ನಾರಾಯಣಸ್ವಾಮಿ ವಿಚಾರಣೆಗೆ ತಡೆ


Team Udayavani, Dec 14, 2018, 11:24 AM IST

narayana.jpg

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೆಬ್ಟಾಳ ಕ್ಷೇತ್ರದ ಲೊಟ್ಟೆಗೊಲ್ಲಹಳ್ಳಿ ಮತಗಟ್ಟೆಯಲ್ಲಿ ನಡೆದ ಮರು ಮತದಾನದ ವೇಳೆ ಪೊಲೀಸ್‌ ನಿಷೇಧಾಜ್ಞೆ ಉಲ್ಲಂ ಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಿನ ಬಿಜೆಪಿ ಶಾಸಕ ಹಾಗೂ ಹಾಲಿ ವಿಧಾನ ಪರಿಷತ್‌ ಸದಸ್ಯ ವೈ.ಎ.ನಾರಾಯಣಸ್ವಾಮಿ ವಿರುದ್ಧದ ಅಧೀನ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್‌ ಗುರುವಾರ ಮಧ್ಯಂತರ ತಡೆ ನೀಡಿದೆ.

ತಮ್ಮ ವಿರುದ್ಧ ಸಂಜಯನಗರ ಪೊಲೀಸ್‌ ಠಾಣೆಯಲ್ಲಿ ದಾಖಲಾದ ಎಫ್ಐಆರ್‌ ಹಾಗೂ ಅಧೀನ ನ್ಯಾಯಾಲಯದ ವಿಚಾರಣೆ ರದ್ದುಗೊಳಿಸುವಂತೆ ಕೋರಿ ನಾರಾಯಣಸ್ವಾಮಿ ಸೇರಿ 22 ಮಂದಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಪಿ.ಎಸ್‌. ದಿನೇಶ್‌ ಕುಮಾರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅಧೀನ ನ್ಯಾಯಾಲಯದ ವಿಚಾರಣೆಗೆ ಮಧ್ಯಂತರ ತಡೆ ನೀಡಿ, ವಿಚಾರಣೆಯನ್ನು ಡಿ.15ಕ್ಕೆ ಮುಂದೂಡಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, “ಪೊಲೀಸರು ತಮ್ಮ ಚಾರ್ಜ್‌ಶೀಟ್‌ನಲ್ಲಿ ಶಾಸಕ ವೈ.ಎ. ನಾರಾಯಣಸ್ವಾಮಿ ತಲೆಮರೆಸಿಕೊಂಡಿದ್ದಾರೆ’ ಎಂದು ಹೇಳಿದ್ದಾರೆ. ಆದರೆ, ಅವರು ತಲೆಮರೆಸಿಕೊಂಡಿಲ್ಲ. ಆದ್ದರಿಂದ ಪ್ರಕರಣ ಹಾಗೂ ಈ ಸಂಬಂಧ ಅಧೀನ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಯನ್ನು ರದ್ದುಪಡಿಸುವಂತೆ ನ್ಯಾಯಪೀಠವನ್ನು ಕೋರಿದರು. 

ಶಾಸಕರು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ಚಾರ್ಜ್‌ಶೀಟ್‌ನಲ್ಲಿ ಹೇಳಿರುವುದಕ್ಕೆ ಗರಂ ಆದ ನ್ಯಾಯಪೀಠ, “ಶಾಸಕರು ತಲೆ ಮರೆಸಿಕೊಳ್ಳಲು ಸಾಧ್ಯವೇ? ಚಾರ್ಜ್‌ಶೀಟ್‌ನಲ್ಲಿ ಆ ರೀತಿ ಬರೆಯಲು ಕಾರಣವೇನು ಎಂದು ಸಂಬಂಧಪಟ್ಟ ಡಿಸಿಪಿ ಹಾಗೂ ಪ್ರಕರಣದ ತನಿಖಾಧಿಕಾರಿ ಖುದ್ದು ಹಾಜರಾಗಿ ಪ್ರಮಾಣಪತ್ರದ ಮೂಲಕ ವಿವರಣೆ ಕೊಡಬೇಕು’ ಎಂದು ನಿರ್ದೇಶನ ನೀಡಿತು. ಇದೇ ವೇಳೆ ಸಂಜಯನಗರ ಪೊಲೀಸರಿಗೆ ನೋಟಿಸ್‌ ಜಾರಿಗೊಳಿಸಿ ನ್ಯಾಯಪೀಠ ಆದೇಶಿಸಿತು.

ಪ್ರಕರಣವೇನು?: 2018ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಹೆಬ್ಟಾಳ ಕ್ಷೇತ್ರಕ್ಕೆ ಮೇ 14ರಂದು ಮರು ಮತದಾನ ನಡೆಸಲಾಗಿತ್ತು. ಈ ವೇಳೆ ಲೊಟ್ಟೆಗೊಲ್ಲಹಳ್ಳಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ವೈ.ಎ. ನಾರಾಯಣಸ್ವಾಮಿ ನಿಷೇಧಾಜ್ಞೆ ಉಲ್ಲಂಘಿಸಿ ಮತ್ತೂಂದು ಪಕ್ಷದ ಅಭ್ಯರ್ಥಿಯ ವಿರುದ್ಧ ಘೋಷಣೆ ಕೂಗುತ್ತಾ, ಶಾಂತಿಯುತ ಮತದಾನಕ್ಕೆ ಭಂಗ ಉಂಟು ಮಾಡಿದ್ದಾರೆಂದು ಆರೋಪಿಸಿ ಸಂಜಯನಗರ ಪೊಲೀಸರು ದೂರು ದಾಖಲಿಸಿಕೊಂಡಿದ್ದರು.

ಟಾಪ್ ನ್ಯೂಸ್

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

11-KEA-exam

Bengaluru: 54 ಎಂಜಿನಿಯರಿಂಗ್‌ ಸೀಟ್‌ ಬ್ಲಾಕ್‌: ಕೆಇಎ ಶಂಕೆ

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!

4-cock

Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್‌!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

ACC U-19 Asia Cup: ರಾಜ್ಯದ ಮೂವರು

ACC U-19 Asia Cup: ರಾಜ್ಯದ ಮೂವರು

Ranji Trophy: ಕರ್ನಾಟಕಕ್ಕೆ ನಾಕೌಟ್‌ ಕಷ್ಟ

Ranji Trophy: ಕರ್ನಾಟಕಕ್ಕೆ ನಾಕೌಟ್‌ ಕಷ್ಟ

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Ranji Trophy: ಶಮಿ ಭರ್ಜರಿ ಪುನರಾಗಮನ; ಬಂಗಾಳಕ್ಕೆ ಜಯ

Ranji Trophy: ಶಮಿ ಭರ್ಜರಿ ಪುನರಾಗಮನ; ಬಂಗಾಳಕ್ಕೆ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.