ಉಪಮೇಯರ್ ಅಭ್ಯರ್ಥಿ ಭದ್ರೇಗೌಡ?
Team Udayavani, Dec 4, 2018, 11:58 AM IST
ಬೆಂಗಳೂರು: ಉಪಮೇಯರ್ ಚುನಾವಣೆಗೆ ಮೈತ್ರಿ ಆಡಳಿತದ ಅಭ್ಯರ್ಥಿಯಾಗಿ ಜೆಡಿಎಸ್‌ನ ಭದ್ರೇಗೌಡ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದ್ದು, ಸ್ಥಾಯಿ ಸಮಿತಿಗಳ ಹಂಚಿಕೆ ವಿಚಾರ ಎರಡು ಪಕ್ಷಗಳ ವರಿಷ್ಠರಿಗೆ ತಲೆನೋವಾಗಿ ಪರಿಣಮಿಸಿದೆ.
ಬಿಬಿಎಂಪಿ 12 ಸ್ಥಾಯಿ ಸಮಿತಿ ಸದಸ್ಯರ ಆಯ್ಕೆ ಹಾಗೂ ಉಪಮೇಯರ್ ಸ್ಥಾನಕ್ಕೆ ಚುನಾವಣೆ ಬುಧವಾರ (ಡಿ.5) ನಡೆಯಲಿದ್ದು, ರಮೀಳಾ ಉಮಾಶಂಕರ್ ಅವರ ನಿಧನದಿಂದ ತೆರವಾದ ಉಪಮೇಯರ್ ಸ್ಥಾನಕ್ಕೆ ನಾಗಪುರ ವಾರ್ಡ್‌ನ ಭದ್ರೇಗೌಡ ಅವರ ಹೆಸರೇ ಅಂತಿಮವಾಗಿದೆ ಎನ್ನಲಾಗಿದೆ. ಆದರೆ, ಸ್ಥಾಯಿ ಸಮಿತಿಗಳ ಹಂಚಿಕೆ ವಿಚಾರದಲ್ಲಿ ಇನ್ನು ಹಗ್ಗ-ಜಗ್ಗಾಟ ಮುಂದುವರಿದಿದೆ.
ಬುಧವಾರ ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ 12 ಸ್ಥಾಯಿ ಸಮಿತಿಗಳಿಗೆ ತಲಾ 11 ಸದಸ್ಯರಂತೆ 132 ಸದಸ್ಯರ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಜತೆಗೆ ಉಪಮೇಯರ್ ಸ್ಥಾನಕ್ಕೂ ಚುನಾವಣೆ ನಡೆಯಲಿದ್ದು, ಉಪಮೇಯರ್ ಹಾಗೂ ಸ್ಥಾಯಿ ಸಮಿತಿಗಳಿಗೆ ಅಭ್ಯರ್ಥಿಗಳನ್ನು ಜೆಡಿಎಸ್ ಈಗಾಗಲೇ ಅಂತಿಮಗೊಳಿಸಿದರೂ ಅಧಿಕೃತವಾಗಿ ಘೋಷಿಸಿಲ್ಲ.
ಈ ನಡುವೆ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಹಾಗೂ ನಗರ ಯೋಜನೆ ಸ್ಥಾಯಿ ಸಮಿತಿಗಳಿಗಾಗಿ ಕಾಂಗ್ರೆಸ್, ಜೆಡಿಎಸ್ ಹಾಗೂ ಮೈತ್ರಿಗೆ ಬೆಂಬಲಿಸಿದ ಪಕ್ಷೇತರರು ಪಟ್ಟು ಹಿಡಿದಿದ್ದಾರೆ. ಆ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡರ ನಿವಾಸದಲ್ಲಿ ಸಮಿತಿ ಹಂಚಿಕೆ ಕುರಿತು ಕಾಂಗ್ರೆಸ್ ನಾಯಕರು ಸಭೆ ನಡೆಸಿದ್ದು, ಈ ಬಾರಿ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ತಮಗೆ ಬಿಟ್ಟುಕೊಡುವಂತೆ ಕೋರಿದ್ದಾರೆ ಎನ್ನಲಾಗಿದೆ.
ಸಮಿತಿಗಳ ಸಮಾನ ಹಂಚಿಕೆ: ಮೈತ್ರಿ ಆಡಳಿತದಲ್ಲಿ ಪ್ರಮುಖ ಪಾತ್ರವಹಿಸಿದ ಆರು ಮಂದಿ ಪಕ್ಷೇತರರ ಪೈಕಿ ನಾಲ್ವರಿಗೆ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ನೀಡಲು ನಿರ್ಧರಿಸಿದ್ದು, ಉಳಿದ 8 ಸಮಿತಿಗಳ ಪೈಕಿ ತಲಾ 4 ಸಮಿತಿಗಳಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಹಂಚಿಕೊಳ್ಳಲು ನಿರ್ಧರಿಸಿದೆ. ಆದರೆ, ಕಳೆದ ಬಾರಿ ಜೆಡಿಎಸ್ ಪಾಲಾಗಿದ್ದ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿಯನ್ನು ಈ ಬಾರಿ ಕಾಂಗ್ರೆಸ್ ಪಡೆಯುವ ಸಾಧ್ಯತೆಯಿದ್ದು, ನಗರ ಯೋಜನೆ ಸ್ಥಾಯಿ ಸಮಿತಿ ಜೆಡಿಎಸ್‌ಗೆ ಬಿಟ್ಟುಕೊಡುವ ಸಾಧ್ಯತೆಯಿದೆ.
ಪ್ರಮುಖ ಸಮಿತಿಗೆ ಪಕ್ಷೇತರರ ಪಟ್ಟು: ರಮೀಳಾ ಉಮಾಶಂಕರ್ ಅವರ ನಿಧನದಿಂದ ತೆರವಾದ ಉಪಮೇಯರ್ ಸ್ಥಾನವನ್ನು ತಮ್ಮಲ್ಲಿ ಒಬ್ಬರಿಗೆ ನೀಡುವಂತೆ ಪಕ್ಷೇತರರು ಹಿಂದೆ ಒತ್ತಾಯಿಸಿದ್ದರು. ಅದಕ್ಕೆ ಜೆಡಿಎಸ್ ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಇದೀಗ, ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಸೇರಿದಂತೆ ಪ್ರಮುಖ ಸಮಿತಿಗಳನ್ನು ನೀಡುವಂತೆ ಕಾಂಗ್ರೆಸ್ ನಾಯಕರ ದುಂಬಾಲು ಬಿದ್ದಿದ್ದಾರೆ.
ಕಾಂಗ್ರೆಸ್‌ನಲ್ಲಿ ಹೆಚ್ಚಿನ ಪೈಪೋಟಿ: ಕಾಂಗ್ರೆಸ್ ಪಾಲಿಗೆ ದೊರೆಯಲಿರುವ 4 ಸ್ಥಾಯಿ ಸಮಿತಿಗಳಿಗೆ ಕಾಂಗ್ರೆಸ್‌ನಲ್ಲಿ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಮೇಯರ್ ಸ್ಥಾನದ ಆಕಾಂಕ್ಷಿಗಳು ಹಾಗೂ ಹಿರಿಯ ಪಾಲಿಕೆ ಸದಸ್ಯರು ಸಮಿತಿ ಅಧ್ಯಕ್ಷ ಸ್ಥಾನ ಕೊಡಿಸುವಂತೆ ಆಯಾ ಕ್ಷೇತ್ರದ ಶಾಸಕರು ಹಾಗೂ ಸಂಸದರ ಹಿಂದೆ ಬಿದ್ದಿದ್ದಾರೆ. ಲಾವಣ್ಯ ಗಣೇಶ್, ಸೌಮ್ಯ ಶಿವಕುಮಾರ್, ಲತಾಕುವರ್, ಆಂಜನಪ್ಪ, ವೇಲು ನಾಯ್ಕರ್, ಜಾಕಿರ್ ಹುಸೇನ್, ಕೇಶವಮೂರ್ತಿ ಸೇರಿದಂತೆ ಹಲವರು ಪ್ರಬಲ ಆಕಾಂಕ್ಷಿಗಳಾಗಿದ್ದು, ಯಾರನ್ನು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಬೇಕೆಂಬುದು ವರಿಷ್ಠರಿಗೆ ತಲೆನೋವಾಗಿ ಪರಿಣಮಿಸಿದೆ.
ಕಣದಿಂದ ಬಿಜೆಪಿ ಹಿಂದಕ್ಕೆ?: ಮೇಯರ್ ಚುನಾವಣೆಯಲ್ಲಿ ಆಡಳಿತ ಚುಕ್ಕಾಣಿಗಾಗಿ ಆಪರೇಷನ್ ಕಮಲ ನಡೆಸಿದರಿಂದ ಬಿಜೆಪಿ ತೀವ್ರ ಮುಖಭಂಗ ಅನುಭವಿಸಿತ್ತು. ಆ ಹಿನ್ನೆಲೆಯಲ್ಲಿ ಡಿ.5ರಂದು ನಡೆಯುವ ಚುನಾವಣೆಯಲ್ಲಿ ಬಿಜೆಪಿಯಿಂದ ಅಭ್ಯರ್ಥಿ ಕಣಕ್ಕಿಳಿಯುವುದು ಅನುಮಾನವಾಗಿದೆ. ಚುನಾವಣೆಯಲ್ಲಿ ಒಟ್ಟು 260 ಮತದಾರರಿದ್ದು, 131 ಮ್ಯಾಜಿಕ್ ಸಂಖ್ಯೆಯಾಗಿದೆ. ಬಿಜೆಪಿಯು 122 ಮತದಾರರನ್ನು ಹೊಂದಿದ್ದರೆ, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಹಾಗೂ ಪಕ್ಷೇತರರ ಸದಸ್ಯರು ಸೇರಿ ಒಟ್ಟು ಮತದಾರರ ಸಂಖ್ಯೆ 138 ಆಗಿರುವುದರಿಂದ ಕಣದಿಂದ ಹಿಂದೆ ಸರಿಯಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ಪಕ್ಷಗಳ ಬಲಾಬಲ
ಬಿಜೆಪಿ: 122
ಕಾಂಗ್ರೆಸ್: 108
ಜೆಡಿಎಸ್: 22
ಪಕ್ಷೇತರರು: 08
ಒಟ್ಟು: 260
ಮ್ಯಾಜಿಕ್ ಸಂಖ್ಯೆ: 131
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.