ಕಾಪು ತಾಲೂಕು ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಮುದ್ದು ಮೂಡುಬೆಳ್ಳೆ
Team Udayavani, Dec 11, 2018, 2:20 AM IST
ಶಿರ್ವ: ನೂತನ ತಾಲೂಕು ಆಗಿ ರಚನೆಗೊಂಡ ಕಾಪು ತಾಲೂಕಿನ ಪ್ರಥಮ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಸಾಹಿತಿ ಮುದ್ದು ಮೂಡುಬೆಳ್ಳೆ ಆಯ್ಕೆಯಾಗಿದ್ದಾರೆ. ಶಿರ್ವ ಸಮೀಪದ ಕುತ್ಯಾರು ಶ್ರೀ ಪರಶುರಾಮೇಶ್ವರ ಕ್ಷೇತ್ರದ ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಸ್ಕೂಲ್ ಸಭಾಂಗಣದಲ್ಲಿ ಡಿ.20ರಂದು ಸಮ್ಮೇಳನ ನಡೆಯಲಿದೆ.
ಮೂಲತಃ ಕಾಪು ತಾಲೂಕಿನ ಮೂಡುಬೆಳ್ಳೆ ಸಮೀಪದ ಕಟ್ಟಿಂಗೇರಿ ಗ್ರಾಮದವರಾಗಿದ್ದು,ಮೂಡುಬೆಳ್ಳೆ ಮತ್ತು ಉಡುಪಿಯಲ್ಲಿ ಪದವಿ, ಬಳಿಕ ಮೈಸೂರು ವಿಶ್ವವಿದ್ಯಾನಿಲಯದಿಂದ ಎಂ.ಎ. ಕನ್ನಡ, ಎಂ.ಎ. ಸಮಾಜಶಾಸ್ತ್ರ, ಸ್ನಾತಕೋತ್ತರ ಡಿಪ್ಲೊಮಾ (ಕೊಂಕಣಿ) ಪತ್ರಿಕೋದ್ಯಮ ಡಿಪ್ಲೊಮಾ ಪದವಿ ಗಳಿಸಿದ್ದಾರೆ. ನ್ಯಾಯಾಂಗ ಇಲಾಖೆಯಲ್ಲಿ 9 ವರ್ಷ ಸೇವೆಯ ಬಳಿಕ 1985ರಿಂದ ಮಂಗಳೂರು ಆಕಾಶವಾಣಿಯಲ್ಲಿ ಹಿರಿಯ ಕಾರ್ಯಕ್ರಮ ನಿರೂಪಕರಾಗಿ ಸೇವೆ ಸಲ್ಲಿಸಿದ್ದರು. ನಿವೃತ್ತಿಯ ಬಳಿಕ ಮಂಗಳೂರು ವಿ.ವಿ. ಯಲ್ಲಿ ನೂತನವಾಗಿ ಸ್ಥಾಪನೆಗೊಂಡಿರುವ ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ ಕೇಂದ್ರದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ತನ್ನ 13ರ ಹರೆಯದಲ್ಲಿ (1968) ಪ್ರಥಮ ಕಥೆ-ಕವನ ಪ್ರಕಟಿಸಿದ್ದ ಇವರು, 50 ವರ್ಷಗಳಿಂದ ಸಾಹಿತ್ಯ ಕೃಷಿ ಮಾಡುತ್ತಿದ್ದಾರೆ. ಕನ್ನಡ, ತುಳು ಭಾಷೆಗಳಲ್ಲಿ 30 ಕೃತಿಗಳನ್ನು ಬರೆದಿದ್ದಾರೆ. 50ಕ್ಕೂ ಮಿಕ್ಕ ಕೃತಿಗಳ ಸಂಪಾದಕ ಸಮಿತಿಯಲ್ಲಿ ದುಡಿದಿದ್ದಾರೆ. ಗೊರೂರುಪ್ರಶಸ್ತಿ, ತುಳು ಸಾಹಿತ್ಯ ಅಕಾಡೆಮಿ, ಮಾಸ್ತಿ ಪುರಸ್ಕಾರ ಸೇರಿದಂತೆ ವಿವಿಧ ಪ್ರಶಸ್ತಿಗಳು ಇವರಿಗೆ ಸಂದಿವೆ. ಅವರ 3 ಕೃತಿಗಳು ಮಂಗಳೂರು ಹಾಗೂ ಗುಲ್ಬರ್ಗ ವಿಶ್ವವಿದ್ಯಾನಿಲಯಗಳಿಗೆ ಪಠ್ಯವಾಗಿವೆ. ಮುಂಬಯಿ ತುಳು ರಂಗಭೂಮಿ ಕುರಿತು ಅಧ್ಯಯನ ಮಾಡಿದ ಮೊದಲಿಗರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.