ಬರದಲ್ಲೂ ನೀರು ಪೋಲು

Team Udayavani, Dec 15, 2018, 1:05 PM IST

bid-2.jpg

ಔರಾದ: ಪಟ್ಟಣದ 11ನೇ ವಾರ್ಡ್‌ ಜನತಾ ಬಡಾವಣೆಯ ನಾಗರಿಕರು ಒಂದೆಡೆ ಕುಡಿಯುವ ನೀರು ಪೂರೈಸುವಂತೆ ಪಟ್ಟಣ ಪಂಚಾಯಿತಿ ಕಚೇರಿ ಎದುರು ಹೋರಾಟ ಮಾಡುತ್ತಿದ್ದಾರೆ. ಅದೇ ಬಡಾವಣೆಯ ಇನ್ನೊಂದೆಡೆ ಕೊಳವೆ ಬಾವಿಯ ನೀರು ಪೋಲಾಗುತ್ತಿದ್ದು, ಟ್ಯಾಂಕ್‌ ನಿರ್ಮಿಸಿ ಪೂರೈಸುವ ವ್ಯವಸ್ಥೆ ಮಾಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಬಡಾವಣೆಯಲ್ಲಿ ಟ್ಯಾಂಕ್‌ ನಿರ್ಮಿಸಿ ಕೊಳವೆ ಬಾವಿಯಿಂದ ನೀರು ಸಂಗ್ರಹಿಸಿದರೆ, ವಿದ್ಯುತ್‌ ಇಲ್ಲದಿದ್ದರೂ ನೀರು ಸಿಗುತ್ತದೆ ಎಂದು ಪಪಂಗೆ ಮನವಿ ಸಲ್ಲಿಸಿದ್ದಾರೆ. ಆದರೆ ಬಡಾವಣೆಯ ಕೊಳವೆ ಬಾವಿಯಿಂದ ನೂರಾರು ಲೀಟರ್‌ ನೀರು ನಿತ್ಯ ರಸ್ತೆಯಲ್ಲಿ ಹರಿದು ಪೋಲಾಗುತ್ತಿದ್ದರೂ ಅಧಿಕಾರಿಗಳು ಸಮಸ್ಯೆ ಪರಿಹರಿಸಲು ಗಮನ ಹರಿಸುತ್ತಿಲ್ಲ.
 
ಜನತಾ ಬಡಾವಣೆಯ ಅಂಗನವಾಡಿ ಕೇಂದ್ರದ ಪಕ್ಕದಲ್ಲಿ ಕಳೆದ ವರ್ಷ ಪಪಂನಿಂದ ಕೊಳವೆ ಬಾವಿ ಕೊರೆಸಲಾಗಿದೆ. ಈ ಕೊಳವೆಬಾವಿಯಲ್ಲಿ ನಿತ್ಯ 2 ಇಂಚು ನೀರು ಲಾಭ್ಯವಿದೆ. ಬಡಾವಣೆಯ ನಿವಾಸಿಗಳಿಗೆ ಒಂದು ಬಿಂದಿಗೆ ನೀರು ಬೇಕಾದರೂ ವಿದ್ಯುತ್‌ ಮೋಟಾರ್‌ ಆರಂಭಿಸಬೇಕು. ಇಲ್ಲದಿದ್ದರೆ ವಿದ್ಯುತ್‌ ಬರುವ ತನಕ ನೀರಿಗಾಗಿ ಕಾಯಬೇಕು.
ಮೋಟಾರ್‌ ಆರಂಭಿಸಿದಾಗ ನೀರು ಹೆಚ್ಚಾಗಿ ರಸ್ತೆಯ ಪಾಲಾಗುತ್ತಿದೆ ಎಂದು ಬಡಾವಣೆಯ ನಿವಾಸಿಗಳು ಹೇಳುತ್ತಾರೆ.

ಜನತಾ ಬಡಾವಣೆಯ ನಿವಾಸಿಗಳು ತಮ್ಮ ಬಡಾವಣೆಯಲ್ಲಿ ನಿತ್ಯ ಮನೆ ಮನೆಗೆ ನೀರು ಬರುತ್ತಿಲ್ಲ ಎಂದು ಪಪಂ ಅಧಿಕಾರಿಗಳಿಗೆ ದಿಗ್ಬಂಧನ ಹಾಕಿ ಗುರವಾರವಷ್ಟೇ ಪ್ರತಿಭಟನೆ ನಡೆಸಿದ್ದಾರೆ. ಅದೇ ವಾರ್ಡ್‌ನಲ್ಲಿರುವ ಕೊಳವೆ ಬಾವಿಯ ನೀರು ನಿತ್ಯ ಪೋಲಾಗುತ್ತಿದ್ದರೋ ಒಬ್ಬ ಅಧಿಕಾರಿಗಳೂ ಇದನ್ನು ತಡೆಯಲು ಮುಂದಾಗದಿರುವುದು ನಿವಾಸಿಗಳ ಅಸಮಾಧಾನಕ್ಕೆ ಕಾರಣವಾಗಿದೆ. ನೀರು ಪೋಲಾಗುತ್ತಿರುವ ಕುರಿತು ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನೆವಾಗುತ್ತಿಲ್ಲ ಎಂದು ಬಡಾವಣೆಯ ನಿವಾಸಿಗಳು ತಿಳಿಸಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆ ಕಡಿಮೆ ಆಗಿರುವ ಹಿನ್ನೆಲೆಯಲ್ಲಿ ಬೇಸಿಗೆ ಆರಂಭಕ್ಕೂ ಮುನ್ನವೇ ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗುತ್ತಿದೆ. ಪಪಂ ಅಧಿಕಾರಿಗಳು ಹಾಗೂ ಬಡಾವಣೆಯ ಸದಸ್ಯರು ಸೇರಿ ಬಡಾವಣೆಯಲ್ಲಿ ನೀರು ಪೋಲಾಗುತ್ತಿರುವುದನ್ನು ತಡೆದು ಬಡಾವಣೆಯ ಇತರ ಜನರಿಗೂ ಇಲ್ಲಿಂದಲೇ ನೀರು ಸಿಗುವಂತೆ ನೋಡಿಕೊಳ್ಳಲು ಮುಂದಾಗಬೇಕು ಎನ್ನುವುದು ಈ ಬಡಾವಣೆ ನಿವಾಸಿಗಳ ಮಾತಾಗಿದೆ.

ಬಡಾವಣೆಯ ಕೊಳವೆ ಬಾವಿಯ ಪಕ್ಕದಲ್ಲಿಯೇ ನೀರಿನ ಟ್ಯಾಂಕ್‌ ನಿರ್ಮಿಸಿದರೆ ಬಡಾವಣೆಯ ನಿವಾಸಿಗಳು ಪದೆ ಪದೇ ವಿದ್ಯುತ್‌ಗಾಗಿ ಕಾಯುವ ಅನಿವಾರ್ಯತೆ ಬರುವುದಿಲ್ಲ. ಬಿಂದಿಗೆ ನೀರು ತೆಗೆದುಕೊಳ್ಳಲು ಮೋಟಾರ್‌ ಚಾಲು
ಮಾಡುವುದರಿಂದ ನೀರು ಪೋಲಾಗುತ್ತಿದೆ. ನೀರು ರಸ್ತೆಯ ಪಕ್ಕದಲ್ಲಿ ನಿಂತು ಸೊಳ್ಳೆಗಳ ಉತ್ಪತ್ತಿ ತಾಣವಾಗಿ ಮಾರ್ಪಟ್ಟಿದೆ.

„ರವೀಂದ್ರ ಮುಕ್ತೇದಾರ

ಟಾಪ್ ನ್ಯೂಸ್

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

Gundlupet-Arrest

Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು

amit Shah (2)

Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

ಖುಷಿ ಕೊಡಬಲ್ಲ ಕೆಲವು ವಿಧಾನ ತಿಳಿಸಿ…ಏನೂ ಇಲ್ಲದೆಯೂ ಸಂತೋಷವಾಗಿರಿ!  

ಖುಷಿ ಕೊಡಬಲ್ಲ ಕೆಲವು ವಿಧಾನ ತಿಳಿಸಿ…ಏನೂ ಇಲ್ಲದೆಯೂ ಸಂತೋಷವಾಗಿರಿ!  

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

Omission in egg distribution, head teacher, physical education teacher suspended

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.