ಅಪಘಾತ: ಮಂಗಳೂರು ಮೂಲದ ನಿವೃತ್ತ ಹಿರಿಯ ಅಧಿಕಾರಿ ಸಾವು
Team Udayavani, Dec 6, 2018, 10:51 AM IST
ಮಂಗಳೂರು: ಲೋಕೋಪಯೋಗಿ ಇಲಾಖೆಯ ನಿವೃತ್ತ ಕಾರ್ಯದರ್ಶಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ನಿವೃತ್ತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಮಂಗಳೂರಿನ ಬೊನಿಫಾಸ್ ಗೋಡ್ಫಿÅ ವಿನ್ಸ್ಟನ್ ರಸ್ಕಿನ್ಹಾ (72) ಅವರು ಬೆಂಗಳೂರಿನಲ್ಲಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮೃತರು ಪತ್ನಿ, ಮೂವರು ಪುತ್ರರು ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ. ನ. 28ರಂದು ಅಪಘಾತ ಸಂಭವಿಸಿದ್ದು, ಗಂಭೀರ ಗಾಯಗೊಂಡಿದ್ದ ಅವರು ಡಿ. 4 ರಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಲೋಕೋಪಯೋಗಿ ಇಲಾಖೆ ಅಧಿಕಾರಿಯಾಗಿ ಮಂಗಳೂರು ಮತ್ತು ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸಿದ್ದ ಅವರು ಬಳಿಕ ರಾಜ್ಯ ಸರಕಾರದ (ಪಿಡಬ್ಲ್ಯುಡಿ) ಕಾರ್ಯದರ್ಶಿಯಾಗಿದ್ದರು. ಬಿಬಿಎಂಪಿಯಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದರು. ನಿವೃತ್ತಿ ಬಳಿಕ ಮಂಗಳೂರಿನ ಪಾಂಡೇ ಶ್ವರದಲ್ಲಿ ನೆಲೆಸಿದ್ದ ಅವರು ಕಾರ್ಯ ನಿಮಿತ್ತ ಬೆಂಗಳೂರಿಗೆ ತೆರಳಿದ್ದರು. ನ. 28ರಂದು ರಾತ್ರಿ 9ಕ್ಕೆ ರಸ್ತೆ ಬದಿ ನಿಂತಿದ್ದಾಗ ವೇಗವಾಗಿ ಬಂದ ಬೈಕ್ ಢಿಕ್ಕಿ ಹೊಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
China Badminton: ಚಿರಾಗ್- ಸಾತ್ವಿಕ್ ಸೆಮಿಫೈನಲ್ಗೆ
Kasragodu: ನರ್ಸಿಂಗ್ ವಿದ್ಯಾರ್ಥಿನಿ ಸಾವು : ಕ್ರೈಂ ಬ್ರ್ಯಾಂಚ್ ತನಿಖೆ
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.