ಸುವರ್ಣಸೌಧ ಪಕ್ಕದಲ್ಲೇ ಹಾಹಾಕಾರ!
Team Udayavani, Dec 17, 2018, 4:46 PM IST
ಬೆಳಗಾವಿ: ಉತ್ತರ ಕರ್ನಾಟಕದ ಅಭಿವೃದ್ಧಿ ದೃಷ್ಟಿಯಿಂದ ಸುವರ್ಣ ವಿಧಾನಸೌಧದಲ್ಲಿ ಚಳಗಾಲ ಅಧಿವೇಶನ ನಡೆಯುತ್ತಿದ್ದರೆ, ಅದರ ಕೂಗಳತೆಯಲ್ಲಿರುವ ಬಸ್ತವಾಡ ಹಾಗೂ ಹಲಗಾ ಗ್ರಾಮಗಳಲ್ಲಿ ಕುಡಿಯುವ ನೀರಿನ ಹಾಹಾಕಾರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಿಡಕಲ್ ಜಲಾಶಯದಿಂದ ಸುವರ್ಣಸೌಧಕ್ಕೆ ಅಳವಡಿಸಿರುವ ನೀರಿನ ಪೈಪ್ ಲೈನ್‌ನ್ನು ಹಲಗಾ ಹಾಗೂ ಬಸ್ತವಾಡ ಗ್ರಾಮಕ್ಕೆ ಅಳವಡಿಸುವಂತೆ ಇಲ್ಲಿನ ಗ್ರಾಮಸ್ಥರು ಅನೇಕ ಬಾರಿ ಮನವಿ ಸಲ್ಲಿಸಿದರೂ ಯಾವುದೇ ರೀತಿ ಪ್ರಯೋಜನವಾಗಿಲ್ಲ. ಎರಡು ದಿನಕೊಮ್ಮೆ ಬರುವ ನೀರು ಇಲ್ಲಿನ ಜನರಿಗೆ ಸಾಕಾಗುತ್ತಿಲ್ಲ.
ಅಲ್ಲದೇ ಇಲ್ಲಿನ ಗ್ರಾಮಸ್ಥರು ಪರ್ಯಾಯವಾಗಿ ನಿತ್ಯ ತಮ್ಮ ಜಮೀನುಗಳಿಗೆ ತೆರಳಿ ಬಾವಿಗಳಿಂದ ನೀರನ್ನು ಸೈಕಲ್ ಮೂಲಕ ತರುವ ಪರಿಸ್ಥಿತಿ ಎದುರಾಗಿದೆ. ಹಲಗಾ ಹಾಗೂ ಬಸ್ತವಾಡ ಗ್ರಾಮಗಳಲ್ಲಿ ಒಂದು ಓಣಿಯಲ್ಲಿ ರಸ್ತೆಯಾದರೆ ಇನ್ನೊಂದೆಡೆ ರಸ್ತೆ ಕಾಮಗಾರಿ ನಡೆದಿಲ್ಲ. ದ್ವಿಚಕ್ರ ವಾಹನ ಸವಾರರು ಹಾಗೂ ರೈತರು ನಿತ್ಯ ಹದಗೆಟ್ಟ ರಸ್ತೆಯಲ್ಲಿ ಸಂಚರಿಸುವ ಪರಿಸ್ಥಿತಿ ಎದುರಾಗಿದೆ.
ಹಿಡಕಲ್‌ದಿಂದ ಸುವರ್ಣವಿಧಾನ ಸೌಧಕ್ಕೆ ಅಳವಡಿಸಿದ ನೀರಿನ ಪೈಪ್‌ಲೈನ್ ಹಲಗಾ ಹಾಗೂ ಬಸ್ತವಾಡ ಗ್ರಾಮಕ್ಕೆ ಅಳವಡಿಸುವಂತೆ ಈ ಅಧಿವೇಶದಲ್ಲಿ ಚರ್ಚಿಸಲಾಗುವುದು.
. ಲಕ್ಷ್ಮೀ ಹೆಬ್ಟಾಳಕರ, ಬೆಳಗಾವಿ ಗ್ರಾಮೀಣ ಶಾಸಕಿ
ಹಲಗಾ ಗ್ರಾಮದಲ್ಲಿ ಎರಡು ದಿನಕ್ಕೊಮ್ಮೆ ನೀರು ಪೂರೈಸಲಾಗುತ್ತಿದೆ. ಇದರಿಂದ ನಿತ್ಯ ಇಲ್ಲಿನ ಗ್ರಾಮಸ್ಥರಿಗೆ ಸಮಸ್ಯೆಯಾಗುತ್ತಿದೆ. ಹಿಡಕಲ್ ಡ್ಯಾಂನಿಂದ ಸುವರ್ಣ ವಿಧಾನಸೌಧಕ್ಕೆ ನೀರಿನ ಪೈಪ್‌ಲೈನ್ ಮಾಡಲಾಗಿದೆ. ಆದೇ ಪೈಪ್‌ಲೈನ್‌ನ್ನು ನಮ್ಮ ಗ್ರಾಮಕ್ಕೆ ಜೋಡಿಸಿದರೆ ನೀರಿನ ಸಮಸ್ಯೆ ಹೋಗಲಾಡಿಸಬಹುದು.
.ಚಂಪವ್ವ ದೇಸಾಯಿ, ಹಲಗಾ ಗ್ರಾಮಸ್ಥೆ
ಹಿಡಕಲ್‌ದಿಂದ ಸುವರ್ಣ ವಿಧಾನಸೌಧಕ್ಕೆ ಅಳವಡಿರುವ ನೀರಿನ ಪೈಪ್‌ಲೈನ್‌ನ್ನು ಬಸ್ತವಾಡ ಗ್ರಾಮಕ್ಕೆ ಅಳವಡಿಸುವಂತೆ ಹಾಗೂ ರಸ್ತೆ ದುರಸ್ತಿ ಮಾಡುವಂತೆ ಅನೇಕ ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಯಾವುದೇ ರೀತಿ ಪ್ರಯೋಜನವಾಗಿಲ್ಲ.
. ತವನಪ್ಪ ಪಾಟ್ನೆ, ಬಸ್ತವಾಡ ಗ್ರಾಮಸ್ಥ
ಅಜಿತ ಶಿರಗಾಪುರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.