ಸಾವಯವ ಕೃಷಿ ಪದ್ಧತಿಗೆ ಹೆಚ್ಚಿನ ಆದ್ಯತೆ ನೀಡಿ: ಮಸಗಿ
Team Udayavani, Dec 6, 2018, 11:15 AM IST
ದಾವಣಗೆರೆ: ಫಲವತ್ತತೆಗೆ ಮಾರಕವಾಗಿರುವ ರಾಸಾಯನಿಕಗಳ ಬದಲು ಸಾವಯವ ಪದ್ಧತಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಬೆಂಗಳೂರಿನ ವಾಟರ್ ಲಿಟರಸಿ ಫೌಂಡೇಶನ್ ಅಧ್ಯಕ್ಷ ಅಯ್ಯಪ್ಪ ಮಸಗಿ ತಿಳಿಸಿದ್ದಾರೆ. ತರಳಬಾಳು ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆಯುತ್ತಿರುವ ಕೃಷಿ ತಂತ್ರಜ್ಞಾನ ಮಾಹಿತಿ ಸಪ್ತಾಹದಲ್ಲಿ ಬುಧವಾರ ವಿಶ್ವ ಮಣ್ಣು ದಿನಾಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಅವರು, ದೇಹಕ್ಕೆ ಸಾರಾಯಿಯಂತೆ ಫಲವತ್ತಾದ ಮಣ್ಣಿಗೆ ರಾಸಾಯನಿಕ ಗೊಬ್ಬರ ಸಹ ಅಪಾಯಕಾರಿ. ರಾಸಾಯನಿಕ ಬಳಕೆ ಕಡಿಮೆ ಮಾಡಿ, ಸಾವಯವ ಪದ್ಧತಿಗೆ ಆದ್ಯತೆ ನೀಡಬೇಕು ಎಂದರು.
ಹೆಚ್ಚಿನ ಇಳುವರಿ ಪಡೆಯುವ ಲೆಕ್ಕಾಚಾರದಲ್ಲಿ ಅತಿಯಾಗಿಯೇ ಬಳಸುವ ರಾಸಾಯನಿಕ ಗೊಬ್ಬರದ ಕೃಷಿ ಎಂದರೆ ಅದು ಸಾಯುವ ಕೃಷಿ ಪದ್ಧತಿ ಎಂದೇ ವಿಶ್ಲೇಷಣೆ ಮಾಡಬಹುದು. ಗೊಬ್ಬರ ಒಳಗೊಂಡಂತೆ ಇತರೆ ರಾಸಾಯನಿಕಗಳು ಮಣ್ಣಿನಲ್ಲಿ ಬಹು ಅಮೂಲ್ಯವಾಗಿರುವ ಸೂಕ್ಷ್ಮ ಜೀವಿಗಳ ಸಂಕುಲವನ್ನೇ ನಾಶ ಮಾಡುತ್ತವೆ. ಸೂಕ್ಷ್ಮ ಜೀವಿಗಳ ಸಾಮೂಹಿಕ ನಾಶದಿಂದ ಮಣ್ಣಿನ ಸತ್ವ ಕಳೆದು ದಿನ ಕಳೆದಂತೆ ಇಳುವರಿ ಪ್ರಮಾಣವು ಕಡಿಮೆ ಮಾಡುತ್ತದೆ ಎಂದು ಎಚ್ಚರಿಸಿದರು.
ದೇಶ ಆಹಾರ ಉತ್ಪಾದನಾ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸಬೇಕು ಎಂಬ ಉದ್ದೇಶದಿಂದ 1962 ರಲ್ಲಿ ಪ್ರಾರಂಭಿಸಿದ ರಾಸಾಯನಿಕ ಕೃಷಿ ಪದ್ಧತಿಯ ಫಲವಾಗಿ ಆರಂಭದಲ್ಲಿ ಒಳ್ಳೆಯ ಫಲಿತಾಂಶ ದೊರೆಯಿತು. ಕಾಲಾನುಕ್ರಮೇಣ ಕೃಷಿ ಭೂಮಿ ಹಾಳಾಗಲಾರಂಭಿಸಿತು. ಈಗ ಸಂಪೂರ್ಣ ಹಾಳಾಗಿರುವ ಮಣ್ಣಿನಲ್ಲಿ ಬೆಳೆದ ಬೆಳೆಗಳ ಬಳಕೆ ಮಾಡುವುದರಿಂದ ಅನಾರೋಗ್ಯ ಹೆಚ್ಚಾಗಿ ಕಂಡು ಬರುತ್ತಿದೆ. ರಾಸಾಯನಿಕ ಗೊಬ್ಬರದ ಕೃಷಿ ಪದ್ಧತಿಯು ಸಾಯುವ ಪದ್ಧತಿ ಎಂದಾದರೆ ಸಾವಯವ ಕೃಷಿ ಪದ್ಧತಿ ಭೂಮಿಯ ಒಡೆಯನನ್ನು ಸಾಹುಕಾರರನ್ನಾಗಿ ಮಾಡುವ ಪದ್ಧತಿ ಎಂದರ್ಥ ಎಂದು ತಿಳಿಸಿದರು.
ಶಾಸಕ ಎಸ್.ಎ. ರವೀಂದ್ರನಾಥ್ ಮಾತನಾಡಿ, ಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಭತ್ತ ಬೆಳೆಯುವುದಕ್ಕೆ ಅತೀ ಕಡಿಮೆ ಪ್ರಮಾಣದಲ್ಲಿ ನೀರು ಬಳಕೆ ಮಾಡಲಾಗುತ್ತದೆ. ರಾಸಾಯನಿಕ ಗೊಬ್ಬರ ಬಳಕೆ ಕಡಿಮೆ ಮಾಡಿ, ಸಾವಯವ ಪದ್ಧತಿಗೆ ಹೆಚ್ಚಿನ ಗಮನ ನೀಡಬೇಕು ಎಂದು ತಿಳಿಸಿದರು.
ತರಳಬಾಳು ಗ್ರಾಮೀಣಾಭಿವೃದ್ಧಿ ಸಂಸ್ಥೆ ನಿರ್ದೇಶಕ ಎಂ.ಕೆ. ರೇಣುಕಾರ್ಯ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಜಿ. ಹನುಮಂತಪ್ಪ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶರಣಪ್ಪ ಬಿ. ಮುದಗಲ್, ತೋಟಗಾರಿಕಾ ಇಲಾಖೆ ಉಪ ನಿರ್ದೇಶಕ ಟಿ.ಆರ್. ವೇದಮೂರ್ತಿ, ಆರ್‌ಸಿಎಫ್ ಮಾರುಕಟ್ಟೆ ವ್ಯವಸ್ಥಾಪಕ ಸತೀಶ್ ರಾಘೋಡೆ, ಕೇಂದ್ರದ ಮುಖ್ಯಸ್ಥ ಡಾ| ಟಿ.ಎನ್. ದೇವರಾಜ್ ಇತರರು ಇದ್ದರು. ಜೆ. ರಘುರಾಜ್ ಸ್ವಾಗತಿಸಿದರು. ಎಂ.ಜಿ. ಬಸವನಗೌಡ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ
ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.