ಮೂವರು ಗಾಂಜಾ ಮಾರಾಟಗಾರರ ಸೆರೆ
Team Udayavani, Dec 17, 2018, 12:16 PM IST
ಬೆಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಕೊತ್ತನೂರು ಪೊಲೀಸರು ಬಂಧಿಸಿದ್ದಾರೆ. ಜಕ್ಕೂರಿನ ಮುರಳಿ (21), ಬಾಲಚಂದ್ರ (20) ಮತ್ತು ವೆಂಕಟೇಶಪುರದ ದಿನೇಶ್ (19)ಬಂಧಿತರು. ಆರೋಪಿಗಳಿಂದ 32 ಸಾವಿರ ರೂ. ಮೌಲ್ಯದ 1 ಕೆ.ಜಿ.100 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ಬಂಧಿತರು ಕೋಲಾರ, ಹೊಸಕೋಟೆ ಭಾಗದಲ್ಲಿ ಮಧ್ಯವರ್ತಿಗಳ ಮೂಲಕ ಗಾಂಜಾ ಖರೀದಿಸುತ್ತಿದ್ದರು. ಬಳಿಕ ಸಣ್ಣ-ಸಣ್ಣ ಪ್ಯಾಕೆಟ್ಗಳನ್ನಾಗಿ ಮಾಡಿ ಅಧಿಕ ಬೆಲೆಗೆ ವಿದ್ಯಾರ್ಥಿಗಳು, ಟೆಕ್ಕಿಗಳು, ವಿದೇಶಿಯರಿಗೆ ಮಾರಾಟ ಮಾಡುತ್ತಿದ್ದರು. ವಾರ ಅಥವಾ 15 ದಿನಕ್ಕೊಮ್ಮೆ ಮಧ್ಯವರ್ತಿಗಳು ಆರೋಪಿಗಳಿಗೆ ಗಾಂಜಾ ಸರಬರಾಜು ಮಾಡುತ್ತಿದ್ದರು. ಆದರೆ, ಆ ಮಧ್ಯವರ್ತಿಗಳ ಬಗ್ಗೆ ಹೆಚ್ಚಿನ ಮಾಹಿತಿಯಿಲ್ಲ.
ಪ್ರತಿ ಬಾರಿ ಒಂದೊಂದು ಸ್ಥಳದಲ್ಲಿ ಗಾಂಜಾ ಸರಬರಾಜು ಮಾಡುತ್ತಿದ್ದುದಾಗಿ ಆರೋಪಿಗಳು ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾರೆ. ತನಿಖೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದರು. ಆರೋಪಿಗಳು ಇತ್ತೀಚೆಗೆ ಬಾಗಲೂರು ಮುಖ್ಯರಸ್ತೆಯ ಎವರ್ ಗ್ರೀನ್ ಲೇಔಟ್ನ ಖಾಸಗಿ ಶಾಲೆ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದರು. ಈ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.