ಮೈಸೂರು ರೇಷ್ಮೆ ಸೀರೆ ಮಾರಾಟ ಮೇಳಕ್ಕೆ ಚಾಲನೆ
Team Udayavani, Dec 8, 2018, 5:05 PM IST
ಧಾರವಾಡ: ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ (ಕೆಎಸ್‌ಐಸಿ) ಪಾರಂಪರಿಕ ಉತ್ಪನ್ನವಾದ ಮೈಸೂರ್ ಸಿಲ್ಕ್ ಸೀರೆಗಳಿಗೆ ಹೆಸರುವಾಸಿ ಆಗಿದ್ದು, ಗುಣಮಟ್ಟ ಮತ್ತು ಮೌಲ್ಯಕ್ಕೆ ಖಾತ್ರಿ ಇರುವ ಈ ಉತ್ಪನ್ನಗಳನ್ನು ಸಾರ್ವಜನಿಕರು ಪ್ರೋತ್ಸಾಹಿಸಬೇಕು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು.
ಹಳೆಯ ಡಿಎಸ್‌ಪಿ ಕಚೇರಿ ಎದುರಿನ ಭಾವಸಾರ ಮಂಗಲ ಕಾರ್ಯಾಲಯದಲ್ಲಿ ಆರಂಭವಾದ ಮೈಸೂರು ಸಿಲ್ಕ್ ಸೀರೆಗಳ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕೆಎಸ್‌ಐಸಿ ಮೈಸೂರು ಸಿಲ್ಕ್ ಸೀರೆಗಳು ಸ್ಪರ್ಧಾತ್ಮಕ ಮಾರುಕಟ್ಟೆಯಲ್ಲಿ ಹೆಚ್ಚಾಗಿ ಮಾರಾಟವಾಗುವ ಮತ್ತು ಬೇಡಿಕೆಯಲ್ಲಿರುವ ರೇಷ್ಮೆ ಸೀರೆಗಳಾಗಿವೆ. ಅದರಲ್ಲೂ ಮಹಿಳೆಯರಿಗೆ ವಿವಾಹ ಮತ್ತು ಹಬ್ಬ ಹರಿದಿನ ಸಂದರ್ಭಗಳಲ್ಲಿ ಬಹು ಅಚ್ಚುಮೆಚ್ಚಿನ ಆಯ್ಕೆಯ ಸೀರೆ ಮೈಸೂರು ಸಿಲ್ಕ್ ಸೀರೆಗಳಾಗಿವೆ ಎಂದರು.
ಸಂಸ್ಥೆಯ ವ್ಯವಸ್ಥಾಪಕ ಭಾನುಪ್ರಕಾಶ ಮಾತನಾಡಿ, ಮೈಸೂರ್ ಸಿಲ್ಕ್ ಸೀರೆಗಳಿಗೆ ಭೌಗೋಳಿಕ ಗುರುತಿನ ನೋಂದಣಿ ಪಡೆದುಕೊಳ್ಳಲಾಗಿದೆ. ಇದು ಸರಕುಗಳ ಭೌಗೋಳಿಕ ಗುರುತಿನ (ನೋಂದಣಿ ಮತ್ತು ಸಂರಕ್ಷಣೆ) ಕಾಯ್ದೆ 1999ರಲ್ಲಿ ಲೋಕಸಭೆಯಲ್ಲಿ ಅನುಮೋದನೆಗೊಂಡಿದೆ. ಈ ನೋಂದಣಿಯ ಪ್ರಕಾರ ಕೆಎಸ್‌ಐಸಿಯು ಮೈಸೂರ್ ಸಿಲ್ಕ್ನ ಏಕೈಕ ಮಾಲೀಕತ್ವ ಹೊಂದಿದೆ. ಇದಲ್ಲದೆ ಕೆಎಸ್‌ಐಸಿ ನಿಗಮಕ್ಕೆ 2016-17ನೇ ಆರ್ಥಿಕ ವರ್ಷದಲ್ಲಿ ಕರ್ನಾಟಕ ಸಾರ್ವಜನಿಕ ಉದ್ದಿಮೆಗಳಿಗೆ ಪ್ರದಾನ ಮಾಡಲಾಗುವ ಮುಖ್ಯಮಂತ್ರಿಗಳ ವಾರ್ಷಿಕ ರತ್ನ ಪ್ರಶಸ್ತಿ ಲಭಿಸಿದೆ ಎಂದರು. ಜಿಪಂ ಸಿಇಒ ಡಾ| ಬಿ.ಸಿ. ಸತೀಶ ಇದ್ದರು. ಡಿ. 11ರ ವರೆಗೆ ಪ್ರತಿದಿನ ಬೆಳಗ್ಗೆ 10ರಿಂದ ರಾತ್ರಿ 8 ಗಂಟೆವರೆಗೆ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
MRPL ನಲ್ಲಿ ಉದ್ಯೋಗ ಆಮಿಷ: ಯುವಕನಿಗೆ 1 ಲಕ್ಷ ರೂ.ವಂಚನೆ
Karkala; ಕೋರ್ಟ್‌ಗೆ ಹಾಜರಾದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ
Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Delhi Polls: ದಿಲ್ಲಿಯ ಮಹಿಳಾ ಮತದಾರರ ಸೆಳೆಯಲು ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.