ಕುಕ್ಕೆ ರಥೋತ್ಸವ: ಅಪಾರ ಭಕ್ತರು ಭಾಗಿ
Team Udayavani, Dec 14, 2018, 10:00 AM IST
ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಅಂಗವಾಗಿ ಬುಧ ವಾರ ರಾತ್ರಿ ಪಂಚಮಿ ರಥೋತ್ಸವ ಹಾಗೂ ಗುರುವಾರ ಬ್ರಹ್ಮರಥೋತ್ಸವ ವೈಭವದಿಂದ ನೆರವೇರಿತು. 400 ವರ್ಷಗಳ ಇತಿಹಾಸವಿರುವ ಬ್ರಹ್ಮರಥದಲ್ಲಿ ಸುಬ್ರಹ್ಮಣ್ಯ ದೇವರು ಕೊನೆಯ ಭಾರಿಗೆ ರಥಾರೂಢರಾದರು. ನಾಡಿನ ವಿವಿಧೆಡೆಗಳಿಂದ ಆಗಮಿಸಿದ ಸಹಸ್ರಾರು ಭಕ್ತರು ಈ ಕ್ಷಣಕ್ಕೆ ಸಾಕ್ಷಿಯಾದರು.
ದೇಗುಲದ ಹೊರಾಂಗಣದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಮತ್ತು ಉಮಾಮಹೇಶ್ವರ ದೇವರ ಪಾಲಕಿ ಉತ್ಸವ ನೆರವೇರಿತು. ಬಳಿಕ ಪೂರ್ವಾಹ್ನ 6.41ರ ವೃಶ್ಚಿಕ ಲಗ್ನದಲ್ಲಿ ರಥೋತ್ಸವ ನೆರವೇರಿತು. ಈ ವೇಳೆ ನಾಗಸ್ವರ, ಪಂಚವಾದ್ಯ, ಬ್ಯಾಂಡ್, ಜಾಗಟೆ, ಶಂಖ ವಾದ್ಯ ಮತ್ತು ಚೆಂಡೆ ವಾದನಗಳ ಹಿಮ್ಮೇಳದಲ್ಲಿ ಸಾಲಾಂಕೃತ ಆನೆ, ಬಿರುದಾವಳಿ, ಭಕ್ತಜನರ ಜಯಘೋಷದ ನಡುವೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವರು ಬ್ರಹ್ಮರಥಾರೂಢರಾದರು. ಬಳಿಕ ಮಹಾ ಮಂಗಳಾರತಿ ನೆರವೇರಿತು. ಬಳಿಕ ಭಕ್ತರಿಗೆ ಧನ, ಕನಕ, ಹೂವು, ಫಲವಸ್ತು ಪ್ರಸಾದಗಳನ್ನು ಅರ್ಚಕರು ರಥದಿಂದ ಎಸೆದರು. ಅಪಾರ ಭಕ್ತ ಜನರ ಜಯಘೋಷದೊಂದಿಗೆ ನಡೆದ ಮಹಾರಥೋತ್ಸವದಲ್ಲಿ ನಾಡಿನ ಭಕ್ತರು ರಥೋತ್ಸವ ವೀಕ್ಷಿಸಿದರು. ಭಕ್ತರು ರಥಕ್ಕೆ ಸಾಸಿವೆ, ನಾಣ್ಯ ಏಲಕ್ಕಿ, ಕಾಳುಮೆಣಸು ಇತ್ಯಾದಿಗಳನ್ನು ಅರ್ಪಿಸಿ, ಇಷ್ಟಾರ್ಥಗಳನ್ನು ಪ್ರಾರ್ಥಿಸಿಕೊಂಡರು.
ಭಕ್ತರ ಪ್ರಮಾಣ ಇಳಿಕೆ
ಗುರುವಾರ ರಾತ್ರಿ ಪಂಚಮಿ ರಥೋತ್ಸವ ನಡೆಯಿತು. ಒಳಾಂಗಣ ಪ್ರಾಂಗಣದಲ್ಲಿ ಉತ್ಸವ ಮೂರ್ತಿಯ ಬಲಿ ನಡೆದ ಬಳಿಕ ರಥಬೀದಿಯಲ್ಲಿ ಪಂಚಮಿ ರಥೋತ್ಸವ ನೆರವೇರಿತು. ಕಾಶಿಕಟ್ಟೆ ಮಹಾಗಣಪತಿ ಸನ್ನಿಧಿಯಲ್ಲಿ ಪೂಜೆ ನೆರವೇರಿತು. ಈ ಬಾರಿ ಪಂಚಮಿ ರಥೋತ್ಸವ ತಡರಾತ್ರಿ 1 ಗಂಟೆಗೆ ನೆರವೇರಿತು. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ಸಲ ಪಂಚಮಿ ಹಾಗೂ ಷಷ್ಠಿ ರಥೋತ್ಸವಗಳಲ್ಲಿ ಭಕ್ತರ ಪ್ರಮಾಣ ಇಳಿಕೆಯಾಗಿತ್ತು.
ಗಣ್ಯರ ಉಪಸ್ಥಿತಿ
ಚಂಪಾಷಷ್ಠಿ ರಥೋತ್ಸವದ ವೇಳೆ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತೆ ಪ್ರಮೀಳಾ, ಹೈಕೋರ್ಟ್ ನ್ಯಾಯಾಧೀಶ ಸತ್ಯನಾರಾಯಣ, ಸುಳ್ಯ ನ್ಯಾಯಾಧೀಶ ಪುರುಷೋತ್ತಮ, ಪುತ್ತೂರು ಸಹಾಯಕ ಆಯುಕ್ತ ಎಚ್. ಕೆ. ಕೃಷ್ಣಮೂರ್ತಿ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಕಾರ್ಯನಿರ್ವಾಹಣಾಧಿಕಾರಿ ಎಚ್. ಎಂ. ರವೀಂದ್ರ, ಸಹಾಯಕ ಕಾರ್ಯ ನಿರ್ವಹಣಾಧಿಕಾರಿ ಚಂದ್ರಶೇಖರ ಪೆರಾಲ್, ನೂತನ ಬ್ರಹ್ಮರಥ ದಾನಿ ಉದ್ಯಮಿ ಅಜಿತ್ ರೈ, ಎಂ.ಬಿ. ಸದಾಶಿವ ಉಪಸ್ಥಿತರಿದ್ದರು. ಪಂಚಮಿ ಮತ್ತು ಚೌತಿ ದಿನಗಳಲ್ಲಿ ಮಾಜಿ ಸಚಿವ ರಮಾನಾಥ ರೈ, ವಿಧಾನಪರಿಷತ್ ಮಾಜಿ ಸದಸ್ಯ ಮುಖ್ಯಮಂತ್ರಿ ಚಂದ್ರು ಸಹಿತ ಹಲವು ಗಣ್ಯರು ದೇಗುಲಕ್ಕೆ ಭೇಟಿ ಇತ್ತರು. ಜಾತ್ರೆ ಪ್ರಯುಕ್ತ ದೇಗುಲ, ಇಲಾಖೆಗಳು, ಸಂಘ ಸಂಸ್ಥೆಗಳ ಸಹಯೋಗದಲ್ಲಿ ಕೃಷಿ ಮೇಳ ಆಯೋಜಿಸಲಾಗಿತ್ತು.
ಇಂದು ನೌಕಾವಿಹಾರ
ಇಂದು ಶ್ರೀ ಸುಬ್ರಹ್ಮಣ್ಯ ದೇವರ ಅವಭೃಥೋತ್ಸವ ಮತ್ತು ನೌಕಾ ವಿಹಾರ ಕುಮಾರಧಾರಾ ಪುಣ್ಯ ನದಿಯಲ್ಲಿ ನಡೆಯಲಿದೆ. ಈ ವೇಳೆ ದೇಗುಲದ ಯಶಸ್ವಿ ಆನೆ ಜಲಕ್ರೀಡೆಯಲ್ಲಿ ಸಂಭ್ರಮಿಸುವುದು ಮನ ಸೆಳೆಯುತ್ತದೆ. ಸ್ಥಳೀಯ ಭಕ್ತರು ಹೆಚ್ಚಿನ ಪ್ರಮಾಣದಲ್ಲಿ ಭಾಗವಹಿಸುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.