ಜಮೀನು ಖರೀದಿಸಿ ಹಂಚುವಾಗಲೇ ಕೊಳವೆ ಬಾವಿ

Team Udayavani, Dec 15, 2018, 7:02 AM IST

63.jpg

ವಿಧಾನಸಭೆ: ಪರಿಶಿಷ್ಟ ಜಾತಿ, ಪಂಗಡದವರಿಗೆ ಖಾಸಗಿ ಜಮೀನು ಖರೀದಿಸಿ ಹಂಚಿಕೆ ಮಾಡುವ ಹೊತ್ತಿನಲ್ಲೇ ಗಂಗಾಕಲ್ಯಾಣ ಯೋಜನೆಯನ್ನೂ ಜೋಡಿಸಿ ಕೊಳವೆ ಬಾವಿ ಕೊರೆಸಿ ಕೃಷಿ ಚಟುವಟಿಕೆ ನಡೆಸಲು ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಭರವಸೆ ನೀಡಿದರು.

ಜೆಡಿಎಸ್‌ನ ಕೆ.ಅನ್ನದಾನಿ ಪ್ರಶ್ನೆಗೆ ಉತ್ತರಿಸಿದ ಅವರು, ಡಾ.ಬಿ.ಆರ್‌.ಅಂಬೇಡ್ಕರ್‌ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿ ಮತ್ತು
ಪಂಗಡದವರಿಗೆ ಹಂಚಿಕೆ ಮಾಡುವ ಭೂಮಿಯನ್ನು ಕೃಷಿಗಷ್ಟೇ ಬಳಸಬೇಕು. ಆದ್ಯತೆ ಮೇರೆಗೆ ಭೂಮಿ ಹಂಚಿಕೆ ಮಾಡಲಾಗುತ್ತಿದೆ ಎಂದು ಹೇಳಿದರು. ಇದಕ್ಕೆ ಅನ್ನದಾನಿ, ಉತ್ತರ ಕರ್ನಾಟಕ ಭಾಗದಲ್ಲಿ ತುಸು ಕಡಿಮೆ ಬೆಲೆಗೆ ಭೂಮಿ ಸಿಗುತ್ತದೆ. ಆದರೆ
ಹಳೇ ಮೈಸೂರು ಭಾಗದಲ್ಲಿ ಭೂಮಿ ಬೆಲೆ ದುಬಾರಿಯಾಗಿದೆ. ಅಲ್ಲದೇ ಹಾಗಾಗಿ ಭೂಮಿ ಖರೀದಿ ದರ ಹೆಚ್ಚಿಸಬೇಕು. ಕೇವಲ ಭೂಮಿ
ನೀಡಿದರಷ್ಟೇ ಸಾಲದು. ಕೊಳವೆ ಬಾವಿ ಕೊರೆಸಿಕೊಟ್ಟು, ಕೃಷಿ ಚಟುವಟಿಕೆ ನಡೆಸಲು ಪೂರಕ ಸೌಲಭ್ಯ ಕಲ್ಪಿಸಬೇಕು. ಆದರೆ ಆ ಕೆಲಸ ನಡೆಯುತ್ತಿಲ್ಲ. ಪರಿಶಿಷ್ಟ ಜಾತಿ, ಪಂಗಡದವರಿಗೆ ಬ್ಯಾಂಕ್‌ಗಳು ಸಾಲವನ್ನೇ ನೀಡುತ್ತಿಲ್ಲ. ಇದರಿಂದ ಅವರ ಆರ್ಥಿಕತೆ ಸುಧಾರಿಸದಂತಾಗಿದೆ ಎಂದು ಹೇಳಿದರು.

ಇದಕ್ಕೆ ದನಿಗೂಡಿಸಿದ ಕಾಂಗ್ರೆಸ್‌ನ ಅಮರೇಗೌಡ ಬಯ್ನಾಪುರ, ಭೂ ಒಡೆತನ ಕೋರಿ ಸಲ್ಲಿಕೆಯಾದ ಅರ್ಜಿಗಳು ಹಲವು ವರ್ಷಗಳಿಂದ ವಿಲೇವಾರಿ ಯಾಗದೆ ಬಾಕಿ ಉಳಿದಿವೆ. ಈ ಅರ್ಜಿಗಳನ್ನು ಕಾಲ ಮಿತಿಯಲ್ಲಿ ವಿಲೇವಾರಿ ಮಾಡಿ ಭೂಮಿ ಹಂಚಿಕೆ
ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಕಾಲಮಿತಿ ನಿಗದಿಪಡಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಪ್ರಿಯಾಂಕ್‌ ಖರ್ಗೆ, ಈಗಾಗಲೇ ಮಾರ್ಗಸೂಚಿ ದರ ಮೂರು ಪಟ್ಟು ಹೆಚ್ಚು ದರದಲ್ಲಿ ಭೂಮಿ ಖರೀದಿಗೆ ಅವಕಾಶವಿದೆ. ಅದಕ್ಕಿಂತ ಹೆಚ್ಚು ದರದಲ್ಲಿ ಖರೀದಿಸಬೇಕಾದರೆ ಸಂಬಂಧಪಟ್ಟವರಿಗೆ ಪ್ರಸ್ತಾವ ಕೂಡ ಸಲ್ಲಿಸಬಹುದು. ಹಂಚಿಕೆಯಾಗುವ ಭೂಮಿ 
ಫ‌ಲವತ್ತಾಗಿರಬೇಕಾಗುತ್ತದೆ. ಮಣ್ಣು ಪರೀಕ್ಷೆ ಇತರೆ ದೃಢೀಕರಣದ ಬಳಿಕವಷ್ಟೇ ಮಂಜೂರು ಮಾಡಲಾಗುವುದು. ತ್ವರಿತವಾಗಿ ಹಂಚಿಕೆ ಮಾಡಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.

ಸಭಾಧ್ಯಕ್ಷ ಕೆ.ಆರ್‌.ರಮೇಶ್‌ ಕುಮಾರ್‌ ಮಾತನಾಡಿ, ಇದೇ ಕಾರಣಕ್ಕೆ ನಾನು ಠೇವಣಿಯನ್ನು ವಾಣಿಜ್ಯ ಬ್ಯಾಂಕ್‌ಗೆ ಬದಲಾಗಿ ಸಹಕಾರಿ ಬ್ಯಾಂಕ್‌ ನಲ್ಲಿಡಿ ಎಂದು ಹೇಳುವುದು. ಸಬ್ಸಿಡಿ ಮೊತ್ತವನ್ನು ಸಹಕಾರ ಬ್ಯಾಂಕ್‌ಗೆ ರವಾನಿಸಿ ವ್ಯವಹರಿಸಲು ಅವಕಾಶವಿದೆ. ನಾನು ಕೋಲಾರದಲ್ಲಿ ಇದನ್ನು ಯಶಸ್ವಿಯಾಗಿ ನಿರ್ವಹಿಸಿದ್ದು, ಎಲ್ಲ ಫ‌ಲಾನು ಭವಿಗಳಿಗೂ ಸೌಲಭ್ಯ ಕಲ್ಪಿಸಲಾಗಿದೆ. ವಾಣಿಜ್ಯ
ಬ್ಯಾಂಕ್‌ನ ಹಂಗಿಗೆ ಹೋಗಬೇಡಿ ಎಂದರು. ಕೊನೆಗೆ ಸಚಿವರು ಮಾತನಾಡಿ, ಭೂ ಒಡೆತನ ಮಂಜೂರಾದಾಗಲೇ ಗಂಗಕಲ್ಯಾಣ ಯೋಜನೆ ಯನ್ನೂ ಜೋಡಿಸಿ ಕೊಳವೆಬಾವಿ ಜತೆಗೆ ಇತರೆ ಸೌಲಭ್ಯ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.

ಹೆಚ್ಚುವರಿ ಸಿಎಸ್‌ ನೇತೃತ್ವದಲ್ಲಿ ಸಮಿತಿ
ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಕ್ರೈಸ್‌ ಎಲ್ಲ ವ್ಯಾಪ್ತಿಯ ವಿದ್ಯಾರ್ಥಿ ನಿಲಯಗಳಿಗೆ ಆಹಾರ, ಸಮವಸ್ತ್ರ, ಬ್ಯಾಗ್‌, ಪೀಠೊಪಕರಣ ಪೂರೈಕೆ ಪಾರದರ್ಶಕವಾಗಿರಲು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ
ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಬಿಜೆಪಿಯ ಕುಮಾರ್‌ ಬಂಗಾರಪ್ಪ ಅವರ, ಹಾಸ್ಟೆಲ್‌ಗ‌ಳಿಗೆ ಆಹಾರ ಪೂರೈಕೆಗೆ ಕಡಿಮೆ ದರಕ್ಕೆ ಟೆಂಡರ್‌ ಪಡೆದು ಅಕ್ರಮ ಎಸಗಲಾಗುತ್ತಿದೆ ಎಂಬ ಪ್ರಸ್ತಾಪಕ್ಕೆ ಉತ್ತರಿಸಿದ ಅವರು, ಕೆಲವೆಡೆ ಲೋಪ ಆಗಿರುವುದು
ಕಂಡುಬಂದಿದೆ. ಹಾಸ್ಟೆಲ್‌ಗ‌ಳಲ್ಲಿ ಟೆಂಡರ್‌ ಸೇರಿ ಅಲ್ಲಿನ ಪರಿಸ್ಥಿತಿ ಸುಧಾರಣೆಗೆ ಸಲಹೆ ನೀಡುವಂತೆ ಎಲ್ಲ ಶಾಸಕರಿಗೆ ಪತ್ರ ಬರೆದಿದ್ದೆ. 8 ಶಾಸಕರು ಮಾತ್ರ ಸಲಹೆ ಕೊಟ್ಟಿದ್ದಾರೆ. ಶಿಕ್ಷಕ ಹಾಗೂ ಪದವೀಧರ ಕ್ಷೇತ್ರದ ವಿಧಾನಪರಿಷತ್‌ ಸದಸ್ಯರ ಜತೆಯೂ ಚರ್ಚೆ ನಡೆಸಿದ್ದೇನೆ. ಒಟ್ಟಾರೆ, ಸಮಗ್ರ ಸುಧಾರಣೆಗೆ ಕ್ರಮ ಕೈಗೊಳ್ಳಲಾಗುವುದು. ಶಿವಮೊಗ್ಗ ಪ್ರಕರಣದಲ್ಲಿ ಟೆಂಡರ್‌ಗೆ ಅಲ್ಲಿನ ಜಿಲ್ಲಾಧಿಕಾರಿಗಳು ತಡೆ ನೀಡಿದ್ದಾರೆ ಎಂದು ಹೇಳಿದರು.

ಟಾಪ್ ನ್ಯೂಸ್

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

7-surathkal

Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

1-delhi

Delhi Election; ಅಧಿಕಾರ ಉಳಿಸಿಕೊಳ್ಳುವರೋ? ಪಡೆದುಕೊಳ್ಳುವರೋ?

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

7-surathkal

Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

11(1

Manipal: ಮಣ್ಣಪಳ್ಳ ಕೆರೆಯಲ್ಲಿ ಹೇಳ್ಳೋರಿಲ್ಲ, ಕೇಳ್ಳೋರಿಲ್ಲ!

10(1

Mangaluru: ನಿರ್ವಹಣೆ ಇಲ್ಲದೆ ಆಕರ್ಷಣೆ ಕಳೆದುಕೊಂಡ ಜಿಂಕೆ ವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.