ಧರ್ಮದ ಬಗ್ಗೆ ಹೆಚ್ಚು ಮಾತಾಡಲ್ಲ: ಸಿದ್ದರಾಮಯ್ಯ
Team Udayavani, Dec 9, 2018, 6:00 AM IST
ಮೈಸೂರು: ಧರ್ಮದ ಬಗ್ಗೆ ಹೆಚ್ಚು ಮಾತಾಡಲ್ಲ. ವಿವಾದ ಆದರೆ ಕಷ್ಟ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಿಂಗಾಯತ ಧರ್ಮ ಮಾಡಿ ಎಂದು ಅವರೇ ಗಂಟು ಬಿದ್ದರು. ಒಂದೆಡೆ ವಿರಕ್ತರು, ಇನ್ನೊಂದೆಡೆ ಗುರು ಪರಂಪರೆಯವರ ಮಧ್ಯೆ ಸಿಕ್ಕು ನನ್ನ ವಿರುದ್ಧ ಅಪಪ್ರಚಾರ ಮಾಡಿಬಿಟ್ಟರು. ಕಾವಿ ಹಾಕಿ ಕೊಂಡವರೆಲ್ಲರೂ ಸನ್ಯಾಸಿಗಳಲ್ಲ. ಎಲ್ಲವನ್ನೂ ತ್ಯಜಿಸಿದವರೇ ಸನ್ಯಾಸಿಗಳು ಎಂದರು.
ನಾನು ಹೈ ಪವರ್ ಕಮಿಟಿ ರಚನೆ ಮಾಡಿ ವರದಿ ನೀಡಲು ತಿಳಿಸಿದ್ದೆ. ಸಭೆ ಕರೆದು ಎಲ್ಲರೊಂದಿಗೂ ಚರ್ಚೆ ಮಾಡಿದೆವು. ಸಭೆಯಲ್ಲಿ ಎಂ.ಬಿ.ಪಾಟೀಲ್, ಶಾಮನೂರು ಶಿವಶಂಕರಪ್ಪ ಅವರ ಪುತ್ರ ಮಲ್ಲಿಕಾರ್ಜುನ, ಈಶ್ವರ ಖಂಡ್ರೆ ಮತ್ತಿತರರು ಭಾಗವಹಿಸಿದ್ದರು. ಇವರು ಒಮ್ಮತಕ್ಕೆ ಬಾರದೇ ನನ್ನ ವಿರುದ್ಧ ಅಪಪ್ರಚಾರ ಮಾಡಲಾಯಿತು. ಅಂದಿನಿಂದ ನಾನು ಹುಷಾರಾಗಿ ಮಾತನಾಡುತ್ತಾ ಇದ್ದೇನೆ ಎನ್ನುತ್ತಾ ನಗು ಬೀರಿದರು.
ಲೋಕಸಭಾ ಚುನಾವಣೆ ದಿಕ್ಸೂಚಿ:
ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಮುಂಬರುವ ಲೋಕಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆ. ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಡ ರಾಜ್ಯಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದರು. ಮಿಜೋರಾಂ ಮತ್ತು ತೆಲಂಗಾಣ ರಾಜ್ಯಗಳಲ್ಲಿ ನೇರ ಪೈಪೋಟಿ ನಡೆದಿದೆ. ಕರ್ನಾಟಕದಲ್ಲಿ ನಡೆದ ಉಪ ಚುನಾವಣೆಗಳ ಫಲಿತಾಂಶವು ಈ ಐದು ರಾಜ್ಯಗಳ ಚುನಾವಣೆಗಳ ಮೇಲೆ ಸ್ವಲ್ಪ ಪ್ರಮಾಣದಲ್ಲಿ ಪರಿಣಾಮ ಬೀರಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ನೂರಕ್ಕೆ ನೂರು ನರೇಂದ್ರ ಮೋದಿ ಅವರ ಸರ್ಕಾರ ಹೋಗುತ್ತದೆ ಎಂದು ಭವಿಷ್ಯ ನುಡಿದರು.
ಯಡಿಯೂರಪ್ಪಗೆ ವಯಸ್ಸಾಯ್ತು. ಲೋಕಸಭಾ ಚುನಾವಣೆ ಒಳಗೆ ಹೇಗಾದರೂ ಮುಖ್ಯಮಂತ್ರಿ ಆಗಿ ಬಿಡಬೇಕು ಎಂದು ಶಾಸಕರನ್ನು ಖರೀದಿ ಮಾಡಲು ಓಡಾಡುತ್ತಿದ್ದಾರೆ. ಯಾವ ಶಾಸಕರೂ ಹೋಗಲ್ಲ. ಸರ್ಕಾರ ಬೀಳಿಸುವಲ್ಲಿ ಅವರು ಯಶಸ್ವಿಯೂ ಆಗುವುದಿಲ್ಲ.
– ಸಿದ್ದರಾಮಯ್ಯ, ಮಾಜಿ ಸಿಎಂ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.