ಅಹೋರಾತ್ರಿ ಧರಣಿ ಅಂತ್ಯ
Team Udayavani, Dec 2, 2018, 5:03 PM IST
ಸಾಗರ: ನಗರದ ನೆಹರೂ ನಗರದ 7ನೇ ತಿರುವಿನ ಹೊಸ ಉಪ್ಪಾರ ಕೇರಿ ಸರ್ಕಲ್‌ನಲ್ಲಿ ತೆರವುಗೊಳಿಸಿರುವ ನಾಮಫಲಕವನ್ನು ಪುನರ್ ಅಳವಡಿಸುವಂತೆ ಒತ್ತಾಯಿಸಿ ಶುಕ್ರವಾರ ವೀರಮಾರುತಿ ಯುವಕ ಸಂಘ, ನೆಹರೂ ನಗರ ನಾಗರಿಕ ಸಮಿತಿ ಆಶ್ರಯದಲ್ಲಿ ನಗರಸಭೆ ಎದುರು ಹಮ್ಮಿಕೊಂಡಿದ್ದ ಅಹೋರಾತ್ರಿ ಧರಣಿ ಅಂತಿಮವಾಗಿ ಅಧಿಕಾರಿಗಳು, ಶಾಸಕರ ಮಧ್ಯಸ್ಥಿಕೆಯಲ್ಲಿ ತಡರಾತ್ರಿ ಸಮಾಪ್ತಿಗೊಂಡಿದೆ. ಸಾಗರ ಉಪವಿಭಾಗದ ಸಹಾಯಕ ಆಯುಕ್ತರು ಸೂಕ್ತ ಭರವಸೆ ನೀಡಿದ ನಂತರ ಧರಣಿಯನ್ನು ಹಿಂದಕ್ಕೆ ಪಡೆಯಲಾಯಿತು.
ಶುಕ್ರವಾರ ತಡರಾತ್ರಿವರೆಗೂ ನೂರಾರು ಸಂಖ್ಯೆಯಲ್ಲಿ ನಗರಸಭೆ ಎದುರು ಜಮಾವಣೆಗೊಂಡಿದ್ದ ಜನರು ನಾಮಫಲಕ ಅಳವಡಿಸುವವರೆಗೂ ಧರಣಿ ಹಿಂದೆಗೆದುಕೊಳ್ಳುವುದಿಲ್ಲ ಎಂದು ಪಟ್ಟು ಹಿಡಿದಿದ್ದರು. ಸ್ಥಳಕ್ಕೆ ಆಗಮಿಸಿದ ಶಾಸಕ ಎಚ್. ಹಾಲಪ್ಪ ಪರಿಸ್ಥಿತಿಯ ಗಂಭೀರತೆಯನ್ನು ಅರಿತು ಅಧಿಕಾರಿಗಳ ಜೊತೆ ಸಭೆ ನಡೆಸಿದರು. ನಗರಸಭೆ ಸಭಾಂಗಣದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಎರಡೂ ಕೋಮಿನ ಮುಖಂಡರು ಪಾಲ್ಗೊಂಡು ತಮ್ಮ ಅಭಿಪ್ರಾಯವನ್ನು ತಿಳಿಸಿದರು. ಜೊತೆಗೆ ಸೌಹಾರ್ದಯುತವಾಗಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಮುಕ್ತ ಮಾತುಕತೆ ನಡೆಯಿತು.
ಶಾಶ್ವತ ನಾಮಫಲಕ ಅಳವಡಿಕೆ: ಸಭೆಯ ನಂತರ ಮಾತನಾಡಿದ ಎಸಿ ದರ್ಶನ್ ಎಚ್.ವಿ., ಊರಿನಲ್ಲಿ ಸೌಹಾರ್ದಯುತ ವಾತಾವರಣ ನಿರ್ಮಾಣ ಮಾಡುವುದು ತಾಲೂಕು ಆಡಳಿತದ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ನಗರಸಭೆ ಹಾಗೂ ಸರ್ಕಾರಿ ದಾಖಲೆ ಪ್ರಕಾರ ಹೊಸ ಉಪ್ಪಾರ ಕೇರಿ ಮುಖ್ಯ ರಸ್ತೆ ಎಂದು ನಾಮಕರಣ ಮಾಡಲಾಗುತ್ತದೆ. ಈ ನಾಮಫಲಕ ಶಾಶ್ವತವಾಗಿ ಉಳಿಯುವಂತೆ ನಗರಸಭೆ ವತಿಯಿಂದ ಸಿಮೆಂಟ್ ಸ್ಟ್ರಕ್ಚರ್ ಹಾಕಿ ನಿರ್ಮಾಣ ಮಾಡಲಾಗುತ್ತದೆ. ಹಾಲಿ ವಿವಾದಕ್ಕೀಡಾಗಿರುವ ವೃತ್ತದಲ್ಲಿ ಯಾವುದೇ ನಾಮಫಲಕವನ್ನು ಯಾರೂ ಹಾಕುವಂತಿಲ್ಲ. ನಾಮಫಲಕ ಹಾಕುವ ಸಂದರ್ಭದಲ್ಲಿ ಎರಡೂ ಕೋಮಿನವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನ ನಡೆಸಲಾಗುತ್ತದೆ ಎಂದರು.
ಶಾಸಕ ಎಚ್. ಹಾಲಪ್ಪ ಮಾತನಾಡಿ, ಯಾರು ನಾಮಫಲಕವನ್ನು ಕಿತ್ತು ಹಾಕಿದ್ದರೋ ಅವರೇ ನಾಮಫಲಕವನ್ನು ಹಾಕುವಂತೆ ಮಾಡಿದ್ದೇವೆ. ಯಾವುದೇ ಕಾರಣಕ್ಕೂ ನಮ್ಮ ಮಾತು, ಜೀವನಪದ್ಧತಿ, ಧರ್ಮ ಹಾಗೂ ಭಾವನೆ ಉಳಿಯಬೇಕು. ಈ ಭೂಮಿ ಇರುವವರೆಗೂ ನಾಮಫಲಕ ಉಳಿಯಬೇಕು. ಈ ನಿಟ್ಟಿನಲ್ಲಿ ಚರ್ಚಿಸಿ ಒಮ್ಮತದ ನಿರ್ಣಯ ತೆಗೆದುಕೊಳ್ಳಲಾಗಿದೆ. ಯಾವುದೇ ಕಾರಣಕ್ಕೂ ನೀವು ತಲೆ ತಗ್ಗಿಸುವಂತೆ ಮಾಡುವುದಿಲ್ಲ.
ನ್ಯಾಯಾಲಯಕ್ಕೆ ಹೋದರೆ ಅನಗತ್ಯ ತಿರುಗಾಟ ಮಾಡಬೇಕಾಗುತ್ತದೆ. ಈ ನಿಟ್ಟಿನಲ್ಲಿ ಸೌಹಾರ್ದಯುತವಾಗಿ ಮಾತುಕತೆ ನಡೆಸಲಾಗಿದೆ. ನಾಗರಿಕರು ಯಾವುದೇ ಕಾರಣಕ್ಕೂ ಪ್ರಚೋದನೆಗೆ ಒಳಗಾಗಬಾರದು. ಎರಡೂ ಕೋಮಿನವರು ಸೇರಿ ಮಾತುಕತೆ ನಡೆಸಿದ್ದೇವೆ. ಊರಿನಲ್ಲಿ ಸೌಹಾರ್ದಯುತ ವಾತಾವರಣ ನಿರ್ಮಾಣ ಮಾಡಲು ಎಲ್ಲರೂ ಕೈ ಜೋಡಿಸಬೇಕು ಎಂದು ಹೇಳಿದರು.
ತಹಶೀಲ್ದಾರ್ ರಶ್ಮಿ, ಡಿವೈಎಸ್‌ಪಿ ಮಂಜುನಾಥ ಕವರಿ, ನಗರಸಭೆ ಅಧ್ಯಕ್ಷೆ ವೀಣಾ ಪರಮೇಶ್ವರ್, ಉಪಾಧ್ಯಕ್ಷೆ ಗ್ರೇಸಿ
ಡಯಾಸ್, ಪ್ರಮುಖರಾದ ಅ.ಪು. ನಾರಾಯಣಪ್ಪ, ಟಿ.ಡಿ. ಮೇಘರಾಜ್, ಯು. ಎಚ್. ರಾಮಪ್ಪ, ಐ.ವಿ. ಹೆಗಡೆ, ಸಂತೋಷ್, ಅನೂಪ್, ಸೈಯದ್ ತಾಹೀರ್, ರಶೀದ್, ತಶ್ರೀಫ್ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.