ಆಕ್ಷೇಪಾರ್ಹ ಸಂದೇಶ ಪತ್ತೆಗೆ ಕೃತಕ ಬುದ್ಧಿಮತ್ತೆ
Team Udayavani, Dec 8, 2018, 6:00 AM IST
ನವದೆಹಲಿ: ಟ್ವಿಟರ್, ಫೇಸ್ಬುಕ್ ಹಾಗೂ ವಾಟ್ಸ್ಆ್ಯಪ್ನಂತಹ ಅಪ್ಲಿಕೇಶನ್ಗಳು ಕೃತಕ ಬುದ್ಧಿಮತ್ತೆ ಆಧರಿತ ಪರಿಕರಗಳನ್ನು ಬಳಸಿ ಆಕ್ಷೇಪಾರ್ಹ ಸಂದೇಶ, ಚಿತ್ರಗಳು ಹಾಗೂ ವೀಡಿಯೋಗಳನ್ನು ಕಂಡುಕೊಳ್ಳಲಿವೆ ಎಂದು ಗೃಹ ಸಚಿವಾಲಯ ಹೇಳಿದೆ.
ಸುಳ್ಳು ಸುದ್ದಿಯನ್ನು ಹರಡುವುದು ತಿಳಿದುಬಂದರೆ ಅವರ ಹೆಸರನ್ನು ಬಹಿರಂಗಗೊಳಿಸಲಾಗುತ್ತದೆ. ಇದರನ್ನು ಸಾಮಾಜಿಕ ಮಾಧ್ಯಮ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ನಡೆಸಿದ ಮಾತುಕತೆ ಯಲ್ಲಿ ಖಚಿತಪಡಿಸಲಾಗಿದೆ ಎಂದು ಸಚಿವಾಲಯ ವಿವರಣೆ ನೀಡಿದೆ. ಇತ್ತೀಚೆಗೆ ಗೃಹ ಸಚಿವಾಲಯದ ಕಾರ್ಯದರ್ಶಿ ರಾಜೀವ್ ಗೌಬಾ ನೇತೃತ್ವದ ತಂಡವು ಸಾಮಾಜಿಕ ಮಾಧ್ಯಮ ತಾಣಗಳ ಪ್ರತಿ ನಿಧಿಗಳ ಜೊತೆಗೆ ಮಾತುಕತೆ ನಡೆಸಿತ್ತು. ಆಕ್ಷೇಪಾರ್ಹ ಕಂಟೆಂಟ್ ಗಳನ್ನು ಕೃತಕ ಬುದ್ಧಿಮತ್ತೆ ಆಧರಿಸಿದ ಪರಿಕರಗಳು ಸ್ವಯಂ ಚಾಲಿತವಾಗಿ ಅಳಿಸಿಹಾಕಲಿವೆ. ಅಷ್ಟೇ ಅಲ್ಲ, ಕೇಂದ್ರ ಸರ್ಕಾ ರದ ವಿನಂತಿಗೆ ಈ ಜಾಲತಾಣಗಳು ಪ್ರತಿಕ್ರಿಯೆ ನೀಡುವ ಸಮಯ ಕೂಡ ಕಡಿಮೆಯಾಗಿದೆ. ಆದರೆ ಕೇಂದ್ರ ಸರ್ಕಾರವು ಸೂಚಿಸಿ ದಂತೆ ನಿರ್ದಿಷ್ಟ ಕಂಟೆಂಟ್ನ ಮೂಲವನ್ನು ಹುಡುಕಿ ಅದನ್ನು ಯಾರು ಮೊದಲು ಕಳುಹಿಸಿದ್ದಾರೆ ಎಂಬುದನ್ನು ಪತ್ತೆ ಮಾಡುವುದಕ್ಕೆ ಇನ್ನೂ ಸಾಮಾಜಿಕ ಮಾಧ್ಯಮ ತಾಣಗಳು ಒಪ್ಪಿಗೆ ನೀಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ, ಏನು ಮಾರ್ಗಸೂಚಿ ಇಳಿದೆ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
MUST WATCH
ಹೊಸ ಸೇರ್ಪಡೆ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ, ಏನು ಮಾರ್ಗಸೂಚಿ ಇಳಿದೆ ಮಾಹಿತಿ
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.