ಅಕ್ರಮ ಮರಳು ತಡೆಗೆ ಚೆಕ್‌ಪೋಸ್ಟ್
Team Udayavani, Dec 9, 2018, 10:55 AM IST
ಕಲಬುರಗಿ: ನಗರಕ್ಕೆ ದೇವದುರ್ಗ, ಶಹಾಪುರ, ಜೇವರ್ಗಿಗಳಿಂದ ಆಗಮಿಸುವ ಅನಧಿಕೃತ ಮರಳನ್ನು ತಡೆಯಲು ಮೂರು ದಿನದೊಳಗಾಗಿ ಕಟ್ಟಿಸಂಗಾವಿ ಹತ್ತಿರ ಚೆಕ್‌ಪೋಸ್ಟ್ ಸ್ಥಾಪಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದರು. ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಕ್ರಮ ಮರಳು ಸಾಗಾಣಿಕೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಜಿಲ್ಲೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ ಮರಳಿನ ದಾಸ್ತಾನಿನ ವಿವರ ಪಡೆದು ಸಮರ್ಪಕವಾಗಿ ವಿಲೇವಾರಿ ಮಾಡಬೇಕು ಎಂದರು.
ಲೋಕೋಪಯೋಗಿ, ಜಿಲ್ಲಾ ಪಂಚಾಯತಿ ಇಂಜಿನಿಯರಿಂಗ್ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಅನಧಿಕೃತವಾಗಿ ಸಾಗಾಣಿಕೆ ಮಾಡುವಾಗ ಸೀಜ್ ಮಾಡಿರುವ ಮರಳಿನ ಮಾಹಿತಿ ಸಂಗ್ರಹಿಸಿ ಅದನ್ನು ಸರ್ಕಾರಿ ಕೆಲಸಗಳಿಗೆ ಬಳಿಸಿಕೊಳ್ಳಬೇಕು. ಮರಳು ಸಿಗುತ್ತಿಲ್ಲ ಎಂದು ಯಾವುದೇ ಸರ್ಕಾರಿ ಕಾಮಗಾರಿಗಳು ನಿಲ್ಲಬಾರದು ಎಂದರು.
ಪೊಲೀಸ್ ಹಾಗೂ ತಹಶೀಲ್ದಾರ್‌ರು ಅಕ್ರಮವಾಗಿ ಮರಳು ಸಾಗಿಸುವ ವಾಹನಗಳ ಮಾಹಿತಿಯನ್ನು ಸಾರಿಗೆ ಇಲಾಖೆಗೆ ನೀಡಿದಾಗ ವಾಹನಗಳ ರಹದಾರಿ ರದ್ದುಗೊಳಿಸಿ ಜಪ್ತಿ ಮಾಡಬೇಕು. ಮುಂದಿನ ಒಂದು ವಾರದಲ್ಲಿ ಜಿಲ್ಲೆಯಲ್ಲಿ ಅನಧಿಕೃತವಾಗಿ ಮರಳು ಸಾಗಾಣಿಕೆಯಲ್ಲಿ ತೊಡಗಿರುವ ವಾಹನಗಳ ಮಾಹಿತಿ ಪಡೆದು ಅವುಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆದೇಶಿಸಿದರು.
ಚಿತ್ತಾಪುರ ತಾಲೂಕಿನ ಕಾಟಂದೇವರಹಳ್ಳಿಯಲ್ಲಿ ಅನಧಿಕೃತವಾಗಿ ಮರಳು ಸಾಗಾಣಿಕೆ ಮಾಡುವ ವಾಹನಗಳ ಹಾಗೂ ವಾಹನದ ಮಾಲಿಕರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಸೂಚಿಸಿದ ಸಚಿವರು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಅವರಿಗೆ ನೋಟಿಸ್ ಜಾರಿ ಮಾಡುವಂತೆ ಜಿಲ್ಲಾಧಿಕಾರಿಗೆ ತಿಳಿಸಿದರು. ಅಧಿಕೃತವಾಗಿ ಮರಳು ಸಾಗಾಣಿಕೆ ಮಾಡುವವರಿಗೆ ಯಾವುದೇ ತರಹದ ತೊಂದರೆ ನೀಡಬಾರದು.
ಪೋಲೀಸ್ ಇಲಾಖೆ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಜೊತೆಗೂಡಿ ಅನಧಿಕೃತ ಮರಳು ಸಾಗಾಣಿಕೆ ತಡೆಯಬೇಕು. ಅನಧಿಕೃತ ಮರಳು ಸಾಗಾಟ ತಡೆಯಲು ಎಲ್ಲ ಅಧಿಕಾರಿಗಳು ಜಾಗೃತರಾಗಿ ಕೆಲಸ ನಿರ್ವಹಿಸಬೇಕು ಎಂದು ಎಚ್ಚರಿಸಿದರು.
ಕಟ್ಟಿಸಂಗಾವಿ ಹತ್ತಿರ ಸ್ಥಾಪಿಸಲಾಗುವ ಮರಳು ಸಾಗಾಟ ವಾಹನ ತಪಾಸಣಾ ಕೇಂದ್ರದಲ್ಲಿ 8 ಗಂಟೆಯ ಸರದಿ ಮೇಲೆ ಎಲ್ಲ ಇಲಾಖೆಯ ಅಧಿಕಾರಿಗಳನ್ನು ಕರ್ತವ್ಯಕ್ಕೆ ನೇಮಿಸಲಾಗುವುದು. ತಂತ್ರಜ್ಞಾನ ಬಳಸಿಕೊಂಡು ಅಧಿಕೃತ ಮತ್ತು ಅನಧಿಕೃತ ವಾಹನಗಳ ಗುರುತು ಹಚ್ಚಲಾಗುವುದು. ಜಿಲ್ಲೆಯ ಮರಳು ನಿಕ್ಷೇಪಗಳ ಹರಾಜು ಮಡಲಾಗುತ್ತಿದ್ದು, ಕೆಲವರು ಹರಾಜಿನಲ್ಲಿ ಭಾಗವಹಿಸಿ ಅಸಹಜ ದರಗಳನ್ನು ನಮೂದಿಸುತ್ತಿದ್ದಾರೆ ಎಂದರು.
ಮರಳು ನಿಕ್ಷೇಪಗಳು ಹರಾಜಾದ ನಂತರ ಮರಳಿನ ತೊಂದರೆ ನಿವಾರಣೆ ಆಗುತ್ತದೆ. ಮರಳು ಸಾಗಾಣಿಕೆ ಮಾಡುವ ಕೆಲವು ವ್ಯಕ್ತಿಗಳು ಸಂಪರ್ಕಿಸಿ ಮರಳನ್ನು ನಗರದಲ್ಲಿ ಸಂಗ್ರಹಿಸಿ ಅಲ್ಲಿಂದ ಸಾರ್ವಜನಿಕರಿಗೆ ಪೂರೈಸುತ್ತೇವೆ ಎಂದು ಮನವಿ ಸಲ್ಲಿಸಿದ್ದಾರೆ. ಈ ಕುರಿತು ವಿಚಾರಣೆ ಕೈಗೊಂಡು ತೀರ್ಮಾನಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಶಶಿಕುಮಾರ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ| ರಾಜಾ ಪಿ., ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ಸೇಡಂ ಸಹಾಯಕ ಆಯುಕ್ತೆ ಡಾ| ಸುಶೀಲ ಬಿ., ಸಹಾಯಕ ಆಯುಕ್ತ ರಾಚಪ್ಪ, ಜಿಲ್ಲಾಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.