ನದಿ ತಟ ಶುಚೀಕರಣ ಮೂಲಕ ವಾರ್ಷಿಕೋತ್ಸವಕ್ಕೆ ಚಾಲನೆ
Team Udayavani, Dec 10, 2018, 12:41 PM IST
ಕಾಸರಗೋಡು: ಹರಿತ ಕೇರಳ ಮಿಷನ್‌ನ ಮೂರನೇ ವರ್ಷಾಚರಣೆಯ ನಾಂದಿ ವಿಶಿಷ್ಟ ರೂಪದಲ್ಲಿ ಜರಗಿತು. ಜಿಲ್ಲೆಯ ಅಳ್ಳಂಗೋಡು ಚಿತ್ತಾರಿ ನದಿ ದಡದಲ್ಲಿ ಸಾರ್ವಜನಿಕ ಸಹಭಾಗಿತ್ವದೊಂದಿಗೆ ಶುಚೀಕರಣ ಮೂಲಕ ನದಿಯನ್ನು ಸಂರಕ್ಷಿಸುವ ಕಾಯಕದ ಮೂಲಕ ಸಾರ್ಥಕವಾಗಿ ಈ ವಾರ್ಷಿಕೋತ್ಸವ ಸರಣಿಗೆ ಚಾಲನೆ ಲಭಿಸಿದೆ.
ಜಲ ಕ್ಷಾಮ ಪರಿಹಾರಕ್ಕೆ ಇರುವ ಜಲದೊಂದಿಗೆ ಸಾರ್ಥಕ ಜೀವನ ನಡೆಸುವೆ ಎಂಬ ಸಂದೇಶದೊಂದಿಗೆ ಜಿಲ್ಲೆಯ ಎಲ್ಲ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಡಿ.15 ರ ವರೆಗೆ ತಲಾ ಒಂದು ಜಲಾಶಯವನ್ನು ಸಂರಕ್ಷಿಸುವ ಮೂಲಕ ಜಲಸಂರಕ್ಷಣೆ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ. ಉದ್ಯೋಗ ಖಾತರಿ ಯೋಜನೆಯ ಕಾರ್ಮಿಕರು, ಸಾರ್ವಜನಿಕರು ಶ್ರಮದಾನ ನಡೆಸುವ ಮೂಲಕ ಚಿತ್ತಾರಿ ನದಿ ತಟವನ್ನು ಶುಚೀಕರಣಗೊಳಿಸಿದರು. ಸ್ಥಳೀಯಾಡಳಿತ ಸಂಸ್ಥೆಗಳ ಪದಾಧಿಕಾರಿಗಳು, ವಿವಿಧ ರಾಜಕೀಯ ಪಕ್ಷಗಳ ನೇತಾರರು ಮತಭೇದ ಮರೆತು ಈ ಕಾಯಕಕ್ಕೆ ಕೈಜೋಡಿಸಿದರು.
ಈ ಸಂಬಂಧ ನಡೆದ ಸಭೆಯನ್ನು ಕಾಂಞಂಗಾಡ್ ಬ್ಲಾಕ್ ಪಂಚಾಯತ್ ಅಧ್ಯಕ್ಷೆ ಎಂ.ಗೌರಿ ಉದ್ಘಾಟಿಸಿದರು. ಅಜಾನೂರು ಗ್ರಾಮ ಪಂಚಾಯತ್ ಅಧ್ಯಕ್ಷ ವಿ.ದಾಮೋದರನ್ ಅಧ್ಯಕ್ಷತೆ ವಹಿಸಿದರು. ಪುಲ್ಲೂರು-ಪೆರಿಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಾರದಾ ಎಸ್.ನಾಯರ್, ವಿವಿಧ ವಲಯಗಳ ಪ್ರತಿನಿಧಿಗಳಾದ ಕುನ್ನತ್ ಕರುಣಾಕರನ್, ಚೇರಾಕುಂಡ್ ಕುಂಞಿಕೃಷ್ಣನ್, ಎಂ.ಕುಂಞಂಬು, ಬಿ.ಬಾಲಕೃಷ್ಣನ್, ವಿ.ಕುಂಞಿರಾಮನ್ ಮಾಸ್ತರ್, ಕೆ.ನಾರಾಯಣನ್, ಜಿಲ್ಲಾ ಮಣ್ಣು ಸಂರಕ್ಷಣೆ ಅಧಿಕಾರಿ ಅಶೋಕ್ ಕುಮಾರ್ ವಿ.ಪಿ. ಪರಿಸರ ಇಲಾಖೆ ಅಧಿಕಾರಿ ಪಿ.ಮುರಳಿ ಮಾಸ್ಟರ್ ಮೊದಲಾದವರು ಉಪಸ್ಥಿತರಿದ್ದರು. ಹರಿತ ಕೇರಳ ಜಿಲ್ಲಾ ಮಿಷನ್ ಸಂಚಾಲಕ ಎಂ.ಪಿ.ಸುಬ್ರಹ್ಮಣ್ಯನ್ ಸ್ವಾಗತಿಸಿದರು. ಸುರೇಶ್ ಕಸ್ತೂರಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು
Kasaragod: ಕೊಲೆ ಯತ್ನ; ವೀಡಿಯೋ ಕಾನ್ಫರೆನ್ಸ್ ಮೂಲಕ ನಕ್ಸಲ್ ಸೋಮನ್ ವಿಚಾರಣೆ
Kasaragod: 300 ಪವನ್ ಚಿನ್ನ, 1 ಕೋಟಿ ರೂ. ಕಳವು ಕರ್ನಾಟಕ, ತಮಿಳುನಾಡಿಗೆ ತನಿಖೆ ವಿಸ್ತರಣೆ
Road Mishap: ಲಾರಿ ಹರಿದು ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು
Road Mishap: ಪೊನ್ನಂಪೇಟೆ: ಲಾರಿ ಢಿಕ್ಕಿ; ಬಾಲಕಿ ಸಾವು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು
School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್ ನಿಧನ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.