ಮುಂದಿನ ವರ್ಷ ಜಿಲ್ಲೆಯಲ್ಲಿ ರಾಜ್ಯ ಶಾಲಾ ಕಲೋತ್ಸವ: ಡಾ| ಗಿರೀಶ್
Team Udayavani, Dec 14, 2018, 2:25 AM IST
ಕಾಸರಗೋಡು: 60ನೇ ರಾಜ್ಯಮಟ್ಟದ ಶಾಲಾ ಕಲೋತ್ಸವ ಮುಂದಿನ ವರ್ಷ ಜಿಲ್ಲೆಯಲ್ಲಿ ವೈಭವಯುತವಾಗಿ ನಡೆಯಲಿದೆ ಎಂದು ಜಿಲ್ಲಾ ಶಿಕ್ಷಣ ಉಪನಿರ್ದೇಶಕ ಡಾ| ಗಿರೀಶ್ ಚೋಲಯಿಲ್ ಹೇಳಿದರು. ಮುಂದಿನ ವರ್ಷ ಕಲೋತ್ಸವ ನಡೆಸುವ ಜಿಲ್ಲೆಗೆ ಧ್ವಜ ಹಸ್ತಾಂತರಿಸುವ ಕಾರ್ಯಕ್ರಮ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದಿದ್ದು, ಅವರು ಜಿ. ಪಂ. ಅಧ್ಯಕ್ಷ ಎ.ಜಿ.ಸಿ. ಬಶೀರ್ ಅವರಿಗೆ ಧ್ವಜ ಹಸ್ತಾಂತರಿಸಿದರು.
ಈ ವರ್ಷ ಸಂಭವಿಸಿದ ಜಲದುರಂತ ಹಿನ್ನೆಲೆಯಲ್ಲಿ ಸರಕಾರ ವೆಚ್ಚ ಕಡಿತ ನೀತಿ ಜಾರಿಗೊಳಿಸಿದ್ದ ಕಾರಣ ಹೆಚ್ಚುವರಿ ಗೌಜಿಗದ್ದಲಗಳಿಲ್ಲದೆ ರಾಜ್ಯ ಮಟ್ಟದ ಶಾಲಾ ಕಲೋತ್ಸವ ನಡೆಸಬೇಕಾಗಿ ಬಂದಿತ್ತು. 27 ವರ್ಷಗಳ ಬಳಿಕ ಕಲೋತ್ಸವವನ್ನು ವರ್ಣ ರಂಜಿತವಾಗಿ ನಡೆಸಲು ನಿರ್ಧರಿಸಲಾಗಿದೆ. ಶೀಘ್ರದಲ್ಲೇ ಸಂಘಟಕ ಸಮಿತಿ ಸಭೆಯನ್ನೂ ನಡೆಸಲಾಗುವುದು ಎಂದವರು ಹೇಳಿದರು. ಜಿಲ್ಲಾಧಿಕಾರಿ ಡಾ| ಡಿ.ಸಜಿತ್ ಬಾಬು ಅವರ ಸಮಕ್ಷದಲ್ಲಿ ಈ ಸಮಾರಂಭ ನಡೆಯಿತು. ಜಿಲ್ಲಾ ಮಾಹಿತಿ ಅಧಿಕಾರಿ ರಶೀದ್ಬಾಬು, ಸಹಾಯಕ ಮಾಹಿತಿ ಅಧಿಕಾರಿ ಸಿ.ಟಿ.ಜೋನ್, ವಿವಿಧ ಇಲಾಖೆಗಳ ಪ್ರತಿನಿಧಿಗಳು, ಸಿಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
Fraud Case: 3.25 ಕೋಟಿ ವಂಚನೆ ಕೇಸ್; ಐಶ್ವರ್ಯ ದಂಪತಿ ಮತ್ತೆ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.