ಸದ್ಯವೇ ಎಲ್ಲರಿಗೂ ‘ಮೂಲ’ ಆದಾಯ
Team Udayavani, Dec 15, 2018, 8:20 AM IST
ಹೊಸದಿಲ್ಲಿ: ಪಂಚರಾಜ್ಯ ಚುನಾವಣೆಯಲ್ಲಿ ಆಗಿರುವ ಹಿನ್ನಡೆಯಿಂದ ಕಂಗೆಟ್ಟಿರುವ ಕೇಂದ್ರದ ನರೇಂದ್ರ ಮೋದಿ ಸರಕಾರ ಮುಂಬರುವ ಬಜೆಟ್‌ನಲ್ಲಿ ‘ಬಂಪರ್ ಕೊಡುಗೆ’ ನೀಡುವ ಸಾಧ್ಯತೆಗಳು ದಟ್ಟವಾಗಿವೆ. ಮಹತ್ವಾಕಾಂಕ್ಷೆಯ ‘ಸಾರ್ವತ್ರಿಕ ಮೂಲ ಆದಾಯ’ (ಯುಬಿಐ) ಯೋಜನೆ ಜಾರಿ ಸಂಬಂಧ ಗಂಭೀರ ಚಿಂತನೆ ನಡೆಸಿದೆ. ಜಾರಿಗೆ ಬಂದಲ್ಲಿ ಬಡಕುಟುಂಬದ ಪ್ರತಿಯೊಬ್ಬರಿಗೂ ಮಾಸಿಕ 1000 ರೂ. ಸಹಾಯಧನ ಸಿಗಲಿದೆ.
ಫೆ.1ರಂದು ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಮಧ್ಯಂತರ ಬಜೆಟ್ ಮಂಡಿಸಲಿದ್ದು, ಉತ್ತರ ಭಾರತದ ರಾಜ್ಯಗಳಿಗೆ ವಿಶೇಷ ಮಾನ್ಯತೆ ನೀಡುವ ಸಾಧ್ಯತೆಯನ್ನೂ ತಳ್ಳಿಹಾಕುವಂತಿಲ್ಲ. ಸದ್ಯಕ್ಕೆ ಇದು ಚರ್ಚೆಯ ಹಂತದಲ್ಲಿದ್ದು, ಬಜೆಟ್ ಮಂಡನೆಯೊಳಗೆ ಪಕ್ಕಾ ಸ್ವರೂಪ ಪಡೆದುಕೊಳ್ಳಲಿದೆ. ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ವಿಶ್ಲೇಷಿಸಲಾಗುತ್ತಿದ್ದ ಪಂಚರಾಜ್ಯ ಚುನಾವಣೆಯ ಸೋಲಿನ ಹೊಡೆತವನ್ನು ತಪ್ಪಿಸಿಕೊಳ್ಳಲು ಮುಂದಾಗಿರುವ ಬಿಜೆಪಿ, ಬಡತನ ನಿರ್ಮೂಲನೆ ಉದ್ದೇಶದೊಂದಿಗೆ ಬಜೆಟ್‌ನಲ್ಲಿ ‘ಸಾರ್ವತ್ರಿಕ ಮೂಲ ಆದಾಯ’ ಯೋಜನೆ ಪ್ರಕಟಿಸಲಿದೆ ಎಂದು ಹೇಳಲಾಗುತ್ತಿದೆ. “ಈ ಯೋಜನೆಯಡಿ ಬಡ ಕುಟುಂಬಕ್ಕೆ ಪ್ರತಿ ತಿಂಗಳೂ ನಿಗದಿತ ಸಹಾಯಧನ ನೀಡಲಾಗುತ್ತದೆ. ಇದು ಗ್ರಾಮೀಣ ಭಾಗದ ಬಡ ಕುಟುಂಬಗಳ ಸದಸ್ಯರಿಗೆ ವೈಯಕ್ತಿಕವಾಗಿ ನೆರವಾಗಲಿದೆ” ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಇದು ಲೋಕಸಭಾ ಚುನಾವಣೆಯಲ್ಲಿ ಲಾಭವಾಗಿ ಪರಿಣಮಿಸುತ್ತದೆನ್ನುವುದೂ ಮೋದಿ ಸರಕಾರದ ಲೆಕ್ಕಾಚಾರವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.