ರಾಜಸ್ಥಾನ ಚುನಾವಣೆ:ಫತೇಪುರ ಸಿಕಾರ್‌ನಲ್ಲಿ ಹಠಾತ್ ಭುಗಿಲೆದ್ದ ಹಿಂಸೆ
Team Udayavani, Dec 7, 2018, 3:49 PM IST
ಜೈಪುರ : ಶಾಂತ ರೀತಿಯಲ್ಲಿ ಸಾಗುತ್ತಿದ್ದ ರಾಜಸ್ಥಾನ ವಿಧಾನಸಭಾ ಚುನಾವಣೆ ಮಧ್ಯಾಹ್ನದ ವೇಳೆಗೆ ಹಠಾತ್ ಹಿಂಸೆಯನ್ನು ಕಂಡಿದೆ.
ಫತೇಪುರದ ಸಿಕಾರ್ ನಲ್ಲಿ ಮತದಾನ ನಡೆಯುತ್ತಿದ್ದ ಸುಭಾಷ್ ಸ್ಕೂಲ್‌ನಲ್ಲಿ ಇದ್ದಕ್ಕಿದ್ದಂತೆಯೇ ಹಿಂಸೆ ಸಂಭವಿಸಿತು. ಉದ್ರಿಕ್ತ ಜನರು ವಾಹನಗಳಿಗೆ ಬೆಂಕಿ ಹಚ್ಚಿ ಸೊತ್ತುಗಳನ್ನು ಧ್ವಂಸಗೊಳಿಸಿದರು.
ಮಧ್ಯಾಹ್ನ 3 ಗಂಟೆಯ ಬಳಿಕ ನಡೆದ ಈ ಘಟನೆಯ ಮಾಹಿತಿ ಪಡೆದ ಹೆಚ್ಚುವರಿ ಭದ್ರತಾ ಸಿಬಂದಿಗಳು ಸ್ಥಳಕ್ಕೆ ಧಾವಿಸಿ ಬಂದು ದುಷ್ಕರ್ಮಿಗಳನ್ನು ವಶಕ್ಕೆ ತೆಗೆದುಕೊಂಡರು.
ಈ ಹಠಾತ್ ಹಿಂಸೆ, ಗಲಭೆಯಿಂದಾಗಿ ಸುಮಾರು 30 ನಿಮಿಷಗಳ ಕಾಲ ಮತದಾನವನ್ನು ಅಮಾನತುಗೊಳಿಸಲಾಯಿತು.
ಹಿಂಸೆ ಸ್ಫೋಟಗೊಳ್ಳಲು ಕಾರಣವೇನೆಂದು ತತ್‌ಕ್ಷಣಕ್ಕೆ ಗೊತ್ತಾಗಿಲ್ಲ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು ಮತದಾನ ಮತ್ತೆ ಮುಂದುವರಿದಿದೆ. ಹೆಚ್ಚಿನ ಭದ್ರತಾ ಸಿಬಂದಿಗಳು ಇಲ್ಲಿ ಕರ್ತವ್ಯ ನಿರತರಾಗಿದ್ದಾರೆ.
ಮಧ್ಯಾಹ್ನ 1 ಗಂಟೆಯ ವರೆಗಿನ ಅವಧಿಯಲ್ಲಿ ಶೇ.41.53 ಮತದಾನ ನಡೆದಿರುವುದು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Google Map: ಗೂಗಲ್ ಮ್ಯಾಪ್ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
MUST WATCH
ಹೊಸ ಸೇರ್ಪಡೆ
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Teertharoopa Tandeyavarige: ತೀರ್ಥರೂಪರ ಜೊತೆ ರಚನಾ
Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.