ಸ್ವಚ್ಛ, ಸುಂದರ ನಗರ ನಿರ್ಮಾಣಕ್ಕೆ ಆದ್ಯತೆ
Team Udayavani, Dec 6, 2018, 11:43 AM IST
ಬೆಂಗಳೂರು: ಸ್ವಚ್ಛ ಹಾಗೂ ಸುಂದರ ಬೆಂಗಳೂರು ನಿರ್ಮಾಣ ನನ್ನ ಆದ್ಯತೆ. ಆ ನಿಟ್ಟಿನಲ್ಲಿ ನಗರದ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ನೂತನ ಉಪಮೇಯರ್ ವಿ.ಭದ್ರೇಗೌಡ ತಿಳಿಸಿದರು.
ಉಪಮೇಯರ್ ಆಗಿ ಅವಿರೋಧವಾಗಿ ಆಯ್ಕೆಯಾದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಬೆಂಗಳೂರಿನ ಟ್ರಾಫಿಕ್, ಕಸದ ಸಮಸ್ಯೆಗಳ ನಿವಾರಣೆಗೆ ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ಮೇಯರ್ ಜತೆ ಸೇರಿ ಸಮಗ್ರ ಬೆಂಗಳೂರು ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಹೇಳಿದರು. ಈ ವೇಳೆ ಪತ್ರಕರ್ತರು ಕೇಳಿದ ಕೆಲ ಪ್ರಶ್ನೆಗಳಿಗೆ ಅವರು ಉತ್ತರಿಸಿದರು.
* ಸಾರ್ವಜನಿಕರ ಸಮಸ್ಯೆಗಳಿಗೆ ಹೇಗೆ ಸ್ಪಂದಿಸುತ್ತೀರ?
ಜನರ ಸಮಸ್ಯೆಗಳ ನಿವಾರಣೆಗೆ ನಾನು ಸದಾ ಸಿದ್ಧ. ನನ್ನ ವಾಟ್ಸ್‌ಆ್ಯಪ್ ಸಂಖ್ಯೆಯನ್ನು ಜನರಿಗೆ ನೀಡುತ್ತೇನೆ. ನಗರದ ಜನ ಎದುರಿಸುತ್ತಿರುವ ಸಮಸ್ಯೆಗಳನ್ನು ವಾಟ್ಸ್‌ಆ್ಯಪ್ ಮೂಲಕ ತಿಳಿಸಿದರೆ ಪರಿಹಾರಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ.
* ನೀವು ಲೆಕ್ಕಪರಿಶೋಧನೆ ವರದಿ ಮಂಡಿಸುತ್ತೀರಾ?
ಮೊದಲ ಅವಧಿಯಲ್ಲಿ ಉಪಮೇಯರ್ ಆಗಿದ್ದ ಹೇಮಲತಾ ಗೋಪಾಲಯ್ಯ ಅವರು ಲೆಕ್ಕಪರಿಶೋಧನಾ ವರದಿ ಮಂಡಿಸಿದ್ದರು. ಆದರೆ, ಅದರಲ್ಲಿ ಕೆಲವು ಲೋಪಗಳಿದ್ದರಿಂದ ಅಂಗೀಕರಿಸಿರಲಿಲ್ಲ. ಮೇಯರ್ ಹಾಗೂ ಆಯುಕ್ತರೊಂದಿಗೆ ಸಾಧಕ-ಬಾಧಕಗಳ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು.
* ಎಂಟು ತಿಂಗಳಲ್ಲಿ ನಗರದ ಜನರು ನಿಮ್ಮಿಂದ ಏನನ್ನು ನಿರೀಕ್ಷಿಸಬಹುದು?
ಸರ್ಕಾರ ಹಾಗೂ ಪಾಲಿಕೆಯ ಅನುದಾನದಲ್ಲಿ ಈಗಾಗಲೇ ಹಲವಾರು ಯೋಜನೆಗಳು ಪ್ರಗತಿಯಲ್ಲಿವೆ. ಅವುಗಳನ್ನು ಶೀಘ್ರ ಪೂರ್ಣಗೊಳಿಸಲು ಕ್ರಮಕೈಗೊಳ್ಳಲಾಗುವುದು. ಜತೆಗೆ 110 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡಲಾಗುವುದು. ಜತೆಗೆ 198 ವಾರ್ಡ್‌ಗಳಲ್ಲಿ ಸುರಕ್ಷತೆ ದೃಷ್ಟಿಯಿಂದ ಸಿಸಿ ಕ್ಯಾಮೆರಾ ಅಳವಡಿಸಲು ಕ್ರಮಕೈಗೊಳ್ಳಲಾಗುವುದು.
* ತೆರಿಗೆ ಸಂಗ್ರಹ ಹೆಚ್ಚಿಸಲು ನಿಮ್ಮ ಮುಂದಿರುವ ಯೋಜನೆಗಳೇನು?
ಈಗಾಗಲೇ ಮೇಯರ್ ಗಂಗಾಂಬಿಕೆಯವರು ಆಸ್ತಿ ತೆರಿಗೆ ಸಂಗ್ರಹದ ಕುರಿತು ವಲಯವಾರು ಸಭೆಗಳನ್ನು ನಡೆಸುತ್ತಿದ್ದು, ಅವರೊಂದಿಗೆ ಆಸ್ತಿ ತೆರಿಗೆ ಸಂಗ್ರಹ ಹೆಚ್ಚಳಕ್ಕೆ ಕ್ರಮಕೈಗೊಳ್ಳಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ
Bengaluru: ಸೆಂಟ್ರಿಂಗ್ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು
Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು
Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್ ಸಿಬಂದಿ ಪರಾರಿ: ದೂರು
Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್ ಬೆಳ್ಳುಳ್ಳಿ ವಶಕ್ಕೆ
Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ
YouTuber: 40 ಗಂಟೆಗಳ ಕಾಲ ಖ್ಯಾತ ಯುಟ್ಯೂಬರ್ ಅಂಕುಶ್”ಡಿಜಿಟಲ್ ಅರೆಸ್ಟ್’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.