ಶಿಕ್ಷಣ ಸಚಿವರ ನೇಮಿಸಲು ಎಬಿವಿಪಿ ಆಗ್ರಹ

Team Udayavani, Dec 16, 2018, 12:10 PM IST

shikshana.jpg

ಬೆಂಗಳೂರು: ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಗೆ ಕೂಡಲೇ ಸಚಿವರನ್ನು ನೇಮಿಸಬೇಕು  ಹಾಗೂ ಪಿಯು ಇಲಾಖೆಗೆ ಕಾಯಂ ನಿರ್ದೇಶಕರನ್ನು ನೇಮಿಸಬೇಕು ಎಂದು ಆಗ್ರಹಿಸಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಶನಿವಾರ ಮಲ್ಲೇಶ್ವರದಲ್ಲಿರುವ ಪದವಿಪೂರ್ವ ಶಿಕ್ಷಣ ಇಲಾಖೆ ಎದುರು ಶನಿವಾರ ಪ್ರತಿಭಟನೆ ನಡೆಸಿದರು.

ಸಚಿವರಾಗಿದ್ದ ಎನ್‌.ಮಹೇಶ್‌ ರಾಜೀನಾಮೆ ನಂತರ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯ ಸಚಿವ ಸ್ಥಾನ ಖಾಲಿ ಇದೆ. ಸರ್ಕಾರದ ಒಳ ಜಗಳಗಳಿಂದ ತೆರವಾದ ಮಂತ್ರಿ ಸ್ಥಾನ ಇನ್ನೂ ಭರ್ತಿಯಾಗಿಲ್ಲ. ಎರಡು ವರ್ಷಗಳ ಹಿಂದೆ ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಇಲಾಖೆ ತೀವ್ರ ಮುಖಭಂಗ ಅನುಭವಿಸಿತ್ತಲ್ಲದೇ ಲಕ್ಷಾಂತರ ವಿದ್ಯಾರ್ಥಿಗಳಲ್ಲಿ ಗೊಂದಲ ಸೃಷ್ಟಿಯಾಗಿತ್ತು.

ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗೆ ಕೆಲವೇ ತಿಂಗಳುಗಳು ಬಾಕಿ ಇದ್ದು, ಇದುವರೆಗೂ ಕಾಯಂ ನಿರ್ದೇಶಕರನ್ನು ಸರ್ಕಾರ ನೇಮಕ ಮಾಡಿಲ್ಲ ಎಂದು ಎಬಿವಿಪಿ ಬೆಂಗಳೂರು ಮಹಾನಗರ ಸಂಘಟನಾ ಕಾರ್ಯದರ್ಶಿ ಜಯಪ್ರಕಾಶ ಆರೋಪಿಸಿದರು.

2016ನೇ ಸಾಲಿನ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಬಂಧಿತನಾಗಿದ್ದ ಶಿವಕುಮಾರ್‌, ಲಕ್ಷಾಂತರ ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಜೀವನದ ಜತೆ ಚೆಲ್ಲಾಟವಾಡಿ, ರಾಜ್ಯ ಹಾಗೂ ಪಿಯು ಇಲಾಖೆ ಮರ್ಯಾದೆ ತೆಗೆದಿದ್ದರೂ, ಆತನಿಗೆ ಯಾವುದೇ ಶಿಕ್ಷೆಯಾಗಿಲ್ಲ. ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಿ, ಮುಂದೇ ಈ ರೀತಿ ಆಗದಂತೆ ಎಚ್ಚರ ವಹಿಸಬೇಕು ಎಂದು ಆಗ್ರಹಿಸಿದರು.

ಪಿಯುಸಿ ವಾರ್ಷಿಕ ಪರೀಕ್ಷೆ ಸಮೀಪಿಸುತ್ತಿರುವ ಕಾರಣ, ವಿದ್ಯಾರ್ಥಿಗಳಲ್ಲಿ ಯಾವುದೇ ರೀತಿಯ ಆತಂಕ ಸೃಷ್ಟಿಯಾಗದಂತೆ ಸರ್ಕಾರ ಎಚ್ಚರ ವಹಿಸಬೇಕು. ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಆರೋಪಿಗಳು ಹಾಗೂ ಇದಕ್ಕೆ ಸಹಕರಿಸುವ ಇಲಾಖೆ ಅಧಿಕಾರಿಗಳ ಮೇಲೆ ಕಣ್ಣಿಡಬೇಕು. ಸಿಐಡಿ ತನಿಖಾ ವರದಿಯಲ್ಲಿ ಉಲ್ಲೇಖೀಸಿರುವ ಸಂಸ್ಥೆಗಳ, ಕಾಲೇಜುಗಳ ಮಾನ್ಯತೆಯನ್ನು ಸಂಪೂರ್ಣ ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.

ಬೆಂಗಳೂರು ಕೇಂದ್ರ ನಗರ ಸಂಘಟನಾ ಕಾರ್ಯದರ್ಶಿಗಳಾದ ವೆಂಕಟೇಶ, ಶಿವಾನಂದ, ಜಿಲ್ಲಾ ಸಂಚಾಲಕರಾದ ಸುಭಾಷ್‌, ತೇಜಸ್‌, ಗಗನ, ನಗರ ಕಾರ್ಯದರ್ಶಿಗಳಾದ ಗುರುಪ್ರಸಾದ, ಕಿರಣ ಸೇರಿದಂತೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

Siddu-Somanna

MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Siddu–Muniyappa

Ration Card: ಬಡವರಿಗೆ ಬಿಪಿಎಲ್‌ ಕಾರ್ಡ್‌ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ

Session: ವಕ್ಫ್ ಜೊತೆ ಬಿಪಿಎಲ್‌ ಹೋರಾಟಕ್ಕೆ ಬಿಜೆಪಿ ಸಜ್ಜು

Session: ವಕ್ಫ್ ಜೊತೆ ಬಿಪಿಎಲ್‌ ಹೋರಾಟಕ್ಕೆ ಬಿಜೆಪಿ ಸಜ್ಜು

2-horoscope

Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

Siddu-Somanna

MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Siddu–Muniyappa

Ration Card: ಬಡವರಿಗೆ ಬಿಪಿಎಲ್‌ ಕಾರ್ಡ್‌ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.