ಉಡುಪಿಯಲ್ಲಿ ರಾಷ್ಟ್ರಪತಿ ಭೇಟಿಗೆ ಸಿದ್ಧತೆ


Team Udayavani, Dec 17, 2018, 9:34 AM IST

udupi.jpg

ಉಡುಪಿ: ಶ್ರೀ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಸನ್ಯಾಸಾಶ್ರಮ ಸ್ವೀಕರಿಸಿದ 80ನೇ ವರ್ಧಂತಿ ಅಂಗವಾಗಿ ಅವರನ್ನು ಅಭಿನಂದಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಷ್ಟ್ರಪತಿ ರಾಮನಾಥ ಕೋವಿಂದ್‌ ಡಿ. 27ರಂದು ಉಡುಪಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಪೂರ್ವಭಾವಿ ಸಿದ್ಧತಾ ಸಭೆಯು ರವಿವಾರ ಸಂಜೆ ಉಡುಪಿ ಪೇಜಾವರ ಮಠದ ರಾಮವಿಟಲ ಸಭಾಂಗಣದಲ್ಲಿ ನಡೆಯಿತು. 

ಡಿ. 27ರ ಮಧ್ಯಾಹ್ನ 12.10ಕ್ಕೆ ಆಗಮಿಸುವ ರಾಷ್ಟ್ರಪತಿಯವರು ಒಂದು ತಾಸು ಉಡುಪಿಯಲ್ಲಿರುತ್ತಾರೆ. ಕೇಂದ್ರ ಸಚಿವೆ, ಶ್ರೀಗಳ ಶಿಷ್ಯೆ ಉಮಾಭಾರತಿ ಆಯೋಜಿಸುವ ಈ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜೂಭಾಯಿ ವಾಲಾ, ನಾಗಾಲ್ಯಾಂಡ್‌ ರಾಜ್ಯಪಾಲ ಪಿ.ಬಿ. ಆಚಾರ್ಯ ಪಾಲ್ಗೊಳ್ಳುವರು. 

ರಾಜಾಂಗಣದಲ್ಲಿ  ಸಭೆ?
ರಥಬೀದಿಯಲ್ಲಿ ಸಭೆ ನಡೆಸಲು ಇಕ್ಕಟ್ಟಾಗುತ್ತದೆ. ರಾಜಾಂಗಣದ ಪಾರ್ಕಿಂಗ್‌ ಪ್ರದೇಶ ತೆರೆದ ಸ್ಥಳವಾದ ಕಾರಣ ಭದ್ರತಾ ದೃಷ್ಟಿಯಿಂದ ಸೂಕ್ತವಲ್ಲ. ರಾಜಾಂಗಣ ಸಭಾಂಗಣವು ಆವರಣ ಹೊಂದಿರುವುದರಿಂದ ಇದು ಸೂಕ್ತ ಎಂಬ ಅಭಿಪ್ರಾಯ ಬಂತು. “ಇಲ್ಲಿ ಸಭೆ ಮಾಡಿದರೆ ವೇದಿಕೆಯಿಂದ 30 ಮೀ. ಅಂತರ ಖಾಲಿ ಬಿಡಬೇಕು. ಬಹುತೇಕ ಅರ್ಧಾಂಶ ಸಭಾಂಗಣದಲ್ಲಿ ಮಾತ್ರ ಜನರು ಕುಳಿತುಕೊಳ್ಳಬಹುದು. ಮೇಲ್ಭಾಗದಲ್ಲಿ ಕುಳಿತುಕೊಳ್ಳಲು ಅವಕಾಶಗಳಿಲ್ಲ’ ಎಂದು  ಪರ್ಯಾಯ ಶ್ರೀ ಪಲಿಮಾರು ಮಠದ ಅಧಿಕಾರಿ ಪ್ರಹ್ಲಾದ ಆಚಾರ್ಯ ತಿಳಿಸಿದರು. 

ಸರ್ಕಲ್‌ ಇನ್ಸ್‌ಪೆಕ್ಟರ್‌ ಮಂಜುನಾಥ್‌ ಮಾತನಾಡಿ, ಕಾರ್ಯಕ್ರಮಕ್ಕೆ ಒಂದು ತಾಸು ಮುನ್ನ  ಆಹ್ವಾನಿತರು ಸಭೆಯಲ್ಲಿ ಆಸೀನರಾಗಬೇಕು. ಶ್ರೀ ಕೃಷ್ಣಮಠ ಪರಿಸರದ 100 ಮೀ. ಸುತ್ತಲಿನ ಎಲ್ಲ ಅಂಗಡಿಗಳನ್ನು ಮುಚ್ಚ ಬೇಕು. ಆಗಮಿಸುವ ವಿಐಪಿಗಳಿಗೆ ಪಾಸ್‌ ನೀಡಬೇಕು. ಅವರು ಪಾಸ್‌ನೊಂದಿಗೆ ಗುರುತು ಚೀಟಿಯನ್ನು ತರಬೇಕು. ಪಾರ್ಕಿಂಗ್‌ ಪ್ರದೇಶದಲ್ಲಿ ಪಾರ್ಕಿಂಗ್‌ಗೆ ಅವಕಾಶವಿಲ್ಲ. ಆ ದಿನ ಮಠದ ಪರಿಸರವನ್ನು ಎನ್‌ಎಸ್‌ಜಿ ತನ್ನ ಸುಪರ್ದಿಗೆ ತೆಗೆದುಕೊಳ್ಳುತ್ತದೆ. ರಾಜಾಂಗಣದ ಸಮೀಕ್ಷೆ ನಡೆಸಿದ್ದೇವೆ. ಅಂತಿಮ ನಿರ್ಣಯವನ್ನು ಎನ್‌ಎಸ್‌ಜಿ ತೆಗೆದುಕೊಳ್ಳುತ್ತದೆ ಎಂದರು. 

ಗಣ್ಯರಾದ ನಳಿನಿ ಪ್ರದೀಪ್‌, ಬಾಲಾಜಿ ರಾಘವೇಂದ್ರ ಆಚಾರ್ಯ, ಕೆ.ಕೆ. ಸರಳಾಯ, ಗಣೇಶ ರಾವ್‌, ಪ್ರದೀಪ್‌ಕುಮಾರ್‌ ಕಲ್ಕೂರ, ವಿ.ಜಿ. ಶೆಟ್ಟಿ, ವಿಲಾಸ ನಾಯಕ್‌, ದೇವದಾಸ ಹೆಬ್ಟಾರ್‌ ಉಪಸ್ಥಿತರಿದ್ದು ಚರ್ಚಿಸಿದರು. ವಾಸುದೇವ ಭಟ್‌ ಪೆರಂಪಳ್ಳಿ ನಿರ್ವಹಿಸಿದರು.

ಟಾಪ್ ನ್ಯೂಸ್

Shri-Guru-Kottureshwara-Temple

ಬರೀ ಹುಂಡಿ ಪೆಟ್ಟಿಗೆಗಳಿಂದ ತುಂಬಿದ ಕೊಟ್ಟೂರೇಶ್ವರ ದೇವಸ್ಥಾನ: ಭಕ್ತರಿಂದ ತೀವ್ರ ಆಕ್ರೋಶ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

bellad

Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್

17-ckm

Kottigehara: ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳ ಬಂಧನ

16-yellapura

Yellapura: ಬಸ್‌- ಬೈಕ್‌ ಡಿಕ್ಕಿ; ಟಯರ್‌ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು

ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Udupi: ಸಂಚಾರ ಬದಲಿಸಿದರೂ ಸಮಸ್ಯೆ ಬದಲಾಗಲಿಲ್ಲ!

6

Karkala: ಲೈಸೆನ್ಸ್‌ ಇಲ್ಲದ ವ್ಯಾಪಾರಕ್ಕೆ ಕಡಿವಾಣ

9-

Delhi ಗಣರಾಜ್ಯೋತ್ಸವ; ಹೆಬ್ರಿಯ ಮಹಿಳೆಗೆ ವಿಶೇಷ ಅವಕಾಶ

police crime

Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು

1-can

Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1–dddd

Vitla; ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ದಂಪತಿಗೆ ಗಾಯ, ಬಾಲಕ ಮೃ*ತ್ಯು

Shri-Guru-Kottureshwara-Temple

ಬರೀ ಹುಂಡಿ ಪೆಟ್ಟಿಗೆಗಳಿಂದ ತುಂಬಿದ ಕೊಟ್ಟೂರೇಶ್ವರ ದೇವಸ್ಥಾನ: ಭಕ್ತರಿಂದ ತೀವ್ರ ಆಕ್ರೋಶ

10

Udupi: ಸಂಚಾರ ಬದಲಿಸಿದರೂ ಸಮಸ್ಯೆ ಬದಲಾಗಲಿಲ್ಲ!

9

Surathkal-ಗಣೇಶಪುರ ರಸ್ತೆಯಲ್ಲಿ ಟ್ಯಾಂಕರ್‌ ರಾಜ್ಯಭಾರ!

8

Mangaluru: ಕರಾವಳಿ ಉತ್ಸವ; ಮತ್ಸ್ಯ ಲೋಕದೊಳಗೆ ನಾವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.