ರಿಸಲ್ಟ ಕೊಡಿ, ಪ್ರೋತ್ಸಾಹಧನ ತಗೊಳ್ಳಿ

Team Udayavani, Dec 13, 2018, 12:55 PM IST

blore-6.jpg

ಬೆಂಗಳೂರು: “ಉತ್ತಮ ಫ‌ಲಿತಾಂಶ ಕೊಡಿ, ಪ್ರೋತ್ಸಾಹ ಧನ ಪಡೆಯಿರಿ’. ತನ್ನ ಶಾಲಾ-ಕಾಲೇಜುಗಳಲ್ಲಿನ ಫ‌ಲಿತಾಂಶ ವೃದ್ಧಿಗೆ ಬಿಬಿಎಂಪಿ ರೂಪಿಸಿರುವ ವಿನೂತನ ಯೋಜನೆಯಿದು. ಬಿಬಿಎಂಪಿ ಶಾಲಾ-ಕಾಲೇಜುಗಳಿಗೆ ಹೆಚ್ಚಿನ ವಿದ್ಯಾರ್ಥಿ ಗಳು ಪ್ರವೇಶ ಪಡೆಯಲು ಹಲವು ಕಾರ್ಯ ಕ್ರಮಗಳನ್ನು ರೂಪಿಸಲಾಗಿದೆ. ಜತೆಗೆ ತಂತ್ರಜ್ಞಾನ ಆಧಾರಿತ ಶಿಕ್ಷಣ ಮಕ್ಕಳಿಗೆ ದೊರೆಯಬೇಕೆಂಬ ಉದ್ದೇಶದಿಂದ ಮೈಕ್ರೋಸಾಫ್ಟ್ ಹಾಗೂ ಟೆಕ್‌ ಅವಾಂತ್‌ ಗಾರ್ಡ್‌ ಸಂಸ್ಥೆಗಳ ಸಹಯೋಗದಲ್ಲಿ “ಬಿಬಿಎಂಪಿ ರೋಶಿನಿ’ ಯೋಜನೆ ಜಾರಿಗೆ ತಂದಿದ್ದು, ಇದೀಗ ಉತ್ತಮ ಫ‌ಲಿತಾಂಶ ನೀಡುವ ಶಿಕ್ಷಕರಿಗೆ ಪ್ರೋತ್ಸಾಹ ಧನ ನೀಡಲು ತೀರ್ಮಾನಿಸಿದೆ.

ಕಳೆದ ಮೂರು ವರ್ಷಗಳಿಂದ ಬಿಬಿಎಂಪಿ ಶಾಲಾ-ಕಾಲೇಜುಗಳಿಗೆ ಸೇರುವ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಆದರೆ, ಫ‌ಲಿತಾಂಶ ಪ್ರಮಾಣ ಮಾತ್ರ ಶೇ.70ರಷ್ಟು ದಾಟುತ್ತಿಲ್ಲ. ಉತ್ತಮ ಫ‌ಲಿತಾಂಶ ತರುವಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿದ್ದು, ಆ ಹಿನ್ನೆಲೆಯಲ್ಲಿ ಉತ್ತಮ ಫ‌ಲಿತಾಂಶ ನೀಡುವ ಶಾಲೆಗಳಲ್ಲಿ ಬೋಧನೆ ಮಾಡುವ ಶಿಕ್ಷಕರಿಗೆ ಪ್ರೋತ್ಸಾಹ ಧನ ನೀಡಲು ಮುಂದಾಗಿದೆ.
 
ಶಾಲೆಗಳು ಪಡೆಯುವ ಫ‌ಲಿತಾಂಶದ ಆಧಾರದ ಮೇಲೆ ಶಿಕ್ಷಕರಿಗೆ ಪ್ರೋತ್ಸಾಹ ಧನ ನೀಡಲಾಗುತ್ತದೆ. ಅದರಂತೆ ಶೇ.60ರಿಂದ 70, 70 ರಿಂದ 80, 80 ರಿಂದ 90 ಹಾಗೂ 90 ರಂದ 100ರಷ್ಟು ಫ‌ಲಿತಾಂಶ ಪಡೆಯುವ ಶಾಲೆಗಳಿಗೆ ಒಂದೊಂದು ರೀತಿಯ ಪ್ರೋತ್ಸಾಹ ಧನ ಹಂಚಿಕೆ ಮಾಡಲಾಗುತ್ತದೆ. ಇದರಿಂದಾಗಿ ಶಾಲಾ-ಕಾಲೇಜುಗಳ ನಡುವೆ ಗುಣಾತ್ಮಕ ಪೈಪೋಟಿ ಏರ್ಪಡಲಿದ್ದು, ಶಿಕ್ಷಕರಲ್ಲಿಯೂ ಉತ್ಸಾಹ ಹೆಚ್ಚಾಗಲಿದೆ ಎನ್ನುತ್ತಾರೆ ಪಾಲಿಕೆಯ ಅಧಿಕಾರಿ.

ಇದರೊಂದಿಗೆ ಪರೀಕ್ಷೆ ಸಂದರ್ಭಗಳಲ್ಲಿ ಬಿಬಿಎಂಪಿ ಶಾಲೆಗಳಲ್ಲಿನ ಸ್ಮಾರ್ಟ್‌ಟಿವಿ ಮೂಲಕ ಪಾಠ ಪುನರಾವರ್ತನೆ ಮಾಡಿಕೊಳ್ಳಲು ಶಾಲೆಗೆ ಬರುವಂತಹ ವಿದ್ಯಾರ್ಥಿಗಳಿಗೆ ಸಂಜೆ ತಿಂಡಿ ನೀಡಲು ಸಹ ಪಾಲಿಕೆ ಮುಂದಾಗಿದೆ.

ಪ್ರತ್ಯೇಕ ಪರೀಕ್ಷಾ ಮಂಡಳಿ ರಚನೆ: ಸರ್ಕಾರದ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಮಾದರಿಯಲ್ಲಿಯೇ ಪಾಲಿಕೆಯಲ್ಲಿ ಇದೇ ಮೊದಲ ಬಾರಿಗೆ “ಬಿಬಿಎಂಪಿ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ’ ರಚಿಸಲಾಗಿದೆ. ಸರ್ಕಾರ ಮಂಡಳಿಯ ನಡೆಸುವಂತೆಯೇ ಪಾಲಿಕೆಯ ಮಂಡಳಿಯೂ ಕಾರ್ಯನಿರ್ವಹಿಸಲಿದೆ. ಮಂಡಳಿಯ ಪಾಲಿಕೆಯ ಪ್ರೌಢಶಾಲೆಗಳ ಎಲ್ಲ ಪ್ರಾಂಶುಪಾಲರು, ಶಿಕ್ಷಣಾಧಿಕಾರಿಗಳು, ಶಿಕ್ಷಣ ವಿಭಾ ಗದ ಅಧಿಕಾರಿಗಳು ಇರಲಿದ್ದಾರೆ.

ಎರಡು ಪೂರ್ವ ಸಿದ್ಧತಾ ಪರೀಕ್ಷೆ: ಸರ್ಕಾರದ ಪರೀಕ್ಷಾ ಮಂಡಳಿಯಿಂದ ಒಮ್ಮೆ ಮಾತ್ರ ಪೂರ್ವ ಸಿದ್ಧತಾ ಪರೀಕ್ಷೆ ನಡೆಸಲಾಗುತ್ತದೆ. ಆದರೆ, ಪಾಲಿಕೆಯಿಂದ ಮುಖ್ಯ ಪರೀಕ್ಷೆಯೊಳಗೆ ಎರಡು ಬಾರಿ ಪೂರ್ವ ಸಿದ್ಧತಾ ಪರೀಕ್ಷೆ ನಡೆಸಲು ಯೋಜನೆ ರೂಪಿಸಲಾಗಿದೆ. ಪರೀಕ್ಷೆಯನ್ನೂ ಸಹ ಸರ್ಕಾರದ ಪರೀಕ್ಷಾ ಮಂಡಳಿ ನಡೆಸುವಂತಹ ರೀತಿಯಲ್ಲಿಯೇ ನಡೆಸಲು ತೀರ್ಮಾನಿಸಿದ್ದು, ಇದರಿಂದಾಗಿ ಮಕ್ಕಳಿಗೆ ಪರೀಕ್ಷೆಯ ಭಯ ಹೋಗಲಿದೆ. ಜತೆಗೆ ಪೂರ್ವ ಸಿದ್ಧತಾ ಪರೀಕ್ಷೆ ಗಳು ಮುಖ್ಯಪರೀಕ್ಷೆಗೆ ಅನುಕೂಲವಾಗಲಿದ್ದು, ಹೆಚ್ಚಿನ ಅಂಕಗಳನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ಪಾಲಿಕೆಯ ಶಿಕ್ಷಣ ವಿಭಾಗದ ಅಧಿಕಾರಿಗಳು “ಉದಯವಾಣಿ’ಗೆ ತಿಳಿಸಿದ್ದಾರೆ.

ಸೋಮವಾರದಿಂದ ಪೂರ್ವಸಿದ್ಧತಾ ಪರೀಕ್ಷೆ ಆರಂಭ: ಬಿಬಿಎಂಪಿಯ 32 ಪ್ರೌಢ ಶಾಲೆಗಳಲ್ಲಿ ಸೋಮವಾರದಿಂದ ಮೊದಲ ಪೂರ್ವ ಸಿದ್ಧತಾ ಪರೀಕ್ಷೆ ಆರಂಭವಾಗಲಿದೆ. ಅದರಂತೆ ಈಗಾಗಲೇ ಪ್ರತಿಯೊಂದು ವಿಷಯ ನಾಲ್ಕು ಪ್ರಶ್ನೆ ಪತ್ರಿಕೆಗಳು ಮಂಡಳಿಗೆ ಸಲ್ಲಿಕೆಯಾಗಿದ್ದು, ಆ ಪೈಕಿ ಒಂದು ಪ್ರಶ್ನೆ ಪತ್ರಿಕೆ ಯನ್ನು ಹಿರಿಯ ಅಧಿಕಾರಿಗಳು ಆಯ್ಕೆ ಮಾಡಿದ್ದಾರೆ. ಜತೆಗೆ ಪ್ರಶ್ನೆ ಪತ್ರಿಕೆ ಹಾಗೂ ಉತ್ತರ ಪತ್ರಿಕೆಯೂ ಸಹ ಸೋಮವಾರ ಬೆಳಗ್ಗೆ 8 ಗಂಟೆಗೆ ಶಾಲೆಗಳಿಗೆ ಹೋಗಲಿದೆ. 

ಬಿಬಿಎಂಪಿ ಶಾಲೆಗಳ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಈಗಾಗಲೇ ಬಿಬಿಎಂಪಿ ರೋಶಿನಿ ಯೋಜನೆ ಜಾರಿಯಾಗಿದೆ. ಅದರಂತೆ ಫ‌ಲಿತಾಂಶ ಹೆಚ್ಚಿಸುವ ಉದ್ದೇಶದಿಂದ ಎರಡು ಬಾರಿ ಪೂರ್ವ ಸಿದ್ಧತಾ ಪರೀಕ್ಷೆ ನಡೆಸಲು ತೀರ್ಮಾನಿಸಿದ್ದು, ಉತ್ತಮ ಫ‌ಲಿತಾಂಶ ಬರುವ ಶಾಲೆಗಳ ಶಿಕ್ಷಕರಿಗೆ ಪ್ರೋತ್ಸಾಹ ಧನ ನೀಡಲಾಗುವುದು.
ಎನ್‌.ಮಂಜುನಾಥ ಪ್ರಸಾದ್‌, ಬಿಬಿಎಂಪಿ ಆಯುಕ್ತರು

ವೆಂ.ಸುನೀಲ್‌ ಕುಮಾರ್‌

ಟಾಪ್ ನ್ಯೂಸ್

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SPB: ತಿರುವಳ್ಳೂರ್ ನಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸ್ಮಾರಕ ನಿರ್ಮಾಣ

SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

SPB: ತಿರುವಳ್ಳೂರ್ ನಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸ್ಮಾರಕ ನಿರ್ಮಾಣ

SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ

naa ninna bidalare movie releasing today

Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1

Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.