ಚಿತ್ರಮಂದಿರದಲ್ಲಿ ಮುಂದಿನ ಬದಲಾವಣೆ


Team Udayavani, Dec 7, 2018, 6:00 AM IST

d-74.jpg

ಹೀಗಂತ, ಕೆಲ ಚಿತ್ರಗಳು ಪೋಸ್ಟರ್‌ ಹಾಕಿ ಪತ್ರಿಕೆಗಳಲ್ಲಿ ಜಾಹಿರಾತು ಕೊಡುವುದನ್ನು ಎಲ್ಲರೂ ಗಮನಿಸಿರುತ್ತಾರೆ. ಈಗ ಅದೇ ಹೆಸರನ್ನಿಟ್ಟುಕೊಂಡು ಈ ವಾರ ಚಿತ್ರ ಬಿಡುಗಡೆಯಾಗುತ್ತಿದೆ. ಈ “ಮುಂದಿನ ಬದಲಾವಣೆ’ ಚಿತ್ರಕ್ಕೆ ಪ್ರವೀಣ್‌ ಭೂಷಣ್‌ ನಿರ್ದೇಶಕರು. ಅಷ್ಟೇ ಅಲ್ಲ, ಹೀರೋ ಕೂಡ ಆಗಿದ್ದಾರೆ. ಜೊತೆಗೆ ಕಥೆ ಬರೆದು ಐದು ಹಾಡುಗಳಿಗೆ ಸಾಹಿತ್ಯವನ್ನೂ ರಚಿಸಿದ್ದಾರೆ. ಚಿತ್ರದ ಶೀರ್ಷಿಕೆಯೇ ಹೇಳುವಂತೆ, ಇದೊಂದು ಚಿತ್ರಮಂದಿರದ ಸುತ್ತ ನಡೆಯುವ ಕಥೆ. ಒಂದು ಥಿಯೇಟರ್‌ ಇಟ್ಟುಕೊಂಡು ಏನೆಲ್ಲಾ ಕಥೆ ಹೆಣೆಯಲಾಗಿದೆ ಎಂಬ ಕುತೂಹಲವಿದ್ದರೆ, ಜನ “ಮುಂದಿನ ಬದಲಾವಣೆ’ ಬಯಸಿ ಹೋಗಬಹುದು. ಶೇ.60 ರಷ್ಟು ಭಾಗ ಚಿತ್ರಮಂದಿರದಲ್ಲಿ ಕಥೆ ಸಾಗಲಿದೆ. ಹಾಗಾಗಿ, ಚಿತ್ರಕ್ಕೆ “ಮುಂದಿನ ಬದಲಾವಣೆ’ ಎಂಬ ಶೀರ್ಷಿಕೆ ಇಡಲಾಗಿದೆ ಎಂಬುದು ನಿರ್ದೇಶಕರ ಮಾತು. ಇನ್ನು, ಬೆಂಗಳೂರಿನ ಎಚ್‌ಎಂಟಿ ಚಿತ್ರಮಂದಿರದಲ್ಲಿ ಚಿತ್ರೀಕರಣಗೊಂಡಿದೆ. ಉಳಿದಂತೆ ತುಮಕೂರು, ದೇವರಾಯನದುರ್ಗ, ಚಿಕ್ಕನಾಯಕನಹಳ್ಳಿಯಲ್ಲಿ ಚಿತ್ರೀಕರಿಸಲಾಗಿದೆ. ಇಲ್ಲಿ ಕಥೆಗಿಂತ ಮನರಂಜನೆ ಮುಖ್ಯ ಎಂದು ಅರಿತಿರುವ ನಿರ್ದೇಶಕರು, ಅದಕ್ಕೆ ಹೆಚ್ಚು ಒತ್ತು ನೀಡಿದ್ದಾರಂತೆ.

ಕಥೆ ಬಗ್ಗೆ ಹೇಳುವುದಾದರೆ, ಒಂದು ಕಾಲೇಜು ಹುಡುಗರ ಗುಂಪು, ಚಿತ್ರ ನೋಡಲು ಚಿತ್ರಮಂದಿರಕ್ಕೆ ಹೋದಾಗ, ಅಲ್ಲಿ ಒಂದಷ್ಟು ಘಟನೆಗಳು ನಡೆಯುತ್ತವೆ. ಅಷ್ಟೇ ಅಲ್ಲ, ನಾಯಕ ತನ್ನ ಗೆಳೆಯರ ಜೊತೆ ಕಾಲೇಜ್‌ಗೆ ಬಂಕ್‌ ಮಾಡಿ, ಚಿತ್ರಮಂದಿರಕ್ಕೆ ಹೋದಾಗ ಅಲ್ಲಿ, ಹಳೆಯ ಪ್ರೇಯಸಿಯ ದರ್ಶನವಾಗುತ್ತೆ. ಅಲ್ಲೊಂದು ಕಥೆ ಬಿಚ್ಚಿಕೊಂಡು ಫ್ಯಾ$Éಶ್‌ಬ್ಯಾಕ್‌ಗೆ ಕರೆದೊಯ್ಯುತ್ತೆ. ಆಮೇಲೆ ಏನೆಲ್ಲಾ ಆಗುತ್ತೆ ಎಂಬುದು ಕಥೆ. ಇನ್ನು, ಇಲ್ಲಿರುವ ಪ್ರತಿ ಪಾತ್ರಕ್ಕೂ ಒಂದೊಂದು ಹಿನ್ನೆಲೆಯನ್ನು ಕಟ್ಟಿಕೊಡಲಾಗಿದೆಯಂತೆ.

ಚಿತ್ರದಲ್ಲಿ ಸಂಗೀತಾ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಚಿತ್ರದಲಿ ಕಾವ್ಯಾಗೌಡ, ಮಾಲಾಶ್ರೀ, ಅಶ್ವಿ‌ನಿರಾವ್‌, ಆರ್ಯನ್‌ ಸೇರಿದಂತೆ ಹಲವರು ನಟಿಸಿದ್ದಾರೆ. ಕಾರ್ತಿಕ್‌ವೆಂಕಟೇಶ್‌ ಸಂಗೀತ ನೀಡಿದರೆ, ಕೋಟೇಶ್ವರ್‌ ಅವರ ಛಾಯಾಗ್ರಹಣವಿದೆ. ಇನ್ನು, ಸಹೋದರನಿಗಾಗಿ ಫ‌ಣಿಭೂಷಣ್‌ ಚಿತ್ರವನ್ನು ನಿರ್ಮಿಸಿದ್ದಾರೆ.

ಟಾಪ್ ನ್ಯೂಸ್

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

priyanka upendra in life is beautiful movie

Priyanka Upendra: ಬ್ಯೂಟಿಫುಲ್‌ ಲೈಫ್‌ ನಲ್ಲಿ ಪ್ರಿಯಾಂಕಾ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

1-kanchi

Kanchi swamiji; ದೇವಸ್ಥಾನಗಳ ಭೂಮಿ ದೇವಸ್ಥಾನಗಳಿಗೇ ಇರಲಿ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.