ಬಿಜೆಪಿಗೆ ಸಂಸದೆ ಫುಲೆ ರಾಜೀನಾಮೆ
Team Udayavani, Dec 7, 2018, 6:00 AM IST
ಲಕ್ನೋ: ಇತ್ತೀಚೆಗಷ್ಟೇ ಪಕ್ಷದ ವಿರುದ್ಧ ಮಾತನಾಡಿ ಇರುಸು ಮುರುಸು ಉಂಟುಮಾಡಿದ್ದ ಉತ್ತರಪ್ರದೇಶದ ಬಹ್ರೈಚ್‌ನ ಬಿಜೆಪಿ ಸಂಸದೆ ಸಾವಿತ್ರಿ ಬಾಯಿ ಫುಲೆ ಅವರು ಗುರುವಾರ ಪಕ್ಷಕ್ಕೆ ಏಕಾಏಕಿ ರಾಜೀನಾಮೆ ನೀಡಿದ್ದಾರೆ. ಲಕ್ನೋದಲ್ಲಿ ಅವರು ಈ ಘೋಷಣೆ ಮಾಡಿದ್ದು, ಪಕ್ಷಕ್ಕೆ ಮಾತ್ರ ರಾಜೀನಾಮೆ ನೀಡುತ್ತಿದ್ದೇನೆ. ಅವಧಿ ಪೂರ್ಣಗೊಳ್ಳುವವರೆಗೆ ಲೋಕಸಭೆ ಸದಸ್ಯೆಯಾಗಿ ಮುಂದುವರಿಯುತ್ತೇನೆ ಎಂದಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಫುಲೆ ಅವರು ಬಿಜೆಪಿ ವಿರುದ್ಧ ಹರಿಹಾಯ್ದಿದ್ದು, ಸಂವಿಧಾನ ಶಿಲ್ಪಿ ಅಂಬೇಡ್ಕರ್‌ರ ಪರಿ ನಿರ್ವಾಣ ದಿನದಂದೇ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಬಿಜೆಪಿಯು ಸಮಾಜವನ್ನು ವಿಭಜಿಸುವ ಕೆಲಸ ಮಾಡುತ್ತಿದೆ. ಪ್ರತಿಮೆ, ಮಂದಿರ ನಿರ್ಮಾಣಕ್ಕಾಗಿ ಸುಖಾ ಸುಮ್ಮನೆ ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ. ದೇಶದ ಚೌಕಿದಾರನ ಕಣ್ಣ ಮುಂದೆಯೇ ಸಂಪನ್ಮೂಲಗಳನ್ನು ಲೂಟಿ ಮಾಡಲಾಗುತ್ತಿದೆ. ಹಿಂದೂ- ಮುಸ್ಲಿಂ, ಭಾರತ – ಪಾಕಿಸ್ತಾನದ ಹೆಸರಲ್ಲಿ ದ್ವೇಷ ಹರಡುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಪಕ್ಷದ ನಾಯಕರು ಸಂವಿಧಾನ ವಿರೋಧಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಬಿಜೆಪಿಯು ಸಂವಿಧಾನದ ಬದಲಿಗೆ ಮನುಸ್ಮತಿ ಆಧಾರದಲ್ಲಿ ದೇಶ ವನ್ನು ಮುನ್ನಡೆಸಲು ಚಿಂತಿಸಿದಂತಿದೆ ಎಂದಿದ್ದಾರೆ ಫುಲೆ. ಇದೇ ವೇಳೆ, ಡಿ.23ರಿಂದ ದಲಿತರ ಹಕ್ಕುಗಳಿಗಾಗಿ ಹೋರಾಟ ಆರಂಭಿಸುತ್ತೇನೆ ಎಂದಿದ್ದಾರೆ.
ಫುಲೆ ಅವರ ರಾಜೀನಾಮೆಗೆ ಪ್ರತಿಕ್ರಿಯಿಸಿರುವ ಬಿಜೆಪಿ ವಕ್ತಾರ ಹರಿಶ್ಚಂದ್ರ ಶ್ರೀ ವಾಸ್ತವ, ಫುಲೆ ಅವರು ಬಹ್ರೈಚ್‌ನ ಜನರ ಆಶೋತ್ತರಗಳನ್ನು ಈಡೇರಿಸಿಲ್ಲ, ತಮ್ಮ ವೈಫಲ್ಯಗಳನ್ನು ಮುಚ್ಚಿಡುವ ಸಲುವಾಗಿ ಪಕ್ಷದ ವಿರುದ್ಧ ರೇಗಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Girl Trapped: 24 ಗಂಟೆಗಳ ಕಾಲ 540 ಅಡಿ ಆಳದ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಯುವತಿ ಮೃತ್ಯು
Hunger Strike: ಹದಗೆಟ್ಟ ಅರೋಗ್ಯ… ಪ್ರಶಾಂತ್ ಕಿಶೋರ್ ಆಸ್ಪತ್ರೆಗೆ ದಾಖಲು
Delhi Election 2025: ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP
Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Maha Kumbh Mela 2025: 144 ವರ್ಷಗಳಿಗೊಮ್ಮೆ ಮಹಾಕುಂಭ ಮೇಳ- ಇದರ ಹಿಂದಿದೆ ರೋಚಕ ಸಂಗತಿ!
Dharmasthala: ಭಾರತೀಯ ಆಧ್ಯಾತ್ಮಿಕ ತವರೂರು ಶ್ರೀ ಕ್ಷೇತ್ರ ಧರ್ಮಸ್ಥಳ: ಜಗದೀಪ್ ಧನ್‌ಕರ್
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
Girl Trapped: 24 ಗಂಟೆಗಳ ಕಾಲ 540 ಅಡಿ ಆಳದ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಯುವತಿ ಮೃತ್ಯು
Dharmasthala ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.