7ರಂದು ಮೇಕೆದಾಟು ಸ್ಥಳ ಪರಿಶೀಲನೆಗೆ ಭೇಟಿ: ಡಿಕೆಶಿ
Team Udayavani, Dec 4, 2018, 6:00 AM IST
ಬೆಂಗಳೂರು: ಮೇಕೆದಾಟು ಯೋಜನೆಯ ವಿಸ್ತೃತ ವರದಿ ಸಿದಟಛಿಪಡಿಸಲು ಕೇಂದ್ರ ಜಲ ಆಯೋಗ ಅನುಮತಿ ನೀಡಿರುವುದರಿಂದ ಡಿ.7ರಂದು ಯೋಜನೆಯ ಸ್ಥಳ ಪರಿಶೀಲನೆಗೆ ಹೋಗುವುದಾಗಿ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಜಲ ಆಯೋಗ ಮೇಕೆದಾಟು ಯೋಜನೆಯ ವಿಸ್ತೃತ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿರುವುದರಿಂದ ಕೇಂದ್ರಕ್ಕೆ ವರದಿ ಸಲ್ಲಿಸುವ ಮೊದಲು ಸ್ಥಳ ಪರಿಶೀಲನೆ ನಡೆಸಲಾಗುವುದು. ಸ್ಥಳ ಪರಿಶೀಲನೆಗೆ ಅರಣ್ಯ ಇಲಾಖೆ ಅಧಿಕಾರಿಗಳೂ ಆಗಮಿಸಲಿದ್ದಾರೆ ಎಂದರು.
ಈಗಾಗಲೇ ಡಿಪಿಆರ್ ಸಿದ್ಧಪಡಿಸಲು ಬಜೆಟ್ನಲ್ಲಿ 5 ಕೋಟಿ ರೂ. ಮೀಸಲಿಡಲಾಗಿದೆ. ಸುಮಾರು 64 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಸಮಾನಾಂತರ ಜಲಾಶಯ ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಈ ಯೋಜನೆಯಿಂದ ಬೆಂಗಳೂರು ಹಾಗೂ ಸುತ್ತಲಿನ ನಗರಗಳ ಕುಡಿಯುವ ನೀರು ಹಾಗೂ ವಿದ್ಯುತ್ ಉತ್ಪಾದನೆಗೆ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಈ ಯೋಜನೆಯಿಂದ ತಮಿಳುನಾಡಿಗೆ ಶೇ.95ರಷ್ಟು ಅನುಕೂಲವಾಗಲಿದೆ. ಈ ಯೋಜನೆಯಲ್ಲಿ ಅಲ್ಪ ಪ್ರಮಾಣದಲ್ಲಿ ಖಾಸಗಿ ಜಮೀನು
ಮುಳುಗಡೆಯಾಗಲಿದ್ದು, ನನ್ನ ಕುಟುಂಬದ ಸ್ವಲ್ಪ ಜಮೀನು ಮುಳುಗಡೆಯಾಗುತ್ತದೆ.
ಜನರ ಅನುಕೂಲಕ್ಕಾಗಿ ಯೋಜನೆ ರಿಯಾಗುತ್ತಿರುವುದರಿಂದ ಏನೂ ಮಾಡಲಾಗುವುದಿಲ್ಲ ಎಂದು ಹೇಳಿದರು. ಡಿ.7ರಂದು ಮೇಕೆದಾಟು ಹಾಗೂ ಶಿವನ ಸಮುದ್ರ ನೋಡಿಕೊಂಡು ರಾತ್ರಿ ಕೆಆರ್ ಎಸ್ಗೆ ತೆರಳಲಾಗುವುದು. ಕೆಆರ್ಎಸ್ನಲ್ಲಿ ಡಿಸ್ನಿಲ್ಯಾಂಡ್ ಮಾದರಿಯ ಯೋಜನೆ ಅನುಷ್ಠಾನ ಮಾಡುವ ಕುರಿತು ಸ್ಥಳೀಯ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು, ಪ್ರವಾಸೋದ್ಯಮ ಸಚಿವರ ಜತೆ ಚರ್ಚಿಸಲಾಗುವುದು. ಡಿಸ್ನಿಲ್ಯಾಂಡ್ ನಿರ್ಮಾಣಕ್ಕೆ ಒಂದು ಸಮಿತಿ ರಚಿಸಲು ತೀರ್ಮಾನಿಸಲಾಗಿದೆ. ಆ ಸಮಿತಿಯಲ್ಲಿ ಮೈಸೂರು ರಾಜವಂಶಸ್ಥರು ಇರಲಿದ್ದಾರೆ. ಎಲ್ಲರ ಅಭಿಪ್ರಾಯಗಳನ್ನು ಪಡೆದು ಯೋಜನೆ ಆರಂಭಿಸಲಾಗುವುದು. ಈ ಯೋಜನೆಗೆ 296 ಎಕರೆ ಜಮೀನು ಗುರುತಿಸಲಾಗಿದೆ. ಕೆಆರ್ಎಸ್ನಲ್ಲಿ ಕಾವೇರಿ ಪ್ರತಿಮೆಯನ್ನೂ ನಿರ್ಮಿಸಲಾಗುವುದು. ಈ ಯೋಜನೆಯಿಂದ ಕೆಆರ್ಎಸ್ಗೆ ಯಾವುದೇ ರೀತಿಯ ಹಾನಿಯಾಗದಂತೆ ನೋಡಿಕೊಳ್ಳಲಾಗುವುದು. ಸಂಪೂರ್ಣ ಯೋಜನೆ ಖಾಸಗಿ ಸಹಭಾಗಿತ್ವದಲ್ಲಿ ಅನುಷ್ಠಾನಗೊಳ್ಳಲಿದೆ ಎಂದು ತಿಳಿಸಿದರು.
ಮೇಕೆದಾಟು ಯೋಜನೆಗೆ ಅವಕಾಶ ನೀಡಬಾರದೆಂದು ತಮಿಳುನಾಡು ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ನ್ಯಾಯಾಲಯದಿಂದ ನೋಟಿಸ್ ಬಂದಾಗ ಆ ಬಗ್ಗೆ ನ್ಯಾಯಾಲಯಕ್ಕೂ ಮನವರಿಕೆ ಮಾಡಿಕೊಡುತ್ತೇವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
MUST WATCH
ಹೊಸ ಸೇರ್ಪಡೆ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.