ಎನ್‌ಜಿಟಿ ವಿರುದ್ಧ ಸುಪ್ರೀಂಗೆ ಮೇಲ್ಮನವಿ
Team Udayavani, Dec 14, 2018, 6:00 AM IST
ಬೆಳಗಾವಿ: ರಾಜ್ಯ ಸರ್ಕಾರದ ವಿರುದ್ಧ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಜಾರಿ ಮಾಡಿರುವ ಮಾರ್ಗದರ್ಶಿ ಸೂತ್ರಗಳ
ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಬೆಳಗಾವಿಯಲ್ಲಿ ಈ ಬಗ್ಗೆ ಗುರುವಾರ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಅಡ್ವೋಕೇಟ್ ಜನರಲ್ ಹಾಗೂ ಕಾನೂನು ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಿ ಮುಂದಿನ ನಡೆ ಬಗ್ಗೆ ಚರ್ಚೆ ನಡೆಸಿದರು. ಸಭೆಯಲ್ಲಿ ಭಾಗವಹಿಸಿದ್ದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಎ.ಎಸ್. ಪೊನ್ನಣ್ಣ, ರಾಜ್ಯ ಸರ್ಕಾರಕ್ಕೆ ಮೂರು ಸಾಧ್ಯತೆಗಳ ಬಗ್ಗೆ ವಿವರಣೆ ನೀಡಿದ್ದು, ಈ ಪೈಕಿ ಪ್ರತ್ಯೇಕ ವಿಧೇಯಕ ಜಾರಿ ಮಾಡಿ ಎನ್‌ಜಿಟಿ ಚಾಟಿಯಿಂದ ತಪ್ಪಿಸಿಕೊಳ್ಳುವುದು ಅಥವಾ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವುದಕ್ಕೆ ಅವಕಾಶ ಇದೆ ಎಂದು ಹೇಳಿದ್ದಾರೆ. ಅಲ್ಲದೆ ಹಸಿರು ಪೀಠದಲ್ಲಿಯೇ ಮೇಲ್ಮನವಿ ಸಲ್ಲಿಸಲು ಅವಕಾಶ ಇದೆ ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಬೆಳ್ಳಂದೂರು ಕೆರೆ ವಿಷಯದಲ್ಲಿ ನ್ಯಾಯ ಮಂಡಳಿಯಲ್ಲಿ ಠೇವಣಿ ಇಡಬೇಕೆಂದು ಎನ್‌ಜಿಟಿ ಆದೇಶಿಸಿರುವ ಬಗ್ಗೆ ಸಭೆಯಲ್ಲಿ ಆಕ್ಷೇಪ ವ್ಯಕ್ತವಾಗಿದೆ ಎಂದು ತಿಳಿದು ಬಂದಿದೆ. 75 ಮೀಟರ್‌ವರೆಗೆ ಬಫರ್ ಝೊನ್ ಪ್ರದೇಶ ಮೀಸಲಿಡುವಂತೆ ಕರ್ನಾಟಕಕ್ಕೆ ಮಾತ್ರ ಆದೇಶ ಮಾಡಿರುವ ಬಗ್ಗೆಯೂ ರಾಜ್ಯ ಸರ್ಕಾರ ಅಸಮಾಧಾನ ಹೊಂದಿದೆ ಎಂದು ತಿಳಿದು ಬಂದಿದ್ದು, ನ್ಯಾಯಮಂಡಳಿ ಆದೇಶ
ಪಾಲಿಸಿದರೆ ಅರ್ಧ ಬೆಂಗಳೂರು ನಾಶಪಡಿಸಬೇಕಾಗುತ್ತದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ ಎಂದು ತಿಳಿದು ಬಂದಿದೆ.
ಬಫರ್ ಝೊನ್ ಬಿಡುವ ವಿಚಾರದಲ್ಲಿ ಎನ್‌ಜಿಟಿ ದೇಶದ ಎಲ್ಲ ರಾಜ್ಯಗಳಿಗೂ ಏಕ ರೂಪದ ನಿಯಮ ರೂಪಿಸಬೇಕು ಎಂದು
ಮೇಲ್ಮನವಿ ಸಂದರ್ಭದಲ್ಲಿ ಪ್ರಶ್ನಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಬಗ್ಗೆ ಸೋಮವಾರದ ಒಳಗೆ ಸ್ಪಷ್ಟ ಅಭಿಪ್ರಾಯ ನೀಡುವಂತೆ ಅಡ್ವೋಕೇಟ್ ಜನರಲ್ ಹಾಗೂ ಕಾನೂನು ಇಲಾಖೆ ಅಧಿಕಾರಿಗಳಿಗೆ ಉಪ ಮುಖ್ಯಮಂತ್ರಿ ಸೂಚಿಸಿದ್ದಾರೆ ಎಂದು
ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
Poster Dispute: ಭಾರತ ಭೂಶಿರ ವಿರೂಪ: ಬಿಜೆಪಿಯ ಇಂದಿನ ಪ್ರತಿಭಟನೆ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.