ಮಾವು ಬೆಳೆಗೆ ಮೋಹಕ ಬೆಲೆ


Team Udayavani, Dec 3, 2018, 12:00 AM IST

p1011231.jpg

ಮಾವನ್ನು ಬಾಧಿಸುವ ಕೀಟಗಳನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಮೋಹಕ ಬಲೆಗಳನ್ನು ಬಳಸುವುದು ಸೂಕ್ತ. ಕೀಟಗಳನ್ನು ಬಹುಪರಿಣಾಮಕಾರಿಯಾಗಿ ನಿಯಂತ್ರಿಸಲು ಮಾವಿನ ಕಾಯಿಗಳು ಗೋಲಿಗಾತ್ರದಲ್ಲಿ ಇದ್ದಾಗಲೇ ಮೋಹಕ ಅಥವಾ ಲಿಂಗಾಕರ್ಷಕ ಬಲೆಗಳನ್ನು ಕಟ್ಟಬೇಕು ಎಂದು ಕೀಟಶಾಸ್ತ್ರಜ್ಞರು ಅಭಿಪ್ರಾಯಪಡುತ್ತಾರೆ.

ಹಣ್ಣಿನ ಬೆಳೆಗಳಿಗೆ ರಾಸಾಯನಿಕ ಕೀಟನಾಶಕಗಳನ್ನು ಸಿಂಪಡಿಸುವುದರಿಂದ ಅದರ ಶೇಷಾಂಶ ಹಣ್ಣುಗಳಲ್ಲಿ ಉಳಿಯುತ್ತದೆ. ಇಂಥ ಹಣ್ಣುಗಳನ್ನು ಸೇವಿಸುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಬಹುದು. ಈ ವಿಷಯ ಮನಗಂಡಿರುವ ಗ್ರಾಹಕರು ಸಾವಯವ ಹಣ್ಣುಗಳಿಗೆ ಬೇಡಿಕೆ ಸಲ್ಲಿಸುತ್ತಿದ್ದಾರೆ. ನಗರ, ಮಹಾನಗರಗಳಲ್ಲಿ ಸಾವಯವ ಹಣ್ಣುಗಳಿಗೆ ಪ್ರತ್ಯೇಕ ಮಾರುಕಟ್ಟೆಯೇ ಸೃಷ್ಟಿಯಾಗಿದೆ. ವಿದೇಶಗಳಲ್ಲಿ ಭಾರತದ ಸಾವಯವ ಹಣ್ಣುಗಳಿಗೆ ಬಹುಬೇಡಿಕೆ ಇದೆ. ಇಂಥ ಅವಕಾಶಗಳನ್ನು ಬೆಳೆಗಾರರು ಸದುಪಯೋಗಪಡಿಸಿಕೊಳ್ಳುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಹಣ್ಣುಗಳ ರಾಜ ಎನ್ನಿಸಿಕೊಂಡಿರುವ ಮಾವು ಬೆಳೆಯನ್ನು ರಾಸಾಯನಿಕ ಕೀಟನಾಶಕ ಮುಕ್ತವಾಗಿ ಬೆಳೆಯುವುದು ಎಲ್ಲ ದೃಷ್ಟಿಯಿಂದಲೂ ಸಕಾರಾತ್ಮಕ ಪರಿಣಾಮಗಳನ್ನು ಉಂಟು ಮಾಡುತ್ತದೆ.

ಮಾವು ಬೆಳೆಯನ್ನು ರಾಸಾಯನಿಕ ಪದ್ಧತಿಯಲ್ಲಿ ಬೆಳೆಯುವುದಕ್ಕೂ, ಸಾವಯವ ಪದ್ಧತಿಯಲ್ಲಿ ಬೆಳೆಯುವುದಕ್ಕೂ ಬಹಳ ವ್ಯತ್ಯಾಸಗಳಿವೆ. ಮಾವನ್ನು ಬಾಧಿಸುವ ಕೀಟಗಳನ್ನು ನಿಯಂತ್ರಿಸಲು ಸಿಂಪಡಿಸುವ ಕೀಟನಾಶಕಗಳಿಂದ ನೆಲ-ಜಲ ಮತ್ತು ಬೆಳೆಗಾರರ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮಗಳು ಉಂಟಾಗುತ್ತವೆ. ಅದರಲ್ಲಿಯೂ ರಾಸಾಯನಿಕ ಕೃಷಿಪದ್ಧತಿಯಿಂದ ಉಂಟಾಗುವ ಖರ್ಚು-ವೆಚ್ಚಗಳು ಅತ್ಯಧಿಕ. ಹಣ್ಣಿಗೆ ಬಾಧೆ ನೀಡುವ ಕೀಟಗಳು ಬಹುಬೇಗ ರಾಸಾಯನಿಕ ನಿರೋಧಕ ಗುಣವನ್ನು ಬೆಳೆಸಿಕೊಳ್ಳುತ್ತವೆ.

ಈ ದಿಸೆಯಲ್ಲಿ ಮಾವನ್ನು ಬಾಧಿಸುವ ಕೀಟಗಳನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಮೋಹಕ ಬಲೆಗಳನ್ನು ಬಳಸುವುದು ಸೂಕ್ತ. ಕೀಟಗಳನ್ನು ಬಹುಪರಿಣಾಮಕಾರಿಯಾಗಿ ನಿಯಂತ್ರಿಸಲು ಮಾವಿನ ಕಾಯಿಗಳು ಗೋಲಿಗಾತ್ರದಲ್ಲಿ ಇದ್ದಾಗಲೇ ಮೋಹಕ ಅಥವಾ ಲಿಂಗಾಕರ್ಷಕ ಬಲೆಗಳನ್ನು ಕಟ್ಟಬೇಕು ಎಂದು ಕೀಟಶಾಸ್ತ್ರಜ್ಞರು ಅಭಿಪ್ರಾಯಪಡುತ್ತಾರೆ. ಸಾವಯವ ಪದ್ಧತಿಯಲ್ಲಿ ಮಾವು ಬೆಳೆಯುತ್ತಾ ಬಂದಿರುವ ತುಮಕೂರು ಜಿಲ್ಲೆ ಗಿಡದಪಾಳ್ಯ ಗ್ರಾಮದ ಮಾವು ಬೆಳೆಗಾರ ಗಂಗಾಧರಯ್ಯಸ್ವಾಮಿ ಅವರು ಮೋಹಕ ಬಲೆಗಳಿಂದ ಪರಿಣಾಮಕಾರಿಯಾಗಿ ಮಾವಿಗೆ ಬಾಧೆ ನೀಡುವ ಕೀಟಗಳನ್ನು ನಿಯಂತ್ರಿಸಬಹುದನ್ನು ತೋರಿಸಿದ್ದಾರೆ.

ಮೋಹಕ ಬಲೆಗಳನ್ನು ಬಳಸುವ ಮೊದಲು ಮತ್ತು ನಂತರದ ಇಳುವರಿ ಪ್ರಮಾಣ ಗಮನಿಸಿದ್ದೇನೆ. ಇವುಗಳನ್ನು ತೋಟದಲ್ಲಿ ಕಟ್ಟಿದ ನಂತರ ಮಾವು ಇಳುವರಿ ಹೆಚ್ಚಾಗಿದೆ. ದೀರ್ಘ‌ತಾಳಿಕೆ ಇರುವ ಹಣ್ಣುಗಳೂ ದೊರೆಯುತ್ತವೆ ಎಂದು ಸಂತಸ ವ್ಯಕ್ತಪಡಿಸುತ್ತಾರೆ.

ಮೋಹಕ ಬಲೆಗಳ ವಿಶಿಷ್ಟತೆ ಇವುಗಳ ಒಳಗೆ ಇರುವ ಲ್ಯೂರ್‌ಗಳು ಲಿಂಗಾಕರ್ಷಕ ವಾಸನೆಯನ್ನು ಪರಿಸರದಲ್ಲಿ ಹರಡುತ್ತವೆ. ಇದರಿಂದ ಹೂಜಿನೊಣಗಳು ಇವುಗಳತ್ತ ಆಕರ್ಷಿತವಾಗುತ್ತವೆ. ಈ ಮೋಹಕ ಬಲೆಗಳನ್ನು ಬಳಸುವುದರಿಂದ ಮಾವಿನ ಬೆಳೆಗಾಗಲಿ, ಪರಿಸರಕ್ಕಾಗಲಿ ಯಾವುದೇ ಹಾನಿಯಾಗುವುದಿಲ್ಲ. ಇವುಗಳನ್ನು ಬಳಸುವುದರಿಂದ ಸಾವಯವ/ಜೈವಿಕ ಪದ್ಧತಿಯಲ್ಲಿ ಮಾವು ಬೆಳೆಯಲು ಸಹಾಯಕವಾಗುತ್ತದೆ. 

ಮಾವಿನ ಕಾಯಿಗಳು ಗೋಲಿಗಾತ್ರದಲ್ಲಿದ್ದಾಗಲೇ ಒಂದು ಎಕರೆಗೆ ಎಂಟು ಮೋಹಕ ಬಲೆಗಳನ್ನು ಕಟ್ಟಬೇಕು. ಒಂದುವೇಳೆ ಆ ಪರಿಸರದಲ್ಲಿ ಬಾಧೆ ನೀಡುವ ಹೂಜಿನೊಣಗಳ ಸಂಖ್ಯೆ ಹೆಚ್ಚಿದ್ದರೆ ಅವುಗಳು ನಿಯಂತ್ರಿತವಾಗುತ್ತವೆ. ಮಾವು ಕೊಯಾಗುವವರೆಗೂ ಈ ಬಲೆಗಳನ್ನು ತೋಟದಲ್ಲಿ ಕಟ್ಟಿರಬೇಕು. ಒಮ್ಮೆ ಬಲೆ ಕಟ್ಟಿದರೆ ಅವುಗಳು ದೀರ್ಘ‌ಕಾಲ ಬಾಳಿಕೆ ಬರುತ್ತವೆ. ಆದರೆ, ಅವುಗಳ ಒಳಗಿರುವ ಲಿಂಗಾಕರ್ಷಕ ಕೇಕ್‌ಗಳನ್ನು ನಿರ್ದಿಷ್ಟ ದಿನಗಳಿಗೊಮ್ಮೆ ಬದಲಾಯಿಸಿದರೆ ಸಾಕು ಎಂದು ತಜ್ಞರು ಅಭಿಪ್ರಾಯಪಡುತ್ತಾರೆ.
ಮಾಹಿತಿಗೆ  -99008 00033
–    ಕುಮಾರ ರೈತ

ಟಾಪ್ ನ್ಯೂಸ್

Shimoga; Congress – Statement against Muslims: Sumoto case against KS Eshwarappa

Shimoga; ಕಾಂಗ್ರೆಸ್-ಮುಸ್ಲೀಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ

Karkala: ತಿಂಗಳ ಹಿಂದೆ ಮೃತಪಟ್ಟಿದ್ದ ಪತಿ, ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿಯೂ ವಿದ್ಯುತ್ ಆಘಾತದಿಂದ ಮೃ*ತ್ಯು

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

priyanka upendra in life is beautiful movie

Priyanka Upendra: ಬ್ಯೂಟಿಫುಲ್‌ ಲೈಫ್‌ ನಲ್ಲಿ ಪ್ರಿಯಾಂಕಾ

Shimoga; Congress – Statement against Muslims: Sumoto case against KS Eshwarappa

Shimoga; ಕಾಂಗ್ರೆಸ್-ಮುಸ್ಲೀಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ

11-bantwala

Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು

8

Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ

7

Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.