ಮೂಲ ಸೌಕರ್ಯ ಮರೀಚಿಕೆ 

Team Udayavani, Dec 12, 2018, 4:37 PM IST

12-december-20.gif

ನರಗುಂದ: ಜನವಸತಿ ಪ್ರದೇಶಕ್ಕೆ ಶುದ್ಧ ಕುಡಿವ ನೀರು, ಸಂಚಾರಕ್ಕೆ ಸಮರ್ಪಕ ರಸ್ತೆ, ವಿದ್ಯುತ್‌ ಸಂಪರ್ಕ ಮುಂತಾದ ಮೂಲ ಸೌಕರ್ಯ ಒದಗಿಸಬೇಕಾದದ್ದು ಆಡಳಿತ ವ್ಯವಸ್ಥೆ ಕರ್ತವ್ಯ. ಆದರೆ ಇಲ್ಲೊಂದು ಗ್ರಾಮದಲ್ಲಿ ಮೂಲ ಸೌಕರ್ಯಗಳೇ ಇಲ್ಲವಾಗಿದೆ.

ಜಿಲ್ಲೆಯಲ್ಲೇ ಪ್ರಥಮ ಬಯಲು ಬಹಿರ್ದೆಸೆ ಮುಕ್ತ ಗ್ರಾಪಂ ಎಂಬ ಹೆಗ್ಗಳಿಕೆಗೆ ಪಾತ್ರವಾದ ತಾಲೂಕಿನ ರಡ್ಡೇರನಾಗನೂರ ಗ್ರಾಮದಲ್ಲೇ ಇಂಥದ್ದೊಂದು ಅವ್ಯವಸ್ಥೆ ಸೋಜಿಗವಾಗಿ ಕಂಡುಬಂದಿದೆ. ಅಲ್ಲಿನ ಹರಿಜನ ಕಾಲೋನಿಯ ಅಂಬೇಡ್ಕರ್‌ ಓಣಿಯಲ್ಲಿ ಮೂಲ ಸೌಕರ್ಯ ವಂಚಿತ ನಿವಾಸಿಗಳು ನಿತ್ಯ ಯಾತನೆ ಅನುಭವಿಸುವಂತಾಗಿದೆ.

ಗ್ರಾಮದ ಹೊರವಲಯ ಭೋಪಳಾಪುರ ರಸ್ತೆಗೆ ಹೊಂದಿಕೊಂಡ ಈ ಓಣಿಯಲ್ಲಿ ಸುಮಾರು 30 ಮನೆಗಳಿದ್ದು, 100ಕ್ಕೂ ಹೆಚ್ಚು ಜನಸಂಖ್ಯೆಯಿದೆ. ಓಣಿಯ ದುರ್ಗಾದೇವಿ ದೇವಸ್ಥಾನ ಹಿಂಭಾಗದ ಮುಖ್ಯರಸ್ತೆ ಸುಧಾರಣೆಯಿಲ್ಲದೇ ಕೆಸರು ನೀರು ರಸ್ತೆಯಲ್ಲಿ ಜಮಾವಣೆಯಾಗಿದ್ದು, ನಿವಾಸಿಗಳು ಸಂಚಾರಕ್ಕೂ ಪರದಾಡುವಂತಾಗಿದೆ. ಒಂದೂವರೆ ವರ್ಷದ ಹಿಂದೆ ಇದೇ ಓಣಿಯ ಸಣ್ಣ ರಸ್ತೆಯೊಂದನ್ನು ಸಿಸಿ ರಸ್ತೆಯಾಗಿ ಪರಿವರ್ತಿಸಲು ಮುಂದಾದಾಗ ಮುಖ್ಯರಸ್ತೆ ಮೊದಲು ಸಿಸಿ ರಸ್ತೆ ಮಾಡಿ ಎಂದು ತಕರಾರು ತೆಗೆದಾಗ ಇಲ್ಲಿನವರೆಗೂ ಯಾವ ರಸ್ತೆಯನ್ನೂ ಸಿಸಿಯಾಗಿ ಸುಧಾರಿಸಿಲ್ಲ. ನಮ್ಮನ್ನು ಕಾಡಿನಲ್ಲಿ ಇಟ್ಟಿದ್ದಾರ್ರೀ ಎಂಬ ಅಳಲು ಇಲ್ಲಿನ ಜನರಲ್ಲಿದೆ.

ಎರಡು ದಿನಕ್ಕೊಮ್ಮೆ ಕುಡಿಯಲು ನೀರು ಬಿಟ್ಟಾಗ ಇರುವ ಎರಡು ಸಾರ್ವಜನಿಕ ನಲ್ಲಿಗಳಲ್ಲೇ ನೀರು ಪಡೆಯಬೇಕು. ಎರಡು ಓಣಿಗಳಿಗೂ ಒಂದೇ ಬೀದಿದೀಪ ಅಳವಡಿಸಲಾಗಿದೆ. ವಿದ್ಯುತ್‌ ಇಲ್ಲದಾಗ ರಸ್ತೆಯಲ್ಲಿ ಸಂಚರಿಸುವುದೇ ದುಸ್ತರ ಎಂಬ ಆರೋಪ ಜನರದ್ದಾಗಿದೆ. ಈ ಕುರಿತು ಹಲವಾರು ಬಾರಿ ಗ್ರಾಮ ಪಂಚಾಯತ್‌ಗೆ ಮನವಿ ಮಾಡಿದರೂ ನಮಗೆ ಮೂಲ ಸೌಕರ್ಯ ಒದಗಿಸುತ್ತಿಲ್ಲ. ಆದ್ದರಿಂದ ಮೊದಲು ರಸ್ತೆ ಸುಧಾರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಿ. ರಸ್ತೆಯೊಳಗಿನ ಕೆಸರು ನೀರಿನಿಂದ ಸಾಂಕ್ರಾಮಿಕ ರೋಗಭೀತಿ, ಗಬ್ಬು ವಾಸನೆಯಿಂದ ನಮ್ಮನ್ನು ಮುಕ್ತಗೊಳಿಸಲಿ ಎಂದು ಅಲ್ಲಿನ ನಿವಾಸಿಗಳಾದ ಯಲ್ಲಪ್ಪ ಚಲವಾದಿ, ನಿಂಗಪ್ಪ ಚಲವಾದಿ, ಶಾಂತವ್ವ ಚಲವಾದಿ, ಮಾರುತಿ ಚಲವಾದಿ, ಮುದಕಪ್ಪ ದೊಡಮನಿ, ಚನ್ನಪ್ಪ ದೊಡಮನಿ, ಶಂಕ್ರಪ್ಪ ಚಲವಾದಿ, ಬಸಪ್ಪ ಚಲವಾದಿ, ಶ್ರೀಕಾಂತ ಚಲವಾದಿ, ಮುದಿಯಪ್ಪ ಪೂಜಾರ, ಮಾದೇವಪ್ಪ ದೊಡಮನಿ, ನಿಂಗಬಸಪ್ಪ ಚಲವಾದಿ ಮುಂತಾದವರು ಆಗ್ರಹಿಸಿದ್ದಾರೆ.

ಜಿಪಂಗೆ ಪ್ರಸ್ತಾವನೆ
ಗ್ರಾಮದ ಹರಿಜನ ಕಾಲೋನಿಯಲ್ಲಿ ಅಗತ್ಯ ಸೌಲಭ್ಯ, ಸಿಸಿ ರಸ್ತೆ ನಿರ್ಮಾಣಕ್ಕೆ ಈಗಾಗಲೇ ಗ್ರಾಮ ಸಭೆಯಲ್ಲಿ ಚರ್ಚಿಸಲಾಗಿದೆ. 300 ಮೀ. ಸಿಸಿ ರಸ್ತೆಗಾಗಿ ಕ್ರಿಯಾಯೋಜನೆ ತಯಾರಿಸಿ ಜಿಲ್ಲಾ ಪಂಚಾಯತ್‌ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಈಶ್ವರಗೌಡ ಪಾಟೀಲ,
ರಡ್ಡೇರನಾಗನೂರ ಪಿಡಿಒ

ಟಾಪ್ ನ್ಯೂಸ್

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

3-gadaga

Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.