ಡಿ. 9: ತೊಡಿಕಾನದಲ್ಲಿ ಸುಳ್ಯ ತಾ| 23ನೇ ಕನ್ನಡ ಸಾಹಿತ್ಯ ಸಮ್ಮೇಳನ 


Team Udayavani, Dec 2, 2018, 3:23 PM IST

2-december-15.gif

ಅರಂತೋಡು: ಸುಳ್ಯ ತಾಲೂಕು 23ನೇ ಕನ್ನಡ ಸಾಹಿತ್ಯ ಸಮ್ಮೇಳನ ಡಿ. 9ರಂದು ನಡೆಯಲಿದ್ದು, ಸಾಹಿತಿ ಲಲಿತಾಜ ಮಲ್ಲಾರ ಅವರ ಸಮ್ಮೇಳನಾಧ್ಯಕ್ಷತೆಯಲ್ಲಿ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಾಲಯದ ವಠಾರದಲ್ಲಿ ನಡೆಯಲಿದೆ. ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ 10 ಸಾಧಕರನ್ನು ಸಮ್ಮಾನಿಸಲಾಗುವುದು ಎಂದು ಸಾಹಿತ್ಯ ಸಮ್ಮೇಳನ ಸಂಘಟನ ಸಮಿತಿ ಅಧ್ಯಕ್ಷ ಪಿ.ಬಿ. ದಿವಾಕರ ರೈ ಹೇಳಿದರು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ| ಹರಪ್ರಸಾದ್‌ ತುದಿಯಡ್ಕ ಮತ್ತು ಸಮ್ಮೇಳನ ಸಂಘಟನ ಸಮಿತಿ ಅಧ್ಯಕ್ಷ ಪಿ.ಬಿ. ದಿವಾಕರ ರೈ, ಪ್ರಧಾನ ಕಾರ್ಯದರ್ಶಿ ಸಂತೋಷ್‌ ಕುತ್ತಮೊಟ್ಟೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲಾ ಸಾಹಿತ್ಯ ಪರಿಷತ್‌, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌, ಶ್ರೀ ಮಲ್ಲಿಕಾರ್ಜುನ ದೇವಾಲಯ ತೊಡಿಕಾನ, 23ನೇ ಸಾಹಿತ್ಯ ಸಮ್ಮೇಳನ ಸಂಘಟನ ಸಮಿತಿಯ ಆಶ್ರಯದಲ್ಲಿ ತಾಲೂಕು 23ನೇ ಕನ್ನಡ ಸಾಹಿತ್ಯ ಸಮ್ಮೇಳನ ಡಾ| ಕೀಲಾರು ಗೋಪಾಲಕೃಷ್ಣ ವೇದಿಕೆ-ಉಳುವಾರು ಪಟೇಲ್‌ ಮಾಯಿಲಪ್ಪ ಗೌಡ ಸಭಾಂಗಣದಲ್ಲಿ ನಡೆಯಲಿದೆ. ಸಮ್ಮೇಳನಾಧ್ಯಕ್ಷತೆಯನ್ನು ಹಿರಿಯ ಸಾಹಿತಿ ಲಲಿತಾಜ ಮಲ್ಲಾರ ವಹಿಸಲಿದ್ದಾರೆ.

ಬೆಂಗಳೂರು ಕೇಂದ್ರೀಯ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗ ಮುಖ್ಯಸ್ಥ, ನಾಟಕಕಾರ ಡಾ| ಕೆ.ವೈ. ನಾರಾಯಣ ಸ್ವಾಮಿ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಕನ್ನಡ ತಾಯಿ ಭುವನೇಶ್ವರಿಯ ಮೆರವಣಿಗೆಗೆ ಜಿ.ಪಂ. ಸದಸ್ಯ ಹರೀಶ್‌ ಕಂಜಿಪಿಲಿ ಚಾಲನೆ ನೀಡಲಿದ್ದಾರೆ. ಅರಂತೋಡು ಗ್ರಾ.ಪಂ. ಅಧ್ಯಕ್ಷೆ ಲೀಲಾವತಿ ಕೊಡಂಕೇರಿ ರಾಷ್ಟ್ರ ಧ್ವಜ, ಕ.ಸಾ.ಪ. ಜಿಲ್ಲಾಧ್ಯಕ್ಷ ಪ್ರದೀಪ್‌ ಕುಮಾರ್‌ ಕಲ್ಕೂರ ಪರಿಷತ್ತಿನ ಧ್ವಜ, ತಾಲೂಕು ಕ.ಸಾ.ಪ. ಅಧ್ಯಕ್ಷ ಡಾ| ಹರಪ್ರಸಾದ್‌ ತುದಿಯಡ್ಕ ಕನ್ನಡ ಧ್ವಜಾರೋಹಣ ನೆರವೇರಿಸಲಿದ್ದಾರೆ.

ಶಾಸಕ ಎಸ್‌. ಅಂಗಾರ ಪುಸ್ತಕ ಪ್ರದರ್ಶನ, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ ವಸ್ತು ಪ್ರದರ್ಶನ ಉದ್ಘಾಟನೆ ಮಾಡಲಿದ್ದಾರೆ. ಸ್ಮರಣ ಸಂಚಿಕೆಯನ್ನು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸಿ.ಕೆ. ಮಹೇಂದ್ರ ಅನಾವರಣ ಮಾಡಲಿದ್ದಾರೆ. ನಿಕಟಪೂರ್ವ ಸಮ್ಮೇಳನಾಧ್ಯಕ್ಷರ ಮಾತನ್ನು ವಸಂತ ಶೆಟ್ಟಿ ಬೆಳ್ಳಾರೆ ಆಡುವರು.

ಸಭಾ ಕಾರ್ಯಕ್ರಮದ ಬಳಿಕ ಪತ್ರಕರ್ತ ಹರೀಶ್‌ ಕೇರ ಅವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಲಿದೆ. ತಾಲೂಕಿನ ಹೆಸರಾಂತ ಗಾಯಕರಿಂದ ಕವಿ, ಕಾವ್ಯ ಗಾಯನ ನಡೆಯಲಿದೆ. ಅಪರಾಹ್ನ ‘ನಾಡು, ನುಡಿ-ಸವಾಲುಗಳು ಮತ್ತು ಎಚ್ಚರ’ ವಿಚಾರ ಗೋಷ್ಠಿ ನಡೆಯಲಿದೆ. ಅಡಿಕೆ ಪತ್ರಿಕೆಯ ಸಂಪಾದಕ ನಾ. ಕಾರಂತ ಪೆರಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಾಕೃತಿಕ ಸವಾಲುಗಳ ಬಗ್ಗೆ ಗೋಪಾಲ ಪೆರಾಜೆ, ಕೃಷಿ ಸವಾಲುಗಳ ಬಗ್ಗೆ ಡಾ| ಕರುಣಾಕರ ನಿಡಿಂಜಿ ಮತ್ತು ಕನ್ನಡದ ಸವಾಲುಗಳ ಬಗ್ಗೆ ದುರ್ಗಾಕುಮಾರ್‌ ನಾಯರ್‌ಕೆರೆ ವಿಷಯ ಮಂಡನೆ ಮಾಡಲಿದ್ದಾರೆ.

ಸಮಾರೋಪ ಸಮಾರಂಭ
ಜಿಲ್ಲಾ ಪೊಲೀಸ್‌ ಅಧೀಕ್ಷಕ ಡಾ| ರವಿಕಾಂತೇ ಗೌಡ ಸಮಾರೋಪ ಭಾಷಣ ಮಾಡಲಿದ್ದಾರೆ. ಕ.ಸಾ.ಪ. ಜಿಲ್ಲಾಧ್ಯಕ್ಷ ಪ್ರದೀಪ್‌ ಕುಮಾರ್‌ ಕಲ್ಕೂರ ಅಧ್ಯಕ್ಷತೆ ವಹಿಸಿಲಿದ್ದಾರೆ. ಸಮಾರಂಭದಲ್ಲಿ ಅಕಾಡೆಮಿ ಆಫ್ ಲಿಬರಲ್‌ ಎಜುಕೇಶನ್‌ ಅಧ್ಯಕ್ಷ ಡಾ| ಕೆ.ವಿ. ಚಿದಾನಂದ, ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ತಾ.ಪಂ. ಸದಸ್ಯೆ ಪುಷ್ಪಾ ಮೇದಪ್ಪ ಗೌಡ ಭಾಗವಹಿಸಲಿದ್ದಾರೆ. ವಿವಿಧ ಕ್ಷೇತ್ರಗಳ 10 ಸಾಧಕರನ್ನು ಸಮ್ಮಾನಿಸಲಾಗುವುದು. ಸಮಾಜಸೇವೆಗೆ ಸುಶೀಲಮ್ಮ ಮರುವಳ, ಸಹಕಾರಿ ಆಡಳಿತ ಸೇವೆಗೆ ವಿಶ್ವನಾಥ ನಾಯರ್‌, ಪೋಲಿಸ್‌ ಸೇವೆಯಲ್ಲಿ ಎ.ಜಿ. ವೆಂಕಟ್ರಮಣ, ಪಂಚಾಯತ್‌ ಆಡಳಿತ ಸೇವೆಗೆ ಯು.ಡಿ. ಶೇಕರ್‌, ಉರಗ ಸ್ನೇಹಿ ಶಿವಾನಂದ ಕುಕ್ಕುಂಬಳ, ಉದ್ಯಮ ಮತ್ತು ಸಮಾಜಸೇವೆಗೆ ಯು.ಬಿ. ಚಕ್ರಪಾಣಿ, ಸ್ವ ಉದ್ಯೋಗ ಕ್ಷೇತ್ರದಲ್ಲಿ ಎಂ.ಕೆ. ರಾಮಚಂದ್ರ, ಕಲೆ, ಸಾಂಸ್ಕೃತಿಕ ಸೇವೆಗೆ ಮಂಜುನಾಥ ಬಂಗ್ಲೆಗುಡ್ಡೆ, ದುಡಿ ಮತ್ತು ಕೊಳಲು ವಾದನದ ಕ್ಷೇತ್ರದಲ್ಲಿ ಪಿ. ಜಯರಾಮ ಅವರನ್ನು ಸಮ್ಮಾನಿಸಲಾಗುವುದು ಎಂದು ಹೇಳಿದರು.

ಬಳಿಕ ಕುಂದಾಪರದ ಪ್ರಸಿದ್ಧ ರೂಪಕಲಾ ನಾಟಕ ತಂಡದವರಿಂದ ಕರಾವಳಿ ಮುತ್ತು ಸತೀಶ್‌ ಪೈ ನಿರ್ದೇಶನದ ಕನ್ನಡ ಹಾಸ್ಯಮಯ ನಾಟಕ ‘ಮೂರು ಮುತ್ತು’ ಪ್ರದರ್ಶನವಿದೆ. ಬಳಿಕ ಸರಕಾರಿ ಪ್ರಾಥಮಿಕ ಶಾಲೆ ತೊಡಿಕಾನ, ನೆಹರೂ ಸ್ಮಾರಕ ಪ.ಪೂ. ಕಾಲೇಜು ಅರಂತೋಡು ಹಾಗೂ ಸ್ಥಳೀಯ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಮನರಂಜನ ಕಾರ್ಯ ಕ್ರಮ ನಡೆಯಲಿದೆ. ದೀಪಕ್‌ ರೈ ಪಾಣಾಜೆರವರ ಸಾರಥ್ಯದಲ್ಲಿ ಮಸ್ಕಿರಿ ಕುಡ್ಲ ತಂಡದವರಿಂದ ಹಾಸ್ಯೋತ್ಸವ ನಡೆಯಲಿದೆ ಎಂದು ಹೇಳಿದರು. ಸಂಚಾಲಕ ಕೆ.ಆರ್‌. ಗಂಗಾಧರ್‌, ಸೋಮಶೇಖರ್‌ ಕೊಯಿಂಗಾಜೆ, ಕೇಶವ ಕೊಳಲುಮೂಲೆ, ಆನಂದ ಕಲ್ಲುಗದ್ದೆ, ಕಿಶೋರ್‌ ಕುಮಾರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Untitled-1

Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

3

Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.