ಸಮ್ಮೇಳನ ನಗರ ಸೌಂದರ್ಯಕ್ಕೆ 5 ಕೋಟಿ
Team Udayavani, Dec 3, 2018, 5:10 PM IST
ಧಾರವಾಡ: ನಗರದಲ್ಲಿ ಜ. 4,5 ಹಾಗೂ 6ರಂದು ನಡೆಯುವ ಅಖಿಲ ಭಾರತ 84ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಂಗವಾಗಿ ನಗರ ಸೌಂದರ್ಯಕ್ಕೆ ಆದ್ಯತೆ ನೀಡಲಿದ್ದು, ಹೆಚ್ಚುವರಿಯಾಗಿ ಐದು ಕೋಟಿ ಅನುದಾನ ನೀಡುವಂತೆ ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ಹೇಳಿದರು.
ಕೃಷಿ ವಿವಿ ಆವರಣಕ್ಕೆ ರವಿವಾರ ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮೇಳನ ಯಶಸ್ಸಿಗೆ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಕಸಾಪ ಪದಾಧಿಕಾರಿಗಳು ಸಮನ್ವಯದಿಂದ ಸೂಕ್ಷ್ಮ ವಿಚಾರಗಳನ್ನು ಸಹ ಮುನೋ°ಟದಿಂದ ಆಲೋಚಿಸಿ ಸಿದ್ಧತೆ ಮಾಡಿಕೊಳ್ಳಬೇಕು ಎಂದರು. ಶುಚಿತ್ವ, ಶೌಚಾಲಯ ನಿರ್ಮಾಣ, ನೀರು ಪೂರೈಕೆ, ವಿದ್ಯುದಲಂಕಾರ ಸಮರ್ಪಕವಾಗಿ ಇರಬೇಕು. ಗೃಹ ಕೈಗಾರಿಕೆಗಳು ಮತ್ತು ಸ್ವಸಹಾಯ ಸಂಘಗಳ ಉತ್ಪನ್ನಗಳ ಮಾರಾಟಕ್ಕೆ ಮಳಿಗೆ ನೀಡಬೇಕು. ಸಮ್ಮೇಳನ ಹಿನ್ನೆಲೆಯಲ್ಲಿ ಡಿ.25ರಿಂದ ಸ್ವಚ್ಛತಾ ಆಂದೋಲನ ಆರಂಭಿಸಬೇಕು ಎಂದು ಸೂಚಿಸಿದರು.
ಮುಖ್ಯ ವೇದಿಕೆ ನಿರ್ಮಾಣ ಸ್ಥಳ, ಮಾಧ್ಯಮ ಕೇಂದ್ರ, ಭೋಜನಾಂಗಣ, ಪುಸ್ತಕ, ವಸ್ತು ಪ್ರದರ್ಶನ ಮಳಿಗೆಗಳು, ರೈತರ ಜ್ಞಾನಾಭಿವೃದ್ಧಿ ಕೇಂದ್ರದ ಸಭಾಂಗಣ ಮತ್ತಿತರ ಸ್ಥಳಗಳಿಗೆ ಸಚಿವರು ಭೇಟಿ ನೀಡಿದರು. ಶಾಸಕರಾದ ಪ್ರಸಾದ ಅಬ್ಬಯ್ಯ, ಅರವಿಂದ ಬೆಲ್ಲದ, ಅಮೃತ ದೇಸಾಯಿ, ವಿಧಾನ ಪರಿಷತ್ ಮಾಜಿ ಸದಸ್ಯ ವೀರಣ್ಣ ಮತ್ತಿಕಟ್ಟಿ, ಜಿಲ್ಲಾಧಿಕಾರಿ ದೀಪಾ ಚೋಳನ್, ಜಿಪಂ ಸಿಇಒ ಡಾ| ಸತೀಶ ಬಿ.ಸಿ., ಹು-ಧಾ ಪೊಲೀಸ್ ಆಯುಕ್ತ ಎಂ.ಎನ್. ನಾಗರಾಜ, ಎಸ್ಪಿ ಜಿ.ಸಂಗೀತಾ, ಅಪರ ಜಿಲ್ಲಾಕಾರಿ ಇಬ್ರಾಹಿಂ ಮೈಗೂರ, ಮಹಾನಗರ ಪಾಲಿಕೆ ಆಯುಕ್ತ ಶಕೀಲ್ ಅಹ್ಮದ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.