ಸಂಪುಟಕ್ಕೆ ಸೂತ್ರ ಸಿದ್ಧ
Team Udayavani, Dec 14, 2018, 6:00 AM IST
ಬೆಳಗಾವಿ: ಸಂಪುಟ ವಿಸ್ತರಣೆಗೆ ಕಸರತ್ತು ಆರಂಭಿಸಿರುವ ರಾಜ್ಯ ಸಮ್ಮಿಶ್ರ ಸರ್ಕಾರದ ನಾಯಕರು ಆಕಾಂಕ್ಷಿಗಳನ್ನು ಸಮಾಧಾನ ಪಡಿಸಲು ಸರಳ ಸೂತ್ರ ಸಿದ್ದಪಡಿಸಿಕೊಂಡಿದ್ದು, ಡಿಸೆಂಬರ್ 21ರಂದು ಕಾಂಗ್ರೆಸ್ ಹೈಕಮಾಂಡ್ ಮುಂದೆ ಈ ಸೂತ್ರವನ್ನು ಇಡಲು ತೀರ್ಮಾನಿಸಿದ್ದಾರೆ. ಕಾಂಗ್ರೆಸ್‌ನಲ್ಲಿ ಖಾಲಿ ಇರುವ 6 ಸಚಿವ ಸ್ಥಾನಗಳನ್ನು ಜಾತಿವಾರು ರೀತಿಯಲ್ಲಿ ಹಂಚಿಕೆ ಮಾಡಲು ನಿರ್ಧರಿಸಲಾಗಿದೆ. ಲಿಂಗಾಯತ, ಒಕ್ಕಲಿಗ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ, ದಲಿತ ಎಡಗೈ ಸಮುದಾಯ, ವಾಲ್ಮೀಕಿ ಸಮುದಾಯದ ಒಬ್ಬರನ್ನು ಸಚಿವರನ್ನಾಗಿ ಮಾಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಅದರ ಜತೆಗೆ 10 ಜನ ಸಂಸದೀಯ ಕಾರ್ಯದರ್ಶಿಗಳನ್ನು ನೇಮಕ ಮಾಡಲು ನಿರ್ಧರಿಸಿದ್ದು, 6 ಜನ ಕಾಂಗ್ರೆಸ್‌ಗೆ 3 ಜನ ಜೆಡಿಎಸ್‌ನಿಂದ ನೇಮಕ ಮಾಡುವ ಆಲೋಚನೆ ವರಿಷ್ಠರದ್ದು. ಜತೆಗೆ ಕಾಂಗ್ರೆಸ್‌ನ ಒಬ್ಬರು ಹಿರಿಯ ಶಾಸಕರನ್ನು ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಸಂಪುಟ ದರ್ಜೆಯ ಸ್ಥಾನ ನೀಡಬೇಕೆಂಬ ಸೂತ್ರವನ್ನು ಮೈತ್ರಿ ಸರ್ಕಾರದ ನಾಯಕರು ಹೆಣೆದಿದ್ದಾರೆ ಎನ್ನಲಾಗಿದೆ.
ಯಾರಿಗೂ ಕೊಕ್ ಇಲ್ಲ: ಸದ್ಯದ ಪರಿಸ್ಥಿತಿಯಲ್ಲಿ ಸಚಿವಾಕಾಂಕ್ಷಿಗಳ ಪಟ್ಟಿ ದೊಡ್ಡದಿದ್ದರೂ, ಹಾಲಿ ಸಚಿವರನ್ನು ಕೈಬಿಡದಿರಲು ರಾಜ್ಯ ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಖಾಲಿ ಇರುವ 6 ಸ್ಥಾನಗಳನ್ನು ಮಾತ್ರ ಭರ್ತಿ ಮಾಡಿ, ಎರಡು ವರ್ಷದ ನಂತರವೇ ಬದಲಾವಣೆ ಮಾಡುವ ಲೆಕ್ಕಾಚಾರ ಹಾಕಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೊಂದು ಮೂಲಗಳ ಪ್ರಕಾರ, ಲೋಕಸಭೆ ಚುನಾವಣೆವರೆಗೂ ಸಂಪುಟ ವಿಸ್ತರಣೆ ಮಾಡುವುದು ಬೇಡ ಎಂಬ ನಿರ್ಧಾರಕ್ಕೆ ಕಾಂಗ್ರೆಸ್ ಹೈಕಮಾಂಡ್ ಬಂದಿದೆ ಎಂದು ಹೇಳಲಾಗುತ್ತಿದೆ.
ಸಿದ್ದರಾಮಯ್ಯ ಮಾತುಕತೆ: ಮಲೇಶಿಯಾ ಪ್ರವಾಸ ಮೊಟಕುಗೊಳಿಸಿ ಬಂದಿರುವ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರ ಜತೆ ಕೆಲವು ಶಾಸಕರು ಹಾಗೂ ಸಚಿವರು ದೂರವಾಣಿ ಮೂಲಕ ಮಾತುಕತೆ ನಡೆಸಿದರು. ಸಭಾಪತಿ ಆಯ್ಕೆ ವಿಚಾರದಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯ ಆಗಿರುವ ಬಗ್ಗೆಯೂ ಪ್ರಸ್ತಾಪಿಸಿದರು. ಜತೆಗೆ ಸಂಪುಟ ವಿಸ್ತರಣೆಯಲ್ಲಿ ಉತ್ತರ ಕರ್ನಾಟಕಕ್ಕೆ ಇನ್ನೂ ಹೆಚ್ಚಿನ ಅವಕಾಶ ಕೊಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸಿದ್ದರಾಮಯ್ಯ ಅವರು ಸೋಮವಾರದಿಂದ ಬೆಳಗಾವಿ ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದಾರೆ. ಜತೆಗೆ ಡಿ.18ರ ಶಾಸಕಾಂಗ ಪಕ್ಷದ ಸಭೆಯಲ್ಲೂ ಪಾಲ್ಗೊಳ್ಳಲಿದ್ದಾರೆ. ಶುಕ್ರವಾರ ಇಲ್ಲವೇ
ಶನಿವಾರ ಕೆಪಿಸಿಸಿ ಅಧ್ಯಕ್ಷರು, ಉಪ ಮುಖ್ಯಮಂತ್ರಿ ಜತೆ ರಾಹುಲ್ ಭೇಟಿಗಾಗಿ ದೆಹಲಿಗೆ ತೆರಳಲಿದ್ದಾರೆ.
ನಿಗಮ ಮಂಡಳಿ ನೇಮಕ
ಸಂಪುಟ ವಿಸ್ತರಣೆಯ ಜತೆಗೆ 30 ನಿಗಮ ಮಂಡಳಿಗಳಿಗೆ ಶಾಸಕರನ್ನು ಅಧ್ಯಕ್ಷರನ್ನಾಗಿ ನೇಮಿಸುವ ಲೆಕ್ಕಾಚಾರ ಇದೆ. ಕಾಂಗ್ರೆಸ್‌ನಿಂದ 20 ಶಾಸಕರು, ಜೆಡಿಎಸ್‌ನಿಂದ 10 ಜನ ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷರ ಸ್ಥಾನ ನೀಡಿ ಸಮಾಧಾನ ಪಡಿಸುವ ಸರಳ ಸೂತ್ರವನ್ನು ನಾಯಕರುಗಳು ರೂಪಿಸಿದ್ದಾರೆ ಎನ್ನಲಾಗಿದೆ. ಈ ಕುರಿತು ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆಯಾಗಿದ್ದು, ಮಾಜಿ ಪ್ರಧಾನಿ ದೇವೇಗೌಡರ ಜತೆಗೂ ಚರ್ಚೆ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ. ಡಿ.21 ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಭೇಟಿಗೆ ಸಮಯ ಕೇಳಿದ್ದು, ರಾಹುಲ್ ಅವಕಾಶ ನೀಡಿದರೆ ಆಗ ಚರ್ಚಿಸಿ ಒಪ್ಪಿಗೆ ಪಡೆಯುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.