ಡಿ. 14: ಹೋರಾಟ ಸಮಿತಿಯಿಂದ ಬೃಹತ್ ಪ್ರತಿಭಟನೆ
Team Udayavani, Dec 14, 2018, 1:40 AM IST
ಮಡಿಕೇರಿ: ಜಿಲ್ಲೆಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಲ್ಲಿ ಸಂತ್ರಸ್ತರಾದ ಕುಟುಂಬಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಹಾಗೂ ಜಿಲ್ಲಾಡಳಿತ ತಳೆದಿರುವ ವಿಳಂಬ ಧೋರಣೆಯನ್ನು ವಿರೋಧಿಸಿ ಡಿ.14ರಂದು ಮಡಿಕೇರಿಯಲ್ಲಿ ಸಂತ್ರಸ್ತರ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಪ್ರಕೃತಿ ವಿಕೋಪ ಪರಿಹಾರ ಹೋರಾಟ ಸಮಿತಿ ಘೋಷಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಅಧ್ಯಕ್ಷ ಎಂ.ಬಿ. ದೇವಯ್ಯ ಅವರು, ಪ್ರಕೃತಿ ವಿಕೋಪದಲ್ಲಿ ಸಂತ್ರಸ್ತರಾದ ಕುಟುಂಬಗಳಿಗೆ ವಸತಿ ಸೌಲಭ್ಯ ಕಲ್ಪಿಸುವುದರೊಂದಿಗೆ ಇತರ ಪರಿಹಾರ ಕಾರ್ಯಕ್ರಮಗಳನ್ನೂ ರೂಪಿಸಬೇಕೆಂದು ಸಮಿತಿ ಒತ್ತಾಯಿಸುತ್ತಲೇ ಬಂದಿದ್ದು, ಈ ಸಂಬಂಧವಾಗಿ ಜಿಲ್ಲಾಡಳಿತ, ಸರಕಾರ ಹಾಗೂ ಸ್ವತಃ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ. ನಿವೇಶನಕ್ಕೆ ಜಾಗ ಗುರುತಿಸುವುದು, ಮನೆ ನಿರ್ಮಿಸಿಕೊಡುವುದನ್ನು ಬಿಟ್ಟು ಇತರ ಯಾವುದೇ ಪರಿಹಾರ ಕಾರ್ಯಗಳನ್ನು ಕೈಗೆತ್ತಿಕೊಂಡಿಲ್ಲ ಎಂದು ಆರೋಪಿಸಿದರು.
ಪ್ರಕೃತಿ ವಿಕೋಪ ಸಂಭವಿಸಿದ ಪ್ರದೇಶಗಳ ಹೂಳೆತ್ತುವುದು, ಸಂತ್ರಸ್ತರ ಮನೆಗಳಿಗೆ ರಸ್ತೆ ನಿರ್ಮಿಸುವುದು, ವಿದ್ಯಾಭ್ಯಾಸಕ್ಕೆ ಸೂಕ್ತ ವ್ಯವಸ್ಥೆ ಮಾಡುವುದು ಸೇರಿದಂತೆ ಆದ್ಯತೆಯ ಕಾರ್ಯಕ್ರಮಗಳ ಬಗ್ಗೆ ಸರಕಾರ ಇಂದಿಗೂ ನಿರ್ಲಕ್ಷ್ಯ ವಹಿಸಿದೆ. ಮುಂದಿನ ಎಪ್ರಿಲ್-ಮೇ ತಿಂಗಳು ಗಳಲ್ಲಿ 3-4 ಮಳೆಯಾದರೆ ಪ್ರಕೃತಿ ವಿಕೋಪ ಸಂಭವಿಸಿದ ಪ್ರದೇಶಗಳಲ್ಲಿ ಪ್ರಸಕ್ತ ಉಳಿದುಕೊಂಡಿರುವ ಗ್ರಾಮಸ್ಥರು ಗ್ರಾಮವನ್ನೇ ತೊರೆಯಬೇಕಾದ ಪರಿಸ್ಥಿತಿ ಇದೆ ಎಂದು ದೇವಯ್ಯ ಆತಂಕ ವ್ಯಕ್ತಪಡಿಸಿದರು.
ಸುಮಾರು 840 ಸಂತ್ರಸ್ತ ಕುಟುಂಬಗಳಿಗೆ ಮನೆ ನಿರ್ಮಿಸಿಕೊಡಲು ಸರಿಸುಮಾರು 8 ತಿಂಗಳುಗಳೇ ಬೇಕಾಗಲಿದೆ. ಈ ನಡುವೆ ಡಿ.30ರೊಳಗೆ ಪರಿಹಾರ ಕೇಂದ್ರದಲ್ಲಿರುವವರು ಖಾಲಿ ಮಾಡಬೇಕು ಎಂದು ಜಿಲ್ಲಾಡಳಿತ ಹೇಳಿದ್ದು, ಈ ಸಂತ್ರಸ್ತರಿಗೆ ಮಾಸಿಕ 10 ಸಾವಿರ ರೂ.ಗಳನ್ನು ನೀಡುವುದಾಗಿ ಹೇಳಿದೆ. ಆದರೆ ಅಷ್ಟು ಕುಟುಂಬಗಳಿಗೆ ಬಾಡಿಗೆ ಮನೆ ದೊರಕುವುದು ಕಷ್ಟಸಾಧ್ಯವಾಗಿದ್ದು, ಒಂದು ಲೆಕ್ಕದಲ್ಲಿ ಸರಕಾರವೇ ಸಂತ್ರಸ್ತರನ್ನು ಬೀದಿಗೆ ಎಸೆಯುವ ಕೆಲಸ ಮಾಡುತ್ತಿದೆ ಎಂದು ದೇವಯ್ಯ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಸಮಿತಿ ಕಾರ್ಯದರ್ಶಿ ಕುಂಬುಗೌಡನ ಪ್ರಸನ್ನ ಹಾಗೂ ಅರವಿಂದ್ ಸುರೇಂದ್ರ ಉಪಸ್ಥಿತರಿದ್ದರು.
ಸಂಪಾಜೆ ಹೋಬಳಿಯಲ್ಲಿ ಮನೆ ಕಳೆದುಕೊಂಢ ಸುಮಾರು 40-50 ಕುಟುಂಬಗಳಿಗೆ ಸರಕಾರ ನೀಡಿದ 3.800ರೂ.ಗಳ ಪರಿಹಾರ ಹೊರತಾಗಿ ಯಾವುದೇ ಸೌಲಭ್ಯ ದೊರಕಿಲ್ಲ. ಪ್ರಾಥಮಿಕ ಪಟ್ಟಿಯಲ್ಲಿ ಹೆಸರು ಇದ್ದ ಈ ಕುಟುಂಬ ಗಳನ್ನು ಜಾಗಕ್ಕೆ ಸಂಬಂಧಿಸಿದ ದಾಖಲೆಗಳಿಲ್ಲ ಎಂಬ ಕಾರಣಕ್ಕೆ ಎರಡನೇ ಪಟ್ಟಿಯಲ್ಲಿ ಕೈಬಿಡಲಾಗಿದೆ. ಆದರೆ ಆ ಕುಟುಂಬಗಳು ಹಲವಾರು ವರ್ಷಗಳಿಂದ ಪಂ.ಗಳಿಗೆ ಕಂದಾಯ ಪಾವತಿಸಿಕೊಂಡು ಬಂದಿದ್ದು, ಆ ಪಂಚಾಯಿತಿಗಳಲ್ಲೇ ದಾಖಲೆಗಳು ಲಭ್ಯವಿದೆ. ಆದರೂ ಸಂತ್ರಸ್ತರನ್ನು ಬೀದಿ ಪಾಲು ಮಾಡುವ ಕಾರ್ಯ ಕಂದಾಯ ಇಲಾಖೆಯಿಂದ ನಡೆಯುತ್ತಿದೆನಿರ್ಮಿಸಿಕೊಡುವಂತಾಗಬೇಕು.
– ಬಾಲಚಂದ್ರ ಕಳಗಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
Bengaluru: ಶಾಲೆ ಮುಖ್ಯಸ್ಥನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ
Bengaluru: ಬೈಕ್ ಡಿಕ್ಕಿ: ರಾತ್ರಿಯಿಡೀ ರಸೇಲಿ ನರಳಿ ವ್ಯಕ್ತಿ ಸಾವು
Bengaluru: ಪಾದಚಾರಿ ಮಾರ್ಗದಲ್ಲಿ ಕಾರು ಚಾಲನೆ: ಕೇಸ್ ದಾಖಲು
Champions Trophy: ಮೋದಿ ಪಾಕ್ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.