ಇನ್ನೂ ಮುಗಿದಿಲ್ಲ ಕಬ್ಬು ಬಾಕಿ ಪಾವತಿ ಗೊಂದಲ
Team Udayavani, Dec 9, 2018, 6:10 AM IST
ಬೆಳಗಾವಿ: ಸಕ್ಕರೆ ಕಾರ್ಖಾನೆಗಳು ಕಬ್ಬು ಬೆಳೆಗಾರರಿಗೆ 39 ಕೋಟಿ ರೂ.ಮಾತ್ರ ಬಾಕಿ ಉಳಿಸಿಕೊಂಡಿವೆ ಎಂದು ಸರ್ಕಾರ
ಹೇಳುತ್ತಿದ್ದರೆ, ಕಾರ್ಖಾನೆಗಳಿಂದ 619 ಕೋಟಿ ರೂ.ಬಾಕಿ ಬರಬೇಕಿದೆ ಎಂದು ಕಬ್ಬು ಬೆಳೆಗಾರರು ಹೇಳುತ್ತಿದ್ದಾರೆ. ಇದರಿಂದ ಸೃಷ್ಟಿಯಾಗಿರುವ ಗೊಂದಲದಿಂದಾಗಿ ಕಬ್ಬು ಬೆಳೆಗಾರರು ಹಾಗೂ ಸರ್ಕಾರದ ನಡುವೆ ಹಗ್ಗ ಜಗ್ಗಾಟ ಮುಂದುವರಿದೆ.
ಕಾರ್ಖಾನೆ ಹಾಗೂ ಕಬ್ಬು ಬೆಳೆಗಾರರ ನಡುವಿನ ಲಿಖೀತ ಒಪ್ಪಂದ ಪಾಲನೆ ಯಾಗದಿದ್ದರಷ್ಟೇ ಕ್ರಮ ಜರುಗಿಸಬಹುದಾಗಿದೆ ಎಂದು ಸರ್ಕಾರ ಹೇಳುತ್ತಿದೆ.ಆದರೆ, ಮೌಖೀಕ ಭರವಸೆ ನೀಡಿರುವುದಾಗಿ ಒಪ್ಪಿಕೊಂಡಿರುವ ಕಾರ್ಖಾನೆ ಮಾಲೀಕರಿಂದ ಬಾಕಿ ಕೊಡಿಸಬೇಕು ಎಂಬುದು ಕಬ್ಬು ಬೆಳೆಗಾರರ ಒತ್ತಾಯ. ಈ ಹಿನ್ನೆಲೆಯಲ್ಲಿ ಕಾರ್ಖಾನೆಗಳಿಂದ ಬಾಕಿಯಿ ರುವ ಒಟ್ಟು 619 ಕೋಟಿ ರೂ.ಕೊಡಿಸ ಬೇಕು ಎಂದು ರೈತರು ಪಟ್ಟು ಹಿಡಿದಿದ್ದಾರೆ.
ಪ್ರಸಕ್ತ ಸಾಲಿನಲ್ಲಿ 17.24 ಕೋಟಿ ರೂ. ಮಾತ್ರ ಬಾಕಿಯಿದೆ. ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ಕಬ್ಬು ಬೆಳೆಗಾರರ ನಡುವಿನ ಲಿಖೀತ ಒಪ್ಪಂದದಂತೆ ಕಾರ್ಖಾನೆಗಳು ಬಾಕಿ ಉಳಿಸಿಕೊಂಡಿರುವ ಮೊತ್ತ ಪಾವತಿಸುವಂತೆ ಸರ್ಕಾರ ಕ್ರಮ ಕೈಗೊಳ್ಳಬಹುದು. ಆದರೆ,ಲಿಖೀತ ಒಪ್ಪಂದವಿಲ್ಲದೆ ಮೌಖೀಕ ಮಾತುಕತೆ ಆಧರಿಸಿ ಬಾಕಿ ಪಾವತಿಸುವಂತೆ ಸರ್ಕಾರ ಸೂಚಿಸಲು ಸಾಧ್ಯವಿಲ್ಲ. ಒಂದೊಮ್ಮೆ ಸರ್ಕಾರ ಕ್ರಮ ಕೈಗೊಂಡರೂ ಅದನ್ನು ಕಾರ್ಖಾನೆ ಮಾಲೀಕರು ನ್ಯಾಯಾಲಯದಲ್ಲಿ ಪ್ರಶ್ನಿಸುವ ಸಾಧ್ಯತೆ ಇರುತ್ತದೆ. ಬಾಕಿ ಉಳಿಸಿಕೊಂಡಿದ್ದ ಕಾರ್ಖಾನೆಗಳಿಗೆ ಮೂರು ತಿಂಗಳ ಹಿಂದೆ ನೋಟಿಸ್ ನೀಡಲಾಗಿತ್ತು. ಇತ್ತೀಚೆಗೆ ಯಾವುದೇ ಕಾರ್ಖಾನೆಗೆ
ನೋಟಿಸ್ ನೀಡಿಲ್ಲ ಎಂದು ಕಬ್ಬು ಅಭಿವೃದಿಟಛಿ ಆಯುಕ್ತರ ಕಚೇರಿ ಮೂಲಗಳು ತಿಳಿಸಿವೆ.
ಕಬ್ಬು ಬೆಳೆಗಾರರು ಇತ್ತೀಚೆಗೆ ಹೋರಾಟ ಆರಂಭಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಅಧಿಕಾರಿಗಳ ಸಭೆ ನಡೆಸಿ ಬಾಕಿ ಪಾವತಿಗೆ ಸೂಚಿಸಿದ್ದರು. ಅಲ್ಲದೆ, ಕಬ್ಬು ಬೆಳೆಗಾರರು, ಕಾರ್ಖಾನೆ ಮಾಲೀಕರ ಪ್ರತಿನಿಧಿಗಳು, ರೈತ ಮುಖಂಡರೊಂದಿಗೆ ಸಭೆಗಳನ್ನು ನಡೆಸಿದರೂ ಬಾಕಿ ಪಾವತಿಗೆ ಸಂಬಂಧಪಟ್ಟಂತೆ ಗೊಂದಲ ಮಾತ್ರ ನಿವಾರಣೆಯಾಗಿಲ್ಲ.
ಪ್ರಸಕ್ತ ಸಾಲಿನಲ್ಲಿ ಕಾರ್ಖಾನೆಗಳಿಂದ 17.24 ಕೋಟಿ ರೂ.ಹಾಗೂ ಹಿಂದಿನ ವರ್ಷಗಳ ಬಾಕಿ 22.24 ಕೋಟಿ ರೂ.ಸೇರಿ ಒಟ್ಟು 39 ಕೋಟಿ ರೂ.ಬಾಕಿಯಿದ್ದು, ಕೂಡಲೇ ಪಾವತಿಸುವಂತೆ ಕೈಗಾರಿಕೆಗಳಿಗೆ ಸೂಚಿಸುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ಆದರೆ, ಕಾರ್ಖಾನೆಗಳು ರೈತರಿಗೆ ನೀಡಿರುವ ಭರವಸೆಯಂತೆ 619 ಕೋಟಿ ರೂ.ಪಾವತಿಸಬೇಕಿದ್ದು,ಅದರ ತ್ವರಿತ ಪಾವತಿಗೆ ಸರ್ಕಾರ ಕ್ರಮ
ಕೈಗೊಳ್ಳಬೇಕು ಎಂಬುದು ಕಬ್ಬು ಬೆಳೆಗಾರರ ಆಗ್ರಹ.
ಕೇಂದ್ರ ಸರ್ಕಾರದ ಕ್ರಮದಿಂದಲೂ ತೊಂದರೆ: ಈ ಹಿಂದೆ ಪ್ರತಿ ಟನ್ ಕಬ್ಬಿನಿಂದ ಪಡೆಯುವ ಸಕ್ಕರೆ ಇಳುವರಿ ಪ್ರಮಾಣವನ್ನು ಶೇ.9.5ರಷ್ಟಕ್ಕೆ ಕೇಂದ್ರ ಸರ್ಕಾರ ನಿಗದಿಪಡಿಸಿತ್ತು. ಇದರಿಂದ ಕಾವೇರಿ ಮತ್ತು ಕೃಷ್ಣಾ ಕೊಳ್ಳದ ಕಬ್ಬು ಬೆಳೆಗಾರರಿಗೂ ಅನುಕೂಲಕರವಾಗಿತ್ತು. ಆದರೆ, ಕೇಂದ್ರ ಸರ್ಕಾರವು ಪ್ರತಿ ಟನ್ ಕಬ್ಬಿನಿಂದ ಪಡೆಯುವ ಸಕ್ಕರೆ ಇಳುವರಿ ಪ್ರಮಾಣವನ್ನು ಶೇ.10ಕ್ಕೆ ಏರಿಕೆ ಮಾಡಿರುವುದರಿಂದ ಬೆಳೆಗಾರರು ನಷ್ಟ ಅನುಭವಿಸುವಂತಾಗಿದ್ದು, 2,750 ರೂ.ಎಫ್ ಆರ್‌ಪಿ ದರವನ್ನು ಪೂರ್ಣ ಪ್ರಮಾಣದಲ್ಲಿ ಪಡೆಯಲು ಸಾಧ್ಯವಾಗದೆ ನಷ್ಟವಾಗುತ್ತಿದೆ. ಹಾಗಾಗಿ ಕೇಂದ್ರ ಸರ್ಕಾರ ಸಕ್ಕರೆ ಇಳುವರಿ ಪ್ರಮಾಣವನ್ನು ಹಿಂದಿನಂತೆ ಶೇ.9.5ಕ್ಕೆ ಇಳಿಸಬೇಕು.ಇಲ್ಲದಿದ್ದರೆ ರಾಜ್ಯ ಸರ್ಕಾರ ಎಫ್ಆರ್‌ಪಿ ದರದ ಜತೆಗೆ 300ರೂ. ಸೇರಿಸಿ ಕೊಡಬೇಕು ಎಂಬುದು ಕಬ್ಬು ಬೆಳೆಗಾರರ ಒತ್ತಾಯ.
ಸಕ್ಕರೆ ಕಾರ್ಖಾನೆಗಳು ರೈತರಿಗೆ ಬಾಕಿ ಉಳಿಸಿಕೊಂಡಿರುವ 619 ಕೋಟಿ ರೂ. ಪಾವತಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಎಫ್ಆರ್‌ಪಿ ದರದ ಮೇಲೆ 300 ರೂ. ಸೇರಿಸಿ ನೀಡಬೇಕು. ಸಾಲ ಮನ್ನಾ ಕುರಿತಾದ ಗೊಂದಲಗಳನ್ನು ನಿವಾರಿಸಿ ತ್ವರಿತವಾಗಿ ರೈತರನ್ನು ಋಣಮುಕ್ತರನ್ನಾಗಿ ಮಾಡಬೇಕು ಎಂದು ಒತ್ತಾಯಿಸಿ ಭಾನುವಾರ ಬೆಳಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ಆರಂಭಿಸಲಾಗುವುದು. ಸ್ಪಂದಿಸದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು.
– ಕುರುಬೂರು ಶಾಂತಕುಮಾರ್, ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ
– ಎಂ. ಕೀರ್ತಿಪ್ರಸಾದ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.