ನರೇಗಾ ಹೆಚ್ಚುವರಿ ದಿನದ ಪ್ರಚಾರ ಮಾಡಿ
Team Udayavani, Dec 6, 2018, 11:32 AM IST
ಬೀದರ: ಜಿಲ್ಲೆಯ ಪೀಡಿತ ತಾಲೂಕುಗಳಲ್ಲಿ ನರೇಗಾ ಯೋಜನೆಯಡಿ 50 ದಿನ ಹೆಚ್ಚುವರಿ ಕೆಲಸ ಒದಗಿಸಲು ಅವಕಾಶವಿದೆ. ಈ ಬಗ್ಗೆ ಜಿಲ್ಲಾದ್ಯಂತ ಪ್ರಚಾರ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಾಂತೇಶ ಬೀಳಗಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಪಂ ಕಚೇರಿ ಸಭಾಂಗಣದಲ್ಲಿ ನಡೆದ ತಾಪಂ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಮಳೆ ಕೊರತೆಯಿಂದಾಗಿ ಬರ ಪರಿಸ್ಥಿತಿ ಎದುರಾಗಿದೆ. ಸರ್ಕಾರ ಬೀದರ, ಹುಮನಾಬಾದ, ಔರಾದ ಮತ್ತು ಬಸವಕಲ್ಯಾಣ ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಿದೆ. ಬರದಿಂದಾಗಿ ಜನರು ಉದ್ಯೋಗ ಅರಸಿಕೊಂಡು ಬೇರೆಡೆಗೆ ಗುಳೆ ಹೋಗುವುದನ್ನು ತಪ್ಪಿಸಬೇಕಿದೆ. ನರೇಗಾ ಯೋಜನೆಯಡಿ ಬರಪೀಡಿತ ತಾಲೂಕುಗಳಲ್ಲಿ ಪ್ರತಿ ಕುಟುಂಬ 150 ದಿನ ಕೂಲಿ ಕೆಲಸ ನಿರ್ವಹಿಸಲು ಅವಕಾಶವಿದ್ದು, ಈ ಯೋಜನೆಯನ್ನು ಗ್ರಾಮೀಣ ಭಾಗದ ಪ್ರತಿಯೊಂದು ಕುಟುಂಬಗಳಿಗೆ ತಲುಪಿಸಬೇಕು ಎಂದು ಹೇಳಿದರು. ಯೋಜನೆ ಪ್ರಚಾರಕ್ಕಾಗಿ ತಾಲೂಕಿಗೊಂದು ಟಾಟಾ ಎಸಿ ವಾಹನಗಳನ್ನು ಬಾಡಿಗೆಗೆ ಪಡೆದು ವಾಹನದ ಸುತ್ತಲು ಉದ್ಯೋಗ ಖಾತ್ರಿ ಯೋಜನೆ ಮತ್ತು ಸ್ವತ್ಛ ಭಾರತ ಮಿಷನ್ ಯೋಜನೆ ಬ್ಯಾನರ್‌ಗಳನ್ನು ಸ್ಪಷ್ಟವಾಗಿ ಕಾಣುವಂತೆ ಅಂಟಿಸಬೇಕು. ಈ ವಾಹನವು ವಾರಕ್ಕೆ 3 ದಿನ ತಾಲೂಕಿನ ಪ್ರತಿಯೊಂದು ಹಳ್ಳಿಗಳಲ್ಲಿ ಸಂಚರಿಸಿ ಜಾಗೃತಿ ಮೂಡಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಗ್ರಾಮೀಣ ಪ್ರದೇಶದ ಸರ್ವತೋಮುಖ ಅಬಿವೃದ್ಧಿಗೆ ಜನಪರ ಕಾಯ್ದೆಯಾಗಿದೆ. ಗ್ರಾಮೀಣ ಪ್ರದೇಶದಲ್ಲಿರುವ ಕೂಲಿ ಕಾರ್ಮಿಕರಿಗೆ ಪ್ರತಿ ಕುಟುಂಬಕ್ಕೆ 100 ದಿನ ಕೆಲಸ ನೀಡುವ ಉತ್ತಮ ಯೋಜನೆಯಾಗಿದೆ. ಈ
ಯೋಜನೆಯಡಿ ಕೂಲಿ ಪಡೆಯುವುದು ಕಾರ್ಮಿಕರ ಹಕ್ಕಾಗಿದೆ. ಈ ಕುರಿತು ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಮತ್ತು ಸಿಬ್ಬಂದಿ ಜನರಲ್ಲಿ ತಿಳಿವಳಿಕೆ ಮೂಡಿಸಬೇಕು ಎಂದು ಹೇಳಿದರು.
ಯೋಜನೆಯಡಿ ಗ್ರಾಮೀಣ ಪ್ರದೇಶದಲ್ಲಿರುವ ಕೆರೆ ಹೂಳೆತ್ತುವ ಕೆಲಸಕ್ಕೆ ಮೊದಲ ಆದ್ಯತೆ ನೀಡಬೇಕು. ಸ್ವತ್ಛ ಭಾರತ ಮಿಷನ್ ಯೋಜನೆಯಡಿ ಶೌಚಾಲಯ ನಿರ್ಮಿಸುವ ಗುರಿ ಪೂರ್ಣಗೊಳಿಸಬೇಕು. ಈಗಾಗಲೇ ನಿರ್ಮಿಸಿರುವ ಶೌಚಾಲಯಗಳು ಸಮರ್ಪಕವಾಗಿ ಬಳಕೆ ಮಾಡುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
2018-19ನೇ ಸಾಲಿನಲ್ಲಿ ಗ್ರಾಪಂಗಳಿಗೆ ವೈಯಕ್ತಿಕ ಮತ್ತು ಸಮುದಾಯ ಕಾಮಗಾರಿಗಳ ಗುಚ್ಚಕ್ಕೆ ಅನುಮೋದನೆ ನೀಡಲಾಗಿದೆ. ವೈಯಕ್ತಿಕ ಕಾಮಗಾರಿಗಳಡಿ ಕುರಿ, ಮೇಕೆ, ಕೋಳಿ, ದನದ ಕೊಟ್ಟಿಗೆ, ಹಂದಿ ಶೆಡ್ ನಿರ್ಮಾಣ, ಭೂ ಅಭಿವೃದ್ಧಿ, ಭೂ ಸಮತಟ್ಟು, ಬದು ನಿರ್ಮಾಣ, ಕೃಷಿ ಹೊಂಡ,
ತೋಟಗಾರಿಕೆ, ಕೃಷಿ, ರೇಷ್ಮೆ ಇಲಾಖೆ ಅನುಮತಿಸಿದ ಕಾಮಗಾರಿಗಳು, ರೈತರ ಜಮೀನುಗಳಲ್ಲಿ ಗಿಡಗಳ ನೆಡುವಿಕೆ, ಎರೆಹುಳು ಗೊಬ್ಬರ ತೊಟ್ಟಿ ನಿರ್ಮಾಣ, ಹಿಪ್ಪು ನೇರಳೆ ತೋಟ, ಮರಗಡ್ಡೆ ಹಿಪ್ಪು ನೇರಳೆ ಅಭಿವೃದ್ದಿ ಕಾಮಗಾರಿಗಳು ಹಾಗೂ ಸಮುದಾಯ ಕಾಮಗಾರಿಗಳಡಿ ಕೆರೆ, ಕಟ್ಟೆ ಹೂಳೆತ್ತುವುದು, ಆಟದ ಮೈದಾನ, ಸ್ಮಶಾನ ಅಭಿವೃದ್ಧಿ, ರೈತಕಣ, ಕೃಷಿ ಹೊಂಡ, ಮಲ್ಟಿ ಆರ್ಚ್ ಚೆಕ್ ಡ್ಯಾಂ, ಗ್ರಾಮೀಣ ಗೋದಾಮು, ಅಂಗನವಾಡಿ ಕಟ್ಟಡ, ಗ್ರಾಮೀಣ ಉದ್ಯಾನವನ, ನಮ್ಮ ಹೊಲ ನಮ್ಮದಾರಿ, ಸಂತೆ ಕಟ್ಟಡ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಬಹುದಾಗಿದೆ ಎಂದು ವಿವರಿಸಿದರು.
ನರೇಗಾ ಯೋಜನೆಯಡಿ ಉದ್ಯೋಗ ಪಡೆಯಲು ಗ್ರಾಮೀಣ ಜನರು ಗ್ರಾಪಂಗಳಿಗೆ ಭೇಟಿ ನೀಡಿ ಅರ್ಜಿ ನಮೂನೆ-6 ಸಲ್ಲಿಸಬೇಕು ಅಥವಾ ಮೌಖೀಕವಾಗಿ ತಿಳಿಸುವ ಮೂಲಕ ಉದ್ಯೋಗ ಪಡೆಯಬಹುದು ಎಂದು ಹೇಳಿದರು.
ಜಿಪಂ ಉಪ ಕಾರ್ಯದರ್ಶಿಗಳಾದ ಕಿಶೋರಕುಮಾರ ದುಬೆ, ಸ್ವತ್ಛ ಭಾರತ ಮಿಷನ್ ಹೆಚ್ಚುವರಿ ಜಿಲ್ಲಾ ನೋಡಲ್ ಅಧಿಕಾರಿ ಡಾ| ಗೌತಮ ಅರಳಿ, ಎಲ್ಲ ತಾಪಂ ಕಾರ್ಯನಿರ್ವಹಣಾಧಿಕಾರಿಗಳು, ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಸಹಾಯವಾಣಿ ಕೇಂದ್ರ ಆರಂಭ
ಬೀದರ: ಬೀದರ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ತಾಪಂ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರ ಆರಂಭಿಸಲಾಗಿದೆ. ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುವ ಸಂಭವವಿದ್ದು, ತಾಲೂಕಿನ ಸಾರ್ವಜನಿಕರು, ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಲು ತಾಲೂಕು ಕೇಂದ್ರದಲ್ಲಿ ಸಹಾಯವಾಣಿ ಕೇಂದ್ರ ತೆರೆದು ಸಿಬ್ಬಂದಿಗಳನ್ನು ನಿಯೋಜಿಸಿ ನೋಂದಣಿಯಾಗುವ ಸಮಸ್ಯೆಗಳನ್ನು ಆದ್ಯತೆ ಮೇರೆಗೆ ಪರಿಹರಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಅದರಂತೆ ಬೀದರ ತಾಪಂ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರ ತೆರೆಯಲಾಗಿದೆ. ಕುಡಿಯುವ ನೀರಿಗೆ ಸಮಸ್ಯೆ ಇದ್ದಲ್ಲಿ, ಉದ್ಭವಿಸಿದಲ್ಲಿ ಸಾರ್ವಜನಿಕರು ಸಹಾಯವಾಣಿ ಕೇಂದ್ರದ ದೂರವಾಣಿ ಸಂಖ್ಯೆ:08482-233154ಗೆ ಕರೆ ಮಾಡಿ ದೂರು ನೋಂದಾಯಿಸಬಹುದು ಎಂದು ಬೀದರ ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.