‘ಪ್ರತಿಭೆಯಿಂದ ಜೀವನದಲ್ಲಿ ಯಶಸ್ಸು ಸಾಧ್ಯ’


Team Udayavani, Dec 18, 2018, 1:00 AM IST

brain-waves-17-12.jpg

ಕೊಕ್ಕಡ: ಅಂತರ್‌ಕಾಲೇಜು ಮಟ್ಟದ ಪ.ಪೂ. ಕಾಲೇಜುಗಳ ಕಾಮರ್ಸ್‌ ಮತ್ತು ಮ್ಯಾನೇಜ್‌ಮೆಂಟ್‌ ಫೆಸ್ಟ್‌ ‘ಬ್ರೈನ್‌ ವೇವ್ಸ್‌-2ಕೆ18’ ನೆಲ್ಯಾಡಿ ಬೆಥನಿ ಸಾಪಿಯೆನ್‌ಶಿಯಾ ಪ್ರಥಮ ದರ್ಜೆ ಕಾಲೇಜಿನ ಆತಿಥ್ಯದಲ್ಲಿ ಕಾಲೇಜು ಕ್ಯಾಂಪಸ್‌ನಲ್ಲಿ  ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದ ಕಡಬ ಸೈಂಟ್‌ ಜೋಕಿಮ್ಸ್‌ ಪ.ಪೂ. ಕಾಲೇಜಿನ ಪ್ರಾಂಶುಪಾಲ ವಂ| ವಿನ್ಸೆಂಟ್‌ ಡಿ’ಸೋಜಾ ಅವರು, ಪ್ರತಿಯೊಬ್ಬರಲ್ಲೂ ಅಮೂಲ್ಯವಾದ ಪ್ರತಿಭೆಗಳಿವೆ. ತಮ್ಮಲ್ಲಿರುವ ಪ್ರತಿಭೆಯನ್ನು ಗುರುತಿಸಿ ಬೆಳೆಸುವುದೇ ಆತನ ಯಶಸ್ಸಿನ ಮೆಟ್ಟಿಲು ಆಗಿದೆ. ಇನ್ನೊಬ್ಬರ ಪ್ರತಿಭೆಗೆ ಚಪ್ಪಾಳೆ ತಟ್ಟುವುದರ ಬದಲು ತಮ್ಮ ತಮ್ಮ ಪ್ರತಿಭೆಗಳನ್ನು ಕಂಡು ಹಿಡಿದು ಬೆಳೆಸುವುದೇ ಸೂಕ್ತ. ನಮ್ಮನ್ನು ಇತರರಿಗೆ ಹೋಲಿಸುವುದೇ ನಮ್ಮ ಬೆಳವಣಿಗೆಗೆ ಅತಿದೊಡ್ಡ ತೊಡಕು. ಆದ್ದರಿಂದ ದೇವರು ನೀಡಿದ ಅಮೂಲ್ಯ ಪ್ರತಿಭೆ ಅಮೂಲ್ಯವೆಂದೇ ನಂಬಿ ಮುಂದೆ ಸಾಗುವ ಪ್ರತಿಯೊಬ್ಬ ವ್ಯಕ್ತಿಯೂ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸಾಪಿಯೆನ್‌ಶಿಯಾ ಕಾಲೇಜಿನ ಪ್ರಾಂಶುಪಾಲ ವಂ| ಡಾ| ವರ್ಗೀಸ್‌ ಕೈಪುನಡ್ಕ ಒಐಸಿ ಅವರು ಮಾತನಾಡಿ, ವಿದ್ಯಾರ್ಥಿಗಳ ಚಟುವಟಿಕೆಗಳು ಕೇವಲ ಪಠ್ಯ ಚಟುವಟಿಕೆಗಳಿಗೆ ಸೀಮಿತಗೊಳ್ಳದೇ ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳುವಂತ ಪಠ್ಯೇತರ ಚಟುವಟಿಕೆಗಳಿಗೂ ಒತ್ತು ಕೊಡುವಂತಿರಬೇಕು. ಇಂತಹ ಸ್ಪರ್ಧೆಗಳಲ್ಲಿ ಭಾಗವಹಿಸುವ ಮೂಲಕ ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಗೆಲುವಿಗೆ ಸೋಪಾನ
ಜ್ಞಾನೋದಯ ಬೆಥನಿ ಪ.ಪೂ. ಕಾಲೇಜಿನ ಪ್ರಾಂಶುಪಾಲ ವಂ| ಫ್ರಾನ್ಸಿಸ್‌ ತೆಕ್ಕೆಪೂಕಳಂ ಒಐಸಿ ಅವರು ಮಾತನಾಡಿ, ಶಿಕ್ಷಕರು ತಮ್ಮಲ್ಲಿನ ಜ್ಞಾನವನ್ನು ಮಕ್ಕಳಿಗೆ ಧಾರೆ ಎರೆಯಬೇಕು. ವಿದ್ಯಾರ್ಥಿಗಳು ತಮಗೆ ಸಿಕ್ಕಿದ ಅವಕಾಶಗಳನ್ನು ಬಳಕೆ ಮಾಡಿ ಕೊಳ್ಳಬೇಕು. ಇಂದಿನ ಸೋಲು ಮುಂದಿನ ಗೆಲುವಿಗೆ ಸೋಪಾನವಾಗಲಿದೆ ಎಂದರು. ಮುಖ್ಯ ಅತಿಥಿಯಾಗಿದ್ದ ನೆಲ್ಯಾಡಿ ಗ್ರಾ.ಪಂ. ಅಧ್ಯಕ್ಷ ಗಂಗಾಧರ ಶೆಟ್ಟಿ ಹೊಸಮನೆ ಮಾತನಾಡಿ, ಬೆಥನಿ ವಿದ್ಯಾಸಂಸ್ಥೆ ಶಿಕ್ಷಣ, ಕ್ರೀಡೆ ಮೂಲಕ ರಾಜ್ಯ, ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದೆ. ವಿದ್ಯಾರ್ಥಿಗಳು ಮಾದಕ ವ್ಯಸನಗಳಿಂದ ದೂರವಿದ್ದು ನಿಶ್ಚಿತ ಗುರಿಯನ್ನು ಇಟ್ಟುಕೊಂಡಲ್ಲಿ ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಪಡೆಯಬಹುದು ಎಂದರು.

ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ತೋಮಸ್‌ ಸಿ.ಎಂ. ಶುಭಹಾರೈಸಿದರು. ಬೆಥನಿ ವಿದ್ಯಾಸಂಸ್ಥೆಗಳ ಬರ್ಸರ್‌ ವಂ| ಐಸಾಕ್‌ ಸಾಮುವೆಲ್‌ ಒಐಸಿ, ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷ ಜಾನ್‌ ಜೇಕಬ್‌ ಉಪಸ್ಥಿತರಿದ್ದರು. ವಿದ್ಯಾರ್ಥಿ ನಾಯಕ ಸೈಜು ಸ್ವಾಗತಿಸಿ, ನಾಯಕಿ ಅನುಮೋಲ್‌ ವಂದಿಸಿದರು. ವಿದ್ಯಾರ್ಥಿನಿಯರಾದ ಜಿಲ್ಸಿತಾ, ಜಿನ್ಸಿ ಕಾರ್ಯಕ್ರಮ ನಿರೂಪಿಸಿದರು.

10 ಕಾಲೇಜುಗಳು ಭಾಗಿ
ಕಾಮರ್ಸ್‌ ಹಾಗೂ ಮ್ಯಾನೇಜ್‌ಮೆಂಟ್‌ಗೆ ಸಂಬಂಧಿಸಿದ ವಿವಿಧ ಸ್ಪರ್ಧೆಗಳು ನಡೆಯಿತು. ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ ಸುಮಾರು 10 ಕಾಲೇಜುಗಳ 17 ತಂಡಗಳು ಸ್ಪರ್ಧೆಗಳಲ್ಲಿ ಭಾಗವಹಿಸಿದ್ದವು. ಸಂಜೆ ನಡೆದ ಸಮಾರೋಪದಲ್ಲಿ ವಿಜೇತರಿಗೆ ನಗದು ಬಹುಮಾನ, ಟ್ರೋಫಿ ವಿತರಿಸಲಾಯಿತು. ಸಾಪಿಯೆನ್‌ಶಿಯಾ ಬೆಥನಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳೇ ಸಂಘಟಿಸಿದ್ದರು.

ಟಾಪ್ ನ್ಯೂಸ್

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Guttigar: ಮಾವಿನಕಟ್ಟೆ; ಮರದಿಂದ ಬಿದ್ದು ವ್ಯಕ್ತಿ ಸಾವು

5

Puttur: ಗ್ರಾಮ ಚಾವಡಿಗೆ 150 ವರ್ಷ ಹಳೆಯ ಕಟ್ಟಡವೇ ಗತಿ!

4

Sullia: ಉಪಟಳ ಮಾಡುವ ಕೋತಿಗಳಿಗೆ ಶಾಕ್‌ ಟ್ರೀಟ್‌ಮೆಂಟ್‌!

3(1

Sullia: ಬಸ್‌ ತಂಗುದಾಣ ನಿರ್ವಹಣೆಗೆ ನಿರಾಸಕ್ತಿ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

de

Guttigar: ಮಾವಿನಕಟ್ಟೆ; ಮರದಿಂದ ಬಿದ್ದು ವ್ಯಕ್ತಿ ಸಾವು

9

Kaup: ಬೀಚ್‌ನಲ್ಲಿನ್ನು ಪ್ಯಾರಾ ಮೋಟರಿಂಗ್‌

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

7

Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.