ಕಿಡ್ನಿ ಕಸಿಗೆ ತಕ್ಷಣ ಕ್ರಮಕ್ಕೆ ಹೈ ನಿರ್ದೇಶನ


Team Udayavani, Dec 4, 2018, 11:58 AM IST

highcourt.jpg

ಬೆಂಗಳೂರು: ಕಿಡ್ನಿ ಕಸಿಗೆ ಅನುಮತಿ ನೀಡುವಂತೆ ಕೋರಿ ಟೆಕ್ಕಿಯೊಬ್ಬರು ಸಲ್ಲಿಸಿರುವ ಮನವಿಗೆ ಸಂಬಂಧಿಸಿದಂತೆ ತಕ್ಷಣ ಕ್ರಮ ಜರುಗಿಸುವಂತೆ “ರಾಜ್ಯ ಮಾನವ ಅಂಗಾಂಗ ಕಸಿ ಅನುಮತಿ ಅಧಿಕಾರಯುತ ಸಮಿತಿ’ಗೆ ಹೈಕೋರ್ಟ್‌ ಸೋಮವಾರ ನಿರ್ದೇಶನ ನೀಡಿದೆ.

ಕಿಡ್ನಿ ಕಸಿ ಮಾಡಿಸಲು ತನಗೆ ಅನುಮತಿ ನೀಡಲು ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರು ಹಾಗೂ ಮಾನವ ಅಂಗಾಂಗ ಕಸಿ ಅನುಮತಿಗೆ ಅಧಿಕಾರಯುತ ಸಮಿತಿ ಮುಖ್ಯಸ್ಥರಿಗೆ ನಿರ್ದೇಶಿಸಬೇಕು.

ಅಲ್ಲದೇ ಕಿಡ್ನಿ ಕಸಿ ಮಾಡಲು ಅರ್ಜಿಯಲ್ಲಿ ಹೆಸರಿಸಲಾಗಿರುವ ನಗರದ ಖಾಸಗಿ ಆಸ್ಪತ್ರೆಗಳಿಗೆ ನಿರ್ದೇಶನ ನೀಡುವಂತೆ ಕೋರಿ ವೈಟ್‌ಫೀಲ್ಡ್‌ ನಿವಾಸಿ ಸಾಫ್ಟ್ವೇರ್‌ ಇಂಜಿನಿಯರ್‌ ಮಹಮ್ಮದ್‌ ಝೈದ್‌ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ನ್ಯಾ. ಬಿ. ವೀರಪ್ಪ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ನಡೆಸಿತು.

ವಿಚಾರಣೆ ನಡೆಸಿದ ನ್ಯಾಯಪೀಠ, ಅರ್ಜಿಗೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆ ಆಯುಕ್ತರು, ಮಾನವ ಅಂಗಾಂಗ ಕಸಿ ಅನುಮತಿ ಸಮಿತಿ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೊಳಿಸಿ, ವಿಕ್ಟೋರಿಯಾ ಆಸ್ಪತ್ರೆ ಸೇರಿದಂತೆ ಉಳಿದ ಪ್ರತಿವಾದಿ ಖಾಸಗಿ ಆಸ್ಪತ್ರೆಗಳಿಗೆ ತುರ್ತು ನೋಟಿಸ್‌ ಜಾರಿಗೆ ಆದೇಶಿಸಿತು.

ಅರ್ಜಿಯ ವಿಚಾರಣೆ ವೇಳೆ ಝೈದ್‌ ಪರ ವಕೀಲೆ ಅನುಚಂಗಪ್ಪ ವಾದಿಸಿ, ಅರ್ಜಿದಾರಿಗೆ ಕಿಡ್ನಿ ದಾನ ಮಾಡಲು ವ್ಯಕ್ತಿಯೊಬ್ಬರು ಮುಂದೆ ಬಂದಿದ್ದಾರೆ. ಆದರೆ, ಪ್ರತಿವಾದಿ ಆಸ್ಪತ್ರೆಗಳು ಮಾತ್ರ ಕಿಡ್ನಿ ಕಸಿ ಮಾಡುತ್ತಿಲ್ಲ. ಸಮಿತಿಯಿಂದ ಅನುಮತಿ ಹಾಗೂ ಕೋರ್ಟ್‌ನಿಂದ ಆದೇಶ ಪಡೆದು ತರುವಂತೆ ಸೂಚಿಸುತ್ತಿದ್ದಾರೆ ಎಂದು ದೂರಿದರು. 

ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಕ್ನಿಡಿ ಕಸಿ ಮಾಡಿಸಲು ಅನುಮತಿ ಕೋರಿ ಸಮಿತಿಗೆ ಅರ್ಜಿದಾರರು ಮನವಿ ಸಲ್ಲಿಸಬೇಕು. ಅದನ್ನು ಸಮಿತಿ ಕೂಡಲೇ ಪರಿಗಣಿಸಬೇಕು ಎಂದು ಸೂಚಿಸಿತು. ಅಲ್ಲದೇ ನೀವು ಒಬ್ಬ ವ್ಯಕ್ತಿಯ ಜೀವ ಕಾಪಾಡಬೇಕಿದೆ ಎಂದು ಸಮಿತಿ ಪರ ಹಾಜರಿದ್ದ ಸರ್ಕಾರಿ ವಕೀಲರಿಗೆ ಸಲಹೆ ನೀಡಿತು.

ಪ್ರಕರಣವೇನು?: ಮಹಮ್ಮದ್‌ ಝೈದ್‌ಗೆ 2012ರಲ್ಲಿ ಕಿಡ್ನಿ ಸಮಸ್ಯೆ ಕಾಣಿಸಿಕೊಂಡಿತ್ತು. 2013ರಲ್ಲಿ ಆತನಿಗೆ ತಾಯಿಯೇ ಕಿಡ್ನಿ ದಾನ ಮಾಡಿದ್ದರು. ಆದರೆ, 2016ರಲ್ಲಿ ಮತ್ತೆ ಕಿಡ್ನಿ ವೈಫ‌ಲ್ಯ ಕಾಣಿಸಿಕೊಂಡಿತ್ತು. ತೀವ್ರ ಶೋಧದ ನಂತರ ಸಂಬಂಧಿ ಮನ್ಸೂರ್‌ ಕಿಡ್ನಿ ದಾನ ಮಾಡಲು ಮುಂದೆ ಬಂದಿದ್ದರು.

ಆದರೆ, ಮನ್ಸೂರ್‌ ತಮಗೆ ಹತ್ತಿರದ ಸಂಬಂಧಿಯಲ್ಲ ಎಂಬ ಕಾರಣ ಮುಂದಿಟ್ಟು ಕಿಡ್ನಿ ಕಸಿ ಮಾಡಲು ಪ್ರತಿವಾದಿ ಖಾಸಗಿ ಆಸ್ಪತ್ರೆಗಳು ನಿರಾಕರಿಸುತ್ತಿವೆ. ಆದ್ದರಿಂದ ಕಿಡ್ನಿ ಕಸಿ ಮಾಡಿಸುವುದಕ್ಕೆ ಅನುಮತಿ ನೀಡಲು ರಾಜ್ಯ ಸರ್ಕಾರಕ್ಕೆ ಮತ್ತು ಕಿಡ್ನಿ ಕಸಿ ಮಾಡುವಂತೆ ಪ್ರತಿವಾದಿ ಆಸ್ಪತ್ರೆಗಳಿಗೆ ನಿರ್ದೇಶಿಸುವಂತೆ ಟಿಕ್ಕಿ ಝೈದ್‌ ಅರ್ಜಿಯಲ್ಲಿ ಕೋರಿದ್ದಾರೆ.

ಟಾಪ್ ನ್ಯೂಸ್

ಸಂಬಂಧಗಳಲ್ಲಿ ಮಾಯವಾದ ಸಹಿಷ್ಣುತೆ : ಸಹಿಷ್ಣು ಗುಣದಿಂದಲೇ ಬಾಂಧವ್ಯದ ಪ್ರಗತಿ

Relationships: ಸಂಬಂಧಗಳಲ್ಲಿ ಮಾಯವಾದ ಸಹಿಷ್ಣುತೆ : ಸಹಿಷ್ಣು ಗುಣದಿಂದಲೇ ಬಾಂಧವ್ಯದ ಪ್ರಗತಿ

Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ

Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ

Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು

Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು

Lakshmi Hebbalkar

Udupi: ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ ಹಗುರವಾಗಿ ಪರಿಗಣಿಸಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

Varanasi: ರೈಲು ನಿಲ್ದಾಣದ ಬಳಿ ಭಾರಿ ಅಗ್ನಿ ಅವಘಡ: 200ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

Varanasi: ರೈಲು ನಿಲ್ದಾಣದ ಬಳಿ ಭಾರಿ ಅಗ್ನಿ ಅವಘಡ: 200ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

5-renukaswamy

Renukaswamy Case: ಶೆಡ್‌ನ‌ಲ್ಲಿ ಕೊಲೆ ನಡೆದಿರುವುದಕ್ಕೆ ಸಾಕ್ಷಿ ಇಲ್ಲ: ವಕೀಲ

Bangladeshದಲ್ಲಿ ಮುಂದುವರಿದ ಸಂಘರ್ಷ, ಮೂರು ಹಿಂದೂ ದೇವಾಲಯ ಧ್ವಂಸ

Bangladeshದಲ್ಲಿ ಮುಂದುವರಿದ ಸಂಘರ್ಷ, ಮೂರು ಹಿಂದೂ ದೇವಾಲಯ ಧ್ವಂಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-bng

Bengaluru: ಪತ್ನಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ!

5-renukaswamy

Renukaswamy Case: ಶೆಡ್‌ನ‌ಲ್ಲಿ ಕೊಲೆ ನಡೆದಿರುವುದಕ್ಕೆ ಸಾಕ್ಷಿ ಇಲ್ಲ: ವಕೀಲ

4-bng

Bengaluru: ಒಂಟಿ ಮಹಿಳೆಯರನ್ನು ಟಾರ್ಗೆಟ್‌ ಮಾಡಿ ಸರಗಳ್ಳತನ

3-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ : 2 ವಿದ್ಯಾರ್ಥಿಗಳು ಸಾವು

2-bng-crime

Bengaluru Crime: ಅತಿಯಾಗಿ ಮೊಬೈಲ್‌ ಬಳಸಿದಕ್ಕೆ ಪ್ರೇಯಸಿ ಹತ್ಯೆ?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಸಂಬಂಧಗಳಲ್ಲಿ ಮಾಯವಾದ ಸಹಿಷ್ಣುತೆ : ಸಹಿಷ್ಣು ಗುಣದಿಂದಲೇ ಬಾಂಧವ್ಯದ ಪ್ರಗತಿ

Relationships: ಸಂಬಂಧಗಳಲ್ಲಿ ಮಾಯವಾದ ಸಹಿಷ್ಣುತೆ : ಸಹಿಷ್ಣು ಗುಣದಿಂದಲೇ ಬಾಂಧವ್ಯದ ಪ್ರಗತಿ

Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ

Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ

Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು

Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು

Lakshmi Hebbalkar

Udupi: ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ ಹಗುರವಾಗಿ ಪರಿಗಣಿಸಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

6-bng

Bengaluru: ಪತ್ನಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.