ಅನ್ಯಕೆಲಸಕ್ಕೆ ಬ್ರೇಕ್: ಸಚಿವೆ
Team Udayavani, Dec 12, 2018, 6:00 AM IST
ಸುವರ್ಣಸೌಧ (ವಿಧಾನಸಭೆ): ಅಂಗನವಾಡಿ ಕಾರ್ಯಕರ್ತೆಯರು ಬೆಳಗ್ಗೆ 9ರಿಂದ ಸಂಜೆ 4ರವರೆಗೆ ನಿರ್ದಿಷ್ಟ ಕೆಲಸದಲ್ಲಷ್ಟೇ ತೊಡಗಿಸಿಕೊಂಡು ಅನ್ಯ ಕೆಲಸ ಮಾಡುವಂತಿಲ್ಲ ಎಂದು ಸೂಚಿಸಲಾಗಿದೆ. ಇತರೆ ಕಾರ್ಯಗಳಿಗೆ ನಿವೃತ್ತ ಕಾರ್ಯಕರ್ತೆಯರನ್ನು ಬಳಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವೆ ಡಾ.ಜಯಮಾಲಾ ಹೇಳಿದರು.
ಬಿಜೆಪಿಯ ಎಸ್.ಸುರೇಶ್ ಕುಮಾರ್ ಪ್ರಶ್ನೆಗೆ ಉತ್ತರಿಸಿದ ಅವರು, ಸದ್ಯ ಅಂಗನವಾಡಿ ಕಾರ್ಯಕರ್ತೆಯರಿಗೆ ಕೇಂದ್ರ ಸರ್ಕಾರ 3000ರೂ. ಹಾಗೂ ರಾಜ್ಯ ಸರ್ಕಾರದಿಂದ 5000ರೂ. ಸೇರಿ ಒಟ್ಟು 8000 ರೂ. ಗೌರವ ಧನ ನೀಡಲಾಗುತ್ತಿದೆ. ಸಹಾಯಕರಿಗೆ 4,750 ರೂ. ನೀಡಲಾಗುತ್ತಿದೆ ಎಂದು ತಿಳಿಸಿದರು. ಕಾಂಗ್ರೆಸ್‌ನ ಶಾಸಕ ತನ್ವೀರ್‌ಸೇs…, ಕೇಂದ್ರ ಸರ್ಕಾರವು ಈ ಹಿಂದೆ ಶೇ.90ರಷ್ಟು ಗೌರವಧನ ಭರಿಸುತ್ತಿತ್ತು. ಇದೀಗ 50: 50ರ ಅನುಪಾತ ನಿಗದಿಪಡಿಸಿರುವುದರಿಂದ ರಾಜ್ಯ ಸರ್ಕಾರಕ್ಕೆ ಹೊರೆಯಾಗಿದೆ ಎಂದು ಹೇಳಿದರು.
ಬಳಿಕ ಸುರೇಶ್ ಕುಮಾರ್, ಅಂಗನವಾಡಿ ಕಾರ್ಯಕರ್ತೆಯರು ನಿರ್ದಿಷ್ಟ ಉದ್ದೇಶದ ಕಾರ್ಯಗಳನ್ನಷ್ಟೇ ನಿರ್ವಹಿಸಿದರೆ ಮಾತೃಪೂರ್ಣ, ಮಾತೃಶ್ರೀ, ಭಾಗ್ಯಲಕ್ಷ್ಮೀ, ಶಿಶು- ಮಕ್ಕಳಿಗೆ ನಾನಾ ಲಸಿಕೆ ಹಾಕುವ ಕಾರ್ಯಕ್ರಮ, ಸಮೀಕ್ಷೆಗಳು, ಶೌಚಾಲಯ
ನಿರ್ಮಾಣ ಮೇಲ್ವಿಚಾರಣೆ, ಬಿಪಿಎಲ್ ಕಾರ್ಡ್ ಸರ್ವೇ, ಪಲ್ಸ್ ಪೊಲಿಯೋ ಲಸಿಕೆ ಕಾರ್ಯಕ್ರಮ, ಇಂದ್ರಧನುಷ್ ಇತರೆ
ಯೋಜನೆಗಳನ್ನು ಜಾರಿಗೊಳಿಸುವವರು ಯಾರು? ಇಷ್ಟೆಲ್ಲಾ ಕಾರ್ಯ ನಿರ್ವಹಿಸುವ ಅಂಗನವಾಡಿ ಕಾರ್ಯಕರ್ತೆಯರಿಗೆ
ಕೇವಲ ಗೌರವ ಧನ ನೀಡುವುದು ಸೂಕ್ತವೇ ಎಂದು ಪ್ರಶ್ನಿಸಿದರು.
59,296 ಮಕ್ಕಳಿಗೆ ಅಪೌಷ್ಟಿಕತೆ: ರಾಯಚೂರು ಜಿಲ್ಲೆ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ 59,296 ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿರುವುದು ಬೆಳಕಿಗೆ ಬಂದಿದೆ. ಜಿಲ್ಲೆಯ ಎಂಟು ತಾಲೂಕಿನ ಪೈಕಿ ಮಾನ್ವಿ, ಸಿರವಾರ ತಾಲೂಕಿನಲ್ಲಿ 13,731 ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿರುವುದು ಬೆಳಕಿಗೆ ಬಂದಿದೆ. ಬಿಜೆಪಿಯ ಶಿವನಗೌಡ ನಾಯಕ ಪ್ರಶ್ನೆಗೆ ಉತ್ತರ ನೀಡಿದ ಸಚಿವೆ ಜಯಮಾಲಾ, ರಾಯಚೂರು ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ 59,296 ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿರುವುದು ಬೆಳಕಿಗೆ ಬಂದಿದ್ದು, ಹಲವು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.