ಸ್ವಚ್ಛ ಪುತ್ತೂರು ನಿರ್ಮಾಣಕ್ಕೆ  ಸರ್ವ ಪ್ರಯತ್ನ


Team Udayavani, Dec 13, 2018, 11:38 AM IST

13-december-5.gif

ನಗರ: ಬಗೆದಷ್ಟು ಹೊರಗೆ ಬರುತ್ತಿರುವ ತ್ಯಾಜ್ಯಗಳ ರಾಶಿಗೆ ಮುಕ್ತಿ ನೀಡುವುದು ಸವಾಲೇ ಸರಿ. ಸ್ವಚ್ಛತಾ ಕಾರ್ಯಕ್ರಮ, ತ್ಯಾಜ್ಯ ವಿಲೇವಾರಿ ಹೊರತುಪಡಿಸಿ, ಸಾರ್ವಜನಿಕರು ಜಾಗೃತರಾಗದೇ ಹೋದರೆ ಸ್ವಚ್ಛ ಪುತ್ತೂರು ಕನ್ನಡಿಯೊಳಗಿನ ಗಂಟಾದೀತು.

ಕೆಲ ಸಮಯಗಳ ಹಿಂದೆ ಪುತ್ತೂರು ಪೇಟೆಯ ಹಲವು ಕಡೆಗಳಲ್ಲಿ ತ್ಯಾಜ್ಯಗಳ ರಾಶಿಯೇ ಕಂಡುಬರುತ್ತಿತ್ತು. ಆಗಿನ ಸ್ಥಳೀಯಾಡಳಿತ ತ್ಯಾಜ್ಯ ಸಂಗ್ರಹಕ್ಕಾಗಿ ಅಲ್ಲಲ್ಲಿ ಇಟ್ಟಿದ್ದ ಡಬ್ಬಗಳು ತುಂಬಿ ತುಳುಕುತ್ತಿದ್ದವು. ಇದರ ವಿಲೇವಾರಿಗೆ ಏನೆಲ್ಲ ಕಸರತ್ತು ನಡೆಸಿದರೂ ಯಾವೊಂದು ಕೆಲಸವೂ ಫಲಪ್ರದವಾಗಲಿಲ್ಲ. ಕೊನೆಗೆ ತ್ಯಾಜ್ಯ ಡಬ್ಬಗಳನ್ನೇ ತೆಗೆದು ಬದಿಗಿರಿಸಲಾಯಿತು. ಡಬ್ಬ ಇಲ್ಲದಿದ್ದರೂ ತ್ಯಾಜ್ಯ ಎಸೆದು ರೂಢಿಯಾಗಿದ್ದ ಜನರು ಮತ್ತೆ ಅಲ್ಲಿಯೇ ತ್ಯಾಜ್ಯ ಸುರಿಯಲಾರಂಭಿಸಿದರು. ಇದನ್ನು ತಡೆಗಟ್ಟಲು ಎಚ್ಚರಿಕೆ ಫಲಕ ಹಾಕುವುದು ಅನಿವಾರ್ಯವಾಯಿತು.

ಸೂಚನೆ ಕೊಟ್ಟರೂ ಕ್ಯಾರೇ ಇಲ್ಲ
ಸದ್ಯದ ಪರಿಸ್ಥಿತಿಯಲ್ಲಿ ಪುತ್ತೂರು ಪೇಟೆಯ ಅಲ್ಲಲ್ಲಿ ಎಚ್ಚರಿಕೆ ಫಲಕಗಳು ರಾರಾಜಿಸುತ್ತಿವೆ. ಆದರೆ ತ್ಯಾಜ್ಯ ರಾಶಿ ಹಾಕುವ ಪ್ರಸಂಗ ಹೆಚ್ಚುತ್ತಲೇ ಇದೆ. ಇದಕ್ಕೆ ಕಡಿವಾಣ ಹಾಕಲು ಮನೆ, ಅಂಗಡಿ ಬಾಗಿಲಿನಿಂದ ತ್ಯಾಜ್ಯ ಸಂಗ್ರಹಿಸುವ ಪ್ರಕ್ರಿಯೆ ಇನ್ನೂ ಪೂರ್ಣ ಪ್ರಮಾಣದಲ್ಲಿ ಜಾರಿಯಾಗಿಲ್ಲ.

ದಿನ ಬಿಟ್ಟು ದಿನ ತ್ಯಾಜ್ಯ ಸಂಗ್ರಹ ಮಾಡಲಾಗುತ್ತಿದೆ. ಇದಕ್ಕೆ ಪೂರಕವಾಗಿ ತ್ಯಾಜ್ಯ ವಿಂಗಡಣೆಗಾಗಿ ತಂದಿರಿಸಿದ ಬಕೆಟ್‌ಗಳನ್ನು ಎಲ್ಲ ಮನೆಗಳಿಗೆ ಹಂಚುವ ಕೆಲಸ ಇನ್ನೂ ಪೂರ್ಣ ಪ್ರಮಾಣದಲ್ಲಿ ನಡೆದಿಲ್ಲ.

ಕೆಲ ವಾರ್ಡ್‌ಗಳಲ್ಲಿ ತ್ಯಾಜ್ಯ ಸಮಸ್ಯೆ ಹೆಚ್ಚುತ್ತಿದ್ದಂತೆ, ಸ್ಥಳೀಯ ವಾರ್ಡ್‌ ಸದಸ್ಯರಿಗೆ ದೂರು ನೀಡಿದ್ದಾರೆ. ತತ್‌ ಕ್ಷಣ ಅಧಿಕಾರಿಗಳನ್ನು ಸಂಪರ್ಕಿಸಿ, ನೇರವಾಗಿ ತ್ಯಾಜ್ಯ ವಿಂಗಡಣೆಯ ಬಕೆಟ್‌ ಹಸ್ತಾಂತರಿಸುವ ಕೆಲಸ ನಡೆದಿದೆ. ಇನ್ನೂ ಕೆಲ ವಾರ್ಡ್‌ಗಳಲ್ಲಿ ಇದನ್ನೇ ಅನುಕರಿಸಲಾಗಿದೆ. ಅಂದರೆ ವಾರ್ಡ್‌ ಸದಸ್ಯರೇ ಮುಂದಾಗಿ ಬಕೆಟ್‌ಗಳನ್ನು ವಿತರಿಸುತ್ತಿರುವುದು ಕಂಡುಬರುತ್ತಿದೆ.

ನಾಗರಿಕರಿಗೆ ಹಂಚಲೆಂದು ಪುತ್ತೂರು ನಗರಸಭೆ ತಂದಿರಿಸಿದ 11 ಸಾವಿರ ಬಕೆಟ್‌ ಗಳ ಪೈಕಿ 6 ಸಾವಿರದಷ್ಟು ಬಕೆಟ್‌ಗಳನ್ನು ವಿತರಿಸಲಾಗಿದೆ. ಉಳಿದ ಬಕೆಟ್‌ಗಳು ಗೋದಾಮಿನಲ್ಲೇ ರಾಶಿ ಬಿದ್ದುಕೊಂಡಿವೆ.

ನಾಗರಿಕರು ಎಚ್ಚೆತ್ತುಕೊಳ್ಳಿ
ಮನೆ ಹಾಗೂ ಅಂಗಡಿಗಳಿಂದ ತ್ಯಾಜ್ಯ ಸಂಗ್ರಹಿಸಿ ವಿಲೇವಾರಿ ಮಾಡಿದ ಮಾತ್ರಕ್ಕೆ ಪುತ್ತೂರು ಸ್ವಚ್ಛ ಆಗುತ್ತದೆ ಎಂದು ಭಾವಿಸಿದರೆ ತಪ್ಪಾದೀತು. ಯಾಕೆಂದರೆ ಪುತ್ತೂರಿನ ಅಲ್ಲಲ್ಲಿ ಕಾಣಸಿಗುವ ತ್ಯಾಜ್ಯಕ್ಕೆ ನಾಗರಿಕರು ಕಾರಣ. ಅಲ್ಲಲ್ಲಿ ತ್ಯಾಜ್ಯ ಎಸೆಯುತ್ತಿರುವುದು, ಶುಚಿತ್ವಕ್ಕೆ ಗಮನ ಕೊಡದೇ ಇರುವುದು ಇತ್ಯಾದಿ. ಇದರಿಂದಾಗಿ ದಿನನಿತ್ಯ ಎಲ್ಲೆಂದರಲ್ಲಿ ತ್ಯಾಜ್ಯ ಕಾಣಸಿಗುತ್ತದೆ. ಇದಕ್ಕೆ ಪೂರ್ಣವಿರಾಮ ಹಾಕಬೇಕಾದರೆ ಸ್ವತಃ ಜನರಿಗೇ ಅರಿವು ಮೂಡಬೇಕಷ್ಟೇ.

ಎಸೆಯುವುದು ಕಡಿಮೆಯಾಗಿಲ್ಲ
ಪೇಟೆಯ ಆಯಕಟ್ಟಿನ ಪ್ರದೇಶಗಳಲ್ಲಿ ತ್ಯಾಜ್ಯ ಎಸೆಯುವ ಪ್ರಕರಣಗಳು ನಡೆಯುತ್ತಿವೆ. ಪುತ್ತೂರು- ಉಪ್ಪಿನಂಗಡಿ ರಸ್ತೆ, ಪುತ್ತೂರು ಮುಖ್ಯರಸ್ತೆಯ ಅಲ್ಲಲ್ಲಿ ತ್ಯಾಜ್ಯ ರಾಶಿ ಕಂಡುಬರುತ್ತಿದೆ. ಇಂತಹ ವಾತಾವರಣ ದೂರ ಆಗಬೇಕಿದೆ.

ಉಳಿದ ಬಕೆಟ್‌ ವಿತರಿಸುತ್ತೇವೆ
ತ್ಯಾಜ್ಯ ವಿಲೇವಾರಿ ನಡೆಯುತ್ತಿದೆ. ಗುತ್ತಿಗೆ ವಹಿಸಿಕೊಂಡ ಸಂಸ್ಥೆ ಕೆಲಸ ನಿರ್ವಹಿಸುತ್ತಿದೆ. ಕಸ ವಿಂಗಡಣೆ ಮಾಡಿ ಕೊಡಲು ಈಗಾಗಲೇ ಸುಮಾರು 6 ಸಾವಿರದಷ್ಟು ಬಕೆಟ್‌ಗಳನ್ನು ವಿತರಿಸಲಾಗಿದೆ. ಉಳಿದದ್ದನ್ನು ವಿತರಿಸುತ್ತೇವೆ.
– ರೂಪಾ ಶೆಟ್ಟಿ, ಪೌರಾಯುಕ್ತೆ, ಪುತ್ತೂರು ನಗರಸಭೆ

ವಿಶೇಷ ವರದಿ

ಟಾಪ್ ನ್ಯೂಸ್

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

7(1

Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.