿದೆ. ಕಾನೂನು ಯಾಕೆ ಬೇಕು? ಅದರಿಂದ ಏನು ಪ್ರಯೋಜನ ಎನ್ನುವ ಮಾಹಿತಿ ಅಗತ್ಯ ಎಂದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ಕಿಶೋರಬಾಬು ಮಾತನಾಡಿ, ಈ ಮಾಸಾಚರಣೆ ಮಾಡುವ ಉದ್ದೇಶವೇ ಅಪರಾಧ ತಡೆಯುವುದಾಗಿದೆ. ಘಟನೆ ನಡೆದ ಮೇಲೆ ಕ್ರಮಕ್ಕೆ ಮುಂದಾಗುವುದಕ್ಕಿಂತ ಘಟನೆ ನಡೆಯದಂತೆ ನೋಡಿಕೊಳ್ಳುವುದು ಮುಖ್ಯ. ಒಂದು ಅಪರಾಧ ಪ್ರಕರಣ ಇಡೀ ವ್ಯವಸ್ಥೆ ಮೇಲೆಯೇ ದುಷ್ಪರಿಣಾಮ ಬೀರಬಲ್ಲದು. ಈ ನಿಟ್ಟಿನಲ್ಲಿ ಇಲಾಖೆ ಜತೆ ಸಾರ್ವಜನಿಕರು ಸಹಕಾರ ನೀಡುವುದು ಅನಿವಾರ್ಯ ಎಂದರು. ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಎಸ್‌.ಬಿ. ಪಾಟೀಲ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichruru-RTPS

Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ

11-dolly

Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

5

Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.