ಚೊಂಬು ಹಿಡಿದು ಗ್ರಾಮಸ್ಥರ ಪ್ರತಿಭಟನೆ
Team Udayavani, Dec 6, 2018, 5:17 PM IST
ಬಾಗಲಕೋಟೆ: ಶೌಚಾಲಯ ನಿರ್ಮಾಣದ ಸಹಾಯಧನ ನೀಡುವಂತೆ ಆಗ್ರಹಿಸಿ ಮಹಿಳೆಯರು ಕೈಯಲ್ಲಿ ಚೊಂಬು ಹಿಡಿದು ಡಿಸಿ ಕಚೇರಿ ಎದುರು ವಿನೂತನವಾಗಿ ಪ್ರತಿಭಟನೆ ನಡೆಸಿದರು.
ಮುಧೋಳ ತಾಲೂಕಿನ ಬುದ್ನಿ (ಪಿಡಿ) ಗ್ರಾಮದ ಮಹಿಳೆಯರು, ಪುರುಷರು ಜಿಲ್ಲಾಡಳಿತ ಭವನಕ್ಕೆ ಆಗಮಿಸಿ, ತಾವು ನಿರ್ಮಿಸಿದ ವೈಯಕ್ತಿಕ ಶೌಚಾಲಯದ ಸಹಾಯಧನ ಈ ವರೆಗೆ ನೀಡಿಲ್ಲ. ಕೂಡಲೇ ಸಹಾಯಧನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು. ಅಲ್ಲದೇ ಮನೆಯಿಂದಲೇ ಬುತ್ತಿ ಮಾಡಿಕೊಂಡು ಬಂದಿದ್ದ ಜನರು, ಜಿಲ್ಲಾಡಳಿತ ಭವನದ ಎದುರೇ ಬುತ್ತಿ ಬಿಚ್ಚಿಕೊಂಡು ಊಟ ಮಾಡಿದರು.
ಗ್ರಾಮದ ಸರ್ವೇ ನಂಬರ್‌ಗಳ ಅತಂತ್ರದಿಂದ ಸರ್ಕಾರದ ಶೌಚಗೃಹ ನಿರ್ಮಾಣದ ಸಹಾಯ ಧನ ಸರಿಯಾಗಿ ಸಿಗುತ್ತಿಲ್ಲ. ತೋಟಗಾರಿಕೆ, ರೇಷ್ಮೆ, ಕೃಷಿ ಮುಂತಾದ ಇಲಾಖೆ ಯೋಜನೆಗಳು ಸಮರ್ಪಕವಾಗಿ ದೊರೆಯುತ್ತಿಲ್ಲ. ಜಿಲ್ಲಾಡಳಿತ ಬುದ್ನಿ ಪಿ.ಡಿ. ಗ್ರಾಮದ ಸರ್ವೇ ನಂಬರ್‌ಗಳನ್ನು ಕೆಸರಕೊಪ್ಪ ಗ್ರಾಪಂ ವ್ಯಾಪ್ತಿಗೆ ಸೇರಿಸಬೇಕು. ಗ್ರಾಮಕ್ಕೆ ಮೂಲ ಸೌಕರ್ಯ ಒದಗಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆ ವೇಳೆ ಮಾತನಾಡಿದ ಗ್ರಾಮಸ್ಥರು, ಮುಧೋಳ ತಾಲೂಕಿನ ಮಹಾಲಿಂಗಪುರ ಸಮೀಪದ ಬುದ್ನಿ ಪಿ.ಡಿ ಗ್ರಾಮವು ಹಲವು ಮೂಲಭೂತ ಸಮಸ್ಯೆ ಎದುರಿಸುತ್ತಿದೆ. ಸಂಬಂಧಪಟ್ಟ ಇಲಾಖೆ ಅಧಿ ಕಾರಿಗಳಿಗೆ ಮತ್ತು ಜಿಲ್ಲಾಧಿಕಾರಿಗಳ ಹಲವು ಬಾರಿ ಮನವಿ ಸಲ್ಲಿಸಿದರೂ ಸ್ಪಂದಿಸಿಲ್ಲ ಎಂದು ಆರೋಪಿಸಿದರು.
ಬುದ್ನಿ ಪಿ.ಡಿ ಗ್ರಾಮದ ಎರಡು ಸರ್ವೇ ನಂಬರ್ ಗಳು ಮಹಾಲಿಂಗಪುರ ಪಟ್ಟಣದ ವ್ಯಾಪ್ತಿಗೆ ಬರುತ್ತವೆ. ಉಳಿದ 127 ಸರ್ವೇ ನಂಬರ್‌ಗಳು ಪಟ್ಟಣದ ವ್ಯಾಪ್ತಿಗೆ ಬರುವುದಿಲ್ಲ. ಈ ನಂಬರ್‌ಗಳು ಕೆಸರಕೊಪ್ಪ ಗ್ರಾಮದ ವ್ಯಾಪ್ತಿಗೂ ಬರುವುದಿಲ್ಲ. ಗ್ರಾಮವು ಅತಂತ್ರ ಸ್ಥಿತಿಯಲ್ಲಿದೆ. ಗ್ರಾಮದ ಗೋಳು ಕೇಳ್ಳೋರ್ಯಾರು ಎಂದು ದೂರಿದರು.
ಗ್ರಾಮಸ್ಥರು ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಿಗೆ ಪತ್ರ ಬರೆದು ಗ್ರಾಮದ 127 ಸರ್ವೇ ನಂಬರ್‌ಗಳು ಕೆಸರಕೊಪ್ಪ ಗ್ರಾಪಂ ವ್ಯಾಪ್ತಿಗೆ ಸೇರ್ಪಡೆಗೊಳಿಸಬೇಕು ಎಂದು ಮನವಿ ಮಾಡಲಾಗಿತ್ತು. ನಿರ್ದೇಶಕರು ಜಿಲ್ಲಾಡಳಿತಕ್ಕೆ ಆದೇಶಿಸಿ 11 ತಿಂಗಳು ಕಳೆದರೂ ಜಿಲ್ಲಾಡಳಿತ ಇದುವರೆಗೂ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಎಸ್.ವಿ. ಮೇಟಿ, ವಿಷ್ಣು ಮಾನಕರ, ಕರೆಪ್ಪ ಪೂಜೇರಿ, ಚನ್ನಪ್ಪ ಕಡಾರಿ, ಆರ್.ಬಿ. ಪಾಟೀಲ, ರೇಣುಕಾ ಯರಗುದ್ರಿ, ನೀಲವ್ವ ಮುಧೋಳ, ಯಲ್ಲವ್ವ ಶೇಗುಣಸಿ ಇತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.