ಸರ್ವಋತುವಿಗೂ ಹುಬ್ಬಳಿ ಏರ್‌ಪೋರ್ಟ್‌ ಸಜ್ಜು


Team Udayavani, Dec 5, 2018, 4:50 PM IST

5-december-21.gif

ಹುಬ್ಬಳ್ಳಿ: ವಿಮಾನಗಳು ದಟ್ಟ ಮಂಜು, ರಾತ್ರಿ ವೇಳೆ ಹಾಗೂ ಹವಾಮಾನ ವೈಪರೀತ್ಯ ಸೇರಿದಂತೆ ಎಲ್ಲ ಬಗೆಯ ಹವಾಮಾನ ಸಂದರ್ಭದಲ್ಲೂ ಸುಗಮವಾಗಿ ತಮ್ಮ ಕಾರ್ಯಾಚರಣೆ ನಡೆಸಲು ಅಗತ್ಯವಾದ ಇನ್‌ ಸ್ಟ್ರೆಮೆಂಟ್‌ ಲ್ಯಾಂಡಿಂಗ್‌ ಸಿಸ್ಟಮ್‌ (ಐಎಲ್‌ಎಸ್‌) ಅಳವಡಿಕೆ ಕಾರ್ಯ ನಗರದ ವಿಮಾನ ನಿಲ್ದಾಣದಲ್ಲಿ ಪ್ರಗತಿಯಲ್ಲಿದೆ.

ವಿದೇಶದಿಂದ ಐಎಲ್‌ಎಸ್‌ ಉಪಕರಣ ಈಗಾಗಲೇ ನಗರಕ್ಕೆ ಬಂದಿದ್ದು, ಅಳವಡಿಕೆ ಕಾರ್ಯ ನಡೆಯುತ್ತಿದೆ. ಐಎಲ್‌ ಎಸ್‌ ಸ್ಥಾಪನೆಗೆ ಅವಶ್ಯವಾದ ಸಿವಿಲ್‌ ಹಾಗೂ ಎಲೆಕ್ಟ್ರಿಕಲ್‌ ಕಾಮಗಾರಿ ಈಗಾಗಲೇ ಪರಿಪೂರ್ಣಗೊಂಡಿದೆ. ಇನ್ನು ಕೆಲವೇ ತಿಂಗಳಲ್ಲಿ ಐಎಲ್‌ಎಸ್‌ ಅನುಷ್ಠಾನ ಕಾಮಗಾರಿ ಪೂರ್ಣಗೊಳ್ಳಲಿದ್ದು, ನಂತರ ಎಲ್ಲ ಬಗೆಯ ಹವಾಮಾನ ಸಂದರ್ಭದಲ್ಲೂ ಹುಬ್ಬಳ್ಳಿಯಿಂದ ವಿಮಾನಗಳು ಹಾರಾಟ ನಡೆಸಬಹುದಾಗಿದೆ.

ವಿಮಾನ ನಿಲ್ದಾಣವನ್ನು ಅಂದಾಜು 141 ಕೋಟಿ ರೂ. ವೆಚ್ಚದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದಂತೆ ಅಭಿವೃದ್ಧಿಪಡಿಸಲಾಗಿದೆ. ರನ್‌ ವೇ ವಿಸ್ತರಣೆ, ಆವರಣ ಗೋಡೆ ನಿರ್ಮಾಣ, ನೂತನ ಟರ್ಮಿನಲ್‌ ಕಟ್ಟಡ, ಹೊಸ ಎಟಿಸಿ ಟಾವರ್‌, ಪಾವರ್‌ ಹೌಸ್‌, ಅಗ್ನಿಶಾಮಕ ದಳದ ವಾಹನಗಳ ನಿಲುಗಡೆಗೆ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಕಟ್ಟಡ, ಭದ್ರತಾ ವೀಕ್ಷಕ ಟವರ್‌, ಸ್ಫೋಟಕ ಪತ್ತೆ ಉಪಕರಣ ಸೇರಿದಂತೆ ಹಲವಾರು ಸೌಲಭ್ಯಗಳಿರುವ ಕಟ್ಟಡಗಳನ್ನು ನಿರ್ಮಿಸಲಾಗಿದೆ. ಹಳೇ ಟರ್ಮಿನಲ್‌ ಕಟ್ಟಡವನ್ನು ಕಾರ್ಗೋ ವಿಮಾನ (ಸರಕು ಸಾಗಣೆ) ನಿಲ್ದಾಣವನ್ನಾಗಿ ಪರಿವರ್ತಿಸುವ ಕಾಮಗಾರಿ ಭರದಿಂದ ಸಾಗಿವೆ.

ಪ್ರಮುಖ ನಗರಗಳಿಗೆ ಹಾರಾಟ: ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಈಗಾಗಲೇ ಏರ್‌ ಇಂಡಿಯಾ, ಸ್ಪೈಸ್ ಜೆಟ್‌, ಇಂಡಿಗೋ ಕಂಪನಿಗಳು ಮುಂಬಯಿ, ಬೆಂಗಳೂರು, ಹೈದರಾಬಾದ್‌, ಚೆನೈ, ಅಹ್ಮದಾಬಾದ್‌, ಕೊಚ್ಚಿ, ಗೋವಾಗೆ ಎಟಿಆರ್‌ ಒಳಗೊಂಡಂತೆ ಬೋಯಿಂಗ್‌ ವಿಮಾನಗಳ ವಿಮಾನಯಾನ ಸೇವೆ ಒದಗಿಸುತ್ತಿವೆ. ಜೊತೆಗೆ ಸಂಜಯ ಘೋಡಾವತ್‌ ಒಡೆತನದ ಸ್ಟಾರ್‌ ಏರ್‌ ಕಂಪನಿ ಕೂಡ ಉಡಾನ್‌ ಯೋಜನೆಯಡಿ ತಿರುಪತಿ ಸೇರಿದಂತೆ ಪುಣೆ, ಹಿಂಡೋನ್‌ (ದೆಹಲಿ), ಬೆಂಗಳೂರಿಗೆ ನೇರ ವಿಮಾನಯಾನ ಸೇವೆ ಒದಗಿಸಲು ಯೋಜಿಸಿದೆ. ತಿರುಪತಿಗೆ ತನ್ನ ವಿಮಾನಯಾನ ಸೇವೆ ಒದಗಿಸುವ ನಿಟ್ಟಿನಲ್ಲಿ ಬುಕ್ಕಿಂಗ್‌ ಕೂಡ ಆರಂಭಿಸಿದೆ. ಇನ್ನುಳಿದ ಪ್ರದೇಶಗಳಿಗೆ ವಿಮಾನಯಾನ ಆರಂಭಿಸಲು ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ)ದ ಅನುಮತಿ ನಿರೀಕ್ಷೆಯಲ್ಲಿದೆ.

ಪ್ರಯಾಣಿಕರ ಸಂಖ್ಯೆ ಹೆಚ್ಚಳ: ನಗರದಿಂದ ವಿವಿಧ ಕಂಪನಿಗಳ ವಿಮಾನಯಾನ ಸೇವೆಗೆ ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ವಿಮಾನಯಾನಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಅಕ್ಟೋಬರ್‌ ತಿಂಗಳೊಂದರಲ್ಲೇ 48 ಸಾವಿರ ಪ್ರಯಾಣಿಕರು ಹುಬ್ಬಳ್ಳಿಯಿಂದ ವಿವಿಧೆಡೆ ಪ್ರಯಾಣ ಮಾಡಿದ್ದಾರೆ. ನಗರದಿಂದ ಪ್ರತಿದಿನ 16 ವಿಮಾನಗಳು ಈಗ ಕಾರ್ಯಾಚರಣೆ ಮಾಡುತ್ತಿವೆ. ಐಎಲ್‌ಎಸ್‌ ಅಳವಡಿಕೆ ನಂತರ ವಿದೇಶಗಳಿಗೂ ವಿಮಾನಗಳು ಹಾರುವ ಆಶಾಭಾವ ಚಿಗುರೊಡೆದಿದೆ. 

ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಸರ್ವಋತುಮಾನಗಳಲ್ಲೂ ವಿಮಾನಗಳು ಸುಗಮವಾಗಿ ಹಾರಾಟ ನಡೆಸುವಂತಾಗಲು ಐಎಲ್‌ಎಸ್‌ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದೆ. ಕೆಲ ತಿಂಗಳಲ್ಲಿಯೇ ಇದರ ಅನುಷ್ಠಾನ ಪೂರ್ಣಗೊಳ್ಳಲಿದೆ.
.ಅಹಿಲ್ಯಾ ಕಾಕೋಡಿಕರ,
ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕಿ 

ಶಿವಶಂಕರ ಕಂಠಿ

ಟಾಪ್ ನ್ಯೂಸ್

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.