ಸೂಗೂರೇಶ್ವರ ಸ್ವಾಮಿಜೋಡು ರಥೋತ್ಸವ
Team Udayavani, Dec 14, 2018, 2:22 PM IST
ರಾಯಚೂರು: ತಾಲೂಕಿನ ದೇವಸೂಗೂರಿನಲ್ಲಿ ಶ್ರೀ ಸೂಗೂರೇಶ್ವರ ಸ್ವಾಮಿ ಜೋಡು ರಥೋತ್ಸವವು ಗುರುವಾರ ಸಂಜೆ ಲಕ್ಷಾಂತರ ಭಕ್ತರ ಹರ್ಷೋದ್ಘಾರಗಳೊಂದಿಗೆ, ಸಕಲ ವಾದ್ಯವೈಭವದೊಂದಿಗೆ ವಿಜೃಂಭಣೆಯಿಂದ ನೆರವೇರಿತು.
ಶ್ರೀ ಸೂಗೂರೇಶ್ವರ ಸ್ವಾಮಿ ಜಂಗಮನೂ ಹೌದು, ವೀರಭದ್ರನ ಅವತಾರವೂ ಹೌದು ಎನ್ನುವ ಕಾರಣಕ್ಕೆ ಇಲ್ಲಿ ಎರಡು ರಥಗಳನ್ನು ಎಳೆಯುವ ಸಂಪ್ರದಾಯ ನಡೆದುಕೊಂಡು ಬಂದಿದೆ. ಈ ಭಾಗದಲ್ಲಿ ಎಲ್ಲಿಯೂ ಜೋಡು ರಥೋತ್ಸವ ಎಳೆಯುವ ನಿದರ್ಶನ ಇಲ್ಲ. ಈ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಕರ್ನಾಟಕ ಮಾತ್ರವಲ್ಲದೇ, ತೆಲಂಗಾಣ, ಸೀಮಾಂಧ್ರ, ಮಹಾರಾಷ್ಟ್ರ ಸೇರಿ ವಿವಿಧ ರಾಜ್ಯಗಳಿಂದ ಆಗಮಿಸಿದ್ದ ಲಕ್ಷಾಂತರ ಭಕ್ತರು ಸ್ವಾಮಿ ವೈಭವ ಕಣ್ತುಂಬಿಕೊಂಡರು.
ಜಾತ್ರೆ ನಿಮಿತ್ತ ಬೆಳಗ್ಗೆ ಸ್ವಾಮಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಪ್ರಧಾನ ಅರ್ಚಕರ ನೇತೃತ್ವದಲ್ಲಿ ಮಹಾ ರುದ್ರಾಭಿಷೇಕ ನೆರವೇರಿಸಲಾಯಿತು. ಬಳಿಕ ಸ್ವಾಮಿಗೆ ಚಿನ್ನಾಭರಣಗಳಿಂದ ವಿಶೇಷ ಅಲಂಕಾರ ಸೇವೆ ಮಾಡಲಾಯಿತು. ಸಂಜೆ ಸಕಲ ವಾದ್ಯ ಮೇಳಗಳೊಂದಿಗೆ ಸ್ವಾಮಿಯ ಜೋಡು ರಥೋತ್ಸವ ನೆರವೇರಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Crime: ಶೀಲ ಶಂಕಿಸಿ ಪತ್ನಿ ಕತ್ತು ಸೀಳಿಆತ್ಮಹತ್ಯೆಗೆ ಯತ್ನಿಸಿದ ಪತಿ
Thalapathy 69: ರಿಲೀಸ್ ಗೂ ಮುನ್ನ ಕೋಟಿ ಕೋಟಿ ಕಮಾಯಿ ಮಾಡಿದ ವಿಜಯ್ ಕೊನೆಯ ಸಿನಿಮಾ
Kantara: Chapter 1: ‘ಕಾಂತಾರ’ ಸೆಟ್ ಗೆ ಮರಳಿದ ರಿಷಬ್; ಮೂರನೇ ಹಂತದ ಚಿತ್ರೀಕರಣ ಶುರು
Bengaluru; ಶೋಕಿಗಾಗಿ ಸರಗಳ್ಳತನ: 70 ಲಾರಿಗಳ ಮಾಲಿಕ ಸೆರೆ!!
Lokayukta ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ: ಬಿಜೆಪಿಯಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.