ರಾಜಕೀಯ ತಲ್ಲಣ: ಸಿದ್ದು ಪ್ರವಾಸ ಮೊಟಕು


Team Udayavani, Dec 13, 2018, 6:00 AM IST

sidda-kgaf-621x414livemint.jpg

ಬೆಳಗಾವಿ: ಮಲೇಶಿಯಾ ಪ್ರವಾಸ ಕೈಗೊಂಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ದಿನ ಮುಂಚಿತವಾಗಿ ಗುರುವಾರ ಮುಂಜಾನೆ ವಾಪಸ್ಸಾಗಲಿದ್ದು, ರಾಜ್ಯ ರಾಜಕೀಯ ಚಟುವಟಿಕೆ ಗರಿಗೆದರುವ ಸಾಧ್ಯತೆ ಇದೆ ಎನ್ನಲಾಗಿದೆ.

ಪೂರ್ವನಿಗದಿಯಂತೆ ನಾಲ್ಕು ದಿನಗಳ ಪ್ರವಾಸ ಕೈಗೊಂಡಿದ್ದ ಸಿದ್ದರಾಮಯ್ಯ ಅವರು ಗುರುವಾರ ರಾತ್ರಿ ವಾಪಸ್‌ ಬರಬೇಕಿತ್ತಾದರೂ ಒಂದು ದಿನ ಮುಂಚಿತವಾಗಿ ವಾಪಸ್‌ ಬರಲಿದ್ದಾರೆ. ರಾಜ್ಯ ಸಚಿವ ಸಂಪುಟ ವಿಸ್ತರಣೆ, ಶಾಸಕಾಂಗ ಪಕ್ಷದ ಸಭೆ, ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಮತ್ತಿತರ ಬೆಳವಣಿಗೆ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಪ್ರವಾಸದಿಂದ ವಾಪಸ್ಸಾಗಲಿದ್ದಾರೆ ಎಂದು ಹೇಳಲಾಗಿದೆ. ಸಂಪುಟ ವಿಸ್ತರಣೆ ವೇಳೆ ರಮೇಶ್‌ ಜಾರಕಿಹೊಳಿ ಅವರನ್ನು ಕೈ ಬಿಡಲು ಚಿಂತನೆ ನಡೆದಿದೆ. ಅವರ ಬದಲಿಗೆ ಸತೀಶ್‌ ಜಾರಕಿಹೊಳಿಗೆ ಸಂಪುಟಕ್ಕೆ ಸೇರ್ಪಡೆ ಮಾಡಲು ತೀರ್ಮಾನಿಸಲಾಗಿದೆ. ಈ ದಿಢೀರ್‌ ಬೆಳವಣಿಗೆ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಹೈಕಮಾಂಡ್‌ ಜತೆ ಚರ್ಚಿಸಲು ಪ್ರವಾಸ ಮೊಟಕುಗೊಳಿಸಿ ಬುಧವಾರ ಮಧ್ಯರಾತ್ರಿಯೇ ಮಲೇಶಿಯಾದಿಂದ ನಿರ್ಗಮಿಸಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಸಂಪುಟ ವಿಸ್ತರಣೆ ಅನುಮಾನ? ಆದರೆ, ಇನ್ನೊಂದು ಮೂಲ ಗಳ ಪ್ರಕಾ ರ ಧನುರ್ಮಾಸ ಕಳೆದು ಸಂಕ್ರಾಂತಿ ವೇಳೆಗೆ ಸಂಪುಟ
ವಿಸ್ತರಣೆಯಾಗಬಹುದು ಎನ್ನಲಾಗಿದೆ. ಐದು ರಾಜ್ಯಗಳ ಫಲಿತಾಂಶದ ನಂತರ ತಕ್ಷಣಕ್ಕೆ ಸಂಪುಟ ವಿಸ್ತರಣೆ ಮಾಡಲೇಬೇಕಾದ ಅನಿವಾರ್ಯತೆ ಇಲ್ಲ. ಸಂಕ್ರಾಂತಿ ನಂತರ ಅಥವಾ ಲೋಕಸಭೆ ಚುನಾವಣೆ ನಂತರ ಸಂಪುಟ ವಿಸ್ತರಣೆ ಮಾಡಬಹುದಾ ಎಂಬ ಚಿಂತನೆ ನಡೆಯುತ್ತಿದೆ. ಲೋಕಸಭೆ ಚುನಾವಣೆ ನಂತರ ನಿಷ್ಕ್ರಿಯ ಸಚಿವರನ್ನು ಕೈ ಬಿಟ್ಟು ಮತ್ತಷ್ಟು ಹೊಸಬರಿಗೆ ಅವಕಾಶ ನೀಡುವ ಭರವಸೆ ನೀಡಿ ಸಂಪುಟ ವಿಸ್ತರಣೆ ಮುಂದೂಡಬಹುದು ಎಂದು ಹೇಳಲಾಗುತ್ತಿದೆ. ಮತ್ತೂಂದು ಮೂಲಗಳ ಪ್ರಕಾರ, ಡಿ.22ರಂದು ಸಂಪುಟ ವಿಸ್ತರಣೆಯಾಗದಿದ್ದರೂ ಅವಕಾಶ ಸಿಗದವರು ಬಂಡಾಯ ಏಳುವ ಪರಿಸ್ಥಿತಿಯೂ ಈಗಿಲ್ಲ. ಹೀಗಾಗಿ, ಸಂಪುಟ ವಿಸ್ತರಣೆ ಜತೆಗೆ, ನಿಗಮ ಮಂಡಳಿ ಅಧ್ಯಕ್ಷ-ಉಪಾಧ್ಯಕ್ಷರ ನೇಮಕ ಮಾಡಿದರೆ ಲೋಕಸಭೆ ಚುನಾವಣೆಗೆ ಸಜ್ಜಾಗಲು ಅನುಕೂಲ ವಾಗುತ್ತದೆ. ಸಚಿವ ಸ್ಥಾನ ಸಿಗದ ಅಸಮಾಧಾನಿತರಿಗೆ ಸಂಸದೀಯ ಕಾರ್ಯದರ್ಶಿ ಹುದ್ದೆ ನೀಡಿ ಸಮಾಧಾನ ಪಡಿಸಬಹುದು ಎಂಬ ಲೆಕ್ಕಾಚಾರ ನಡೆದಿದೆ.

ಮೆತ್ತಗಾದ ಸಚಿವ ಜಾರಕಿಹೊಳಿ ಬಂಡಾಯ ಏನಿಲ್ಲ ಎನ್ನುತ್ತಲೇ ಸಮಯ ಸಿಕ್ಕಾಗಲೆಲ್ಲಾ ಪಕ್ಷಕ್ಕೆ ಮುಜುಗರ ಉಂಟು ಮಾಡುತ್ತಿರುವ ಸಚಿವ ರಮೇಶ್‌ ಜಾರಕಿಹೊಳಿ, ಪಂಚರಾಜ್ಯಗಳ ಫಲಿತಾಂಶದ ನಂತರ ಮೆತ್ತಗಾಗಿದ್ದಾರೆ. ಸಂಪುಟ ವಿಸ್ತರಣೆ ಸಂದರ್ಭದಲ್ಲಿ ನಗರಾಭಿವೃದ್ಧಿ ಖಾತೆಯ ಭರವಸೆಯೂ ಅವರಿಗೆ ಸಿಕ್ಕಿದೆ ಎನ್ನಲಾಗಿದೆ. ಆದರೆ, ರಮೇಶ್‌ ಜಾರಕಿಹೊಳಿ ಅವರನ್ನು ಕೈ ಬಿಟ್ಟು ಸತೀಶ್‌ ಜಾರಕಿಹೊಳಿ ಅವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲು ಕಾಂಗ್ರೆಸ್‌ ಹೈಕಮಾಂಡ್‌ ನಿರ್ಧರಿಸಿದೆ ಎಂದೂ ಹೇಳಲಾಗಿದೆ. ಇದರ ಸುಳಿವು ಅರಿತಿರುವ ರಮೇಶ್‌ ಜಾರಕಿಹೊಳಿ ಮೆತ್ತಗಾಗಿದ್ದಾರೆ ಎನ್ನಲಾಗಿದೆ.

ಡಿ.21ರಂದು ದೆಹಲಿಗೆ ತೆರಳುತ್ತಿದ್ದು, ಸಂಪುಟ ವಿಸ್ತರಣೆ ಸಂಬಂಧ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಜತೆ ಚರ್ಚಿಸಿ ಡಿ.22 ರಂದು ಸಂಪುಟ ವಿಸ್ತರಣೆ ಮಾಡಲು ಪ್ರಯತ್ನಿಸಲಾಗುವುದು.
– ಡಾ.ಜಿ.ಪರಮೇಶ್ವರ್‌, ಉಪ ಮುಖ್ಯಮಂತ್ರಿ

ಟಾಪ್ ನ್ಯೂಸ್

1-c-ss

IAS Transfer: ಅಧಿಕಾರಿ ಸಿ. ಶಿಖಾ ಕೇಂದ್ರ ಸೇವೆಗೆ ನಿಯುಕ್ತಿ

Darshan (2)

Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್‌

1-qaaa

T20; ಸಂಜು, ತಿಲಕ್‌ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-saaaa

ಮಧ್ಯವರ್ತಿಗಳಿಂದ ಮಾತ್ರ ‘ಸಕಾಲ’ಕ್ಕೆ ಸೇವೆ!

1-c-ss

IAS Transfer: ಅಧಿಕಾರಿ ಸಿ. ಶಿಖಾ ಕೇಂದ್ರ ಸೇವೆಗೆ ನಿಯುಕ್ತಿ

Darshan (2)

Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್‌

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

CID

CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

1-saaaa

ಮಧ್ಯವರ್ತಿಗಳಿಂದ ಮಾತ್ರ ‘ಸಕಾಲ’ಕ್ಕೆ ಸೇವೆ!

Farmer

Bagar Hukum ಅರ್ಜಿ ವಿಲೇವಾರಿ ಬಡ ರೈತರಲ್ಲಿ ಆಶಾವಾದ

1-c-ss

IAS Transfer: ಅಧಿಕಾರಿ ಸಿ. ಶಿಖಾ ಕೇಂದ್ರ ಸೇವೆಗೆ ನಿಯುಕ್ತಿ

Darshan (2)

Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್‌

1-qaaa

T20; ಸಂಜು, ತಿಲಕ್‌ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.