ಶ್ರೀ ಕೃಷ್ಣ ವಿಟ್ಠಲ ಪ್ರತಿಷ್ಠಾನ: ಧಾರ್ಮಿಕ, ಸಾಂಸ್ಕೃತಿಕ ಉತ್ಸವ
Team Udayavani, Dec 18, 2018, 4:49 PM IST
ಮುಂಬಯಿ: ಶ್ರೀ ಕೃಷ್ಣ ವಿಟ್ಠಲ ಪ್ರತಿಷ್ಠಾನ ಮುಂಬಯಿ ಇದರ 21 ನೇ ವಾರ್ಷಿಕ ಧಾರ್ಮಿಕ , ಸಾಂಸ್ಕೃತಿಕ ಉತ್ಸವವು ಡಿ. 16 ರಂದು ಮುಂಜಾನೆ 6 ರಿಂದ ಅಪರಾಹ್ನ 3 ರವ ರೆಗೆ ಅಂಧೇರಿ ಪ. ಎಸ್. ವಿ. ರೋಡ್, ಫಾಯರ್ ಬ್ರಿಗೇಡ್ ಸಮೀಪದ ಶ್ರೀ ಅದಮಾರು ಮಠದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.
ಧಾರ್ಮಿಕ ಕಾರ್ಯಕ್ರಮವಾಗಿ ಅಷೊuàತ್ತರ ಶತ ನಾಲಿಕೇರ ಗಣಪತಿ ಯಾಗ ಹಾಗೂ ಶ್ರೀ ಲಕ್ಷ್ಮೀನಾರಾಯಣ ಮಹಾಪೂಜೆಯನ್ನು ಪರಮಪೂಜ್ಯ ಶ್ರೀ ಪೇಜಾವರ ಶ್ರೀಗಳ ಆಶೀರ್ವಾದ ಗಳೊಂದಿಗೆ ಸಂಸ್ಥೆಯ ಸಂಸ್ಥಾಪಕಾಧ್ಯಕ್ಷ ವಿದ್ವಾನ್ ಕೈರಬೆಟ್ಟು ವಿಶ್ವನಾಥ ಭಟ್ ಅವರ ನೇತೃತ್ವದಲ್ಲಿ ಯೋಗ್ಯ ವಿಪ್ರವೃಂದದೊಂದಿಗೆ ನಡೆಯಿತು. ಮುಂಜಾನೆ 6 ರಿಂದ ಮಧ್ಯಾಹ್ನ 12 ರವರೆಗೆ ಮಹಾಯಾಗ ಮತ್ತು ಪೂಜೆ, ಮಧೆÌàಶ ಭಜನಾ ಮಂಡಳಿ, ವಾಗೆªàವಿ ಭಜನಾ ಮಂಡಳಿ ಹಾಗೂ ಶ್ರೀ ಕೃಷ್ಣ ವಿಟuಲ ಭಜನಾ ಮಂಡಳಿಯ ಸದಸ್ಯೆಯರಿಂದ ಭಜನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಇದೇ ಸಂದರ್ಭದಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅಂಧೇರಿ ವಾರ್ಡ್ 82 ರ ನಗರ ಸೇವಕ ಜಗದೀಶ್ ಕುಟ್ಟಿ ಅಮೀನ್, ಬಿಎಸ್‌ಕೆಬಿ ಅಸೋಸಿಯೇಶನ್ ಅಧ್ಯಕ್ಷ ಡಾ| ಸುರೇಶ್ ರಾವ್, ಸೋನಿ ಅಪ್ಲೈಯನ್ಸಸ್ ಇದರ ಪಾಂಡುರಂಗ ಶೆಟ್ಟಿ, ಬಂಟರ ಸಂಘ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಸುಧಾಕರ ಹೆಗ್ಡೆ, ಹೊಟೇಲ್ ಉದ್ಯಮಿ ಜಗದೀಶ್ ಶ್ರೀನಿವಾಸ್ ಶೆಟ್ಟಿ, ಅಪೆಕ್ಸ್ ಗ್ರೂಪ್ ಮುಂಬಯಿ ಯಶವಂತ್ ಶೆಟ್ಟಿ ಬನ್ನಂಜೆ, ದಕ್ಷಿಣ ಮುಂಬಯಿ ಬಿಜೆಪಿ ಅಧ್ಯಕ್ಷ ಸುಧೀರ್ ಕೆ. ಶೆಟ್ಟಿ ಅವರು ಆಗಮಿಸಿದ್ದರು.
ಬಂಟರ ಸಂಘ ನೂತನ ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ಮುಂಡಪ್ಪ ಎಸ್. ಪಯ್ಯಡೆ, ಬೆಳ್ಳಂಪಳ್ಳಿ ಬಾಲಕೃಷ್ಣ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು. ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಮನೀಯ ಸಾಧನೆಗೈದ ಸಮಾಜ ಸೇವಕ ವಿರಾರ್ ಶಂಕರ್ ಬಿ. ಶೆಟ್ಟಿ, ಸಂಗೀತ ಕ್ಷೇತ್ರದ ಸಾಧಕ ಡಾ| ಬಿ. ಇ. ಕಮಲ್ ಕುಮಾರ್ ಬೆಂಗಳೂರು, ಧಾರ್ಮಿಕ ಕ್ಷೇತ್ರದ ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ, ಸಮಾಜ ಸೇವಕ ರಮೇಶ್ ಡಿ. ಸಾವಂತ್, ಧಾರ್ಮಿಕ ಚಿಂತಕ ರಮೇಶ್ ಗುರುಸ್ವಾಮಿ ಅಪ್ಪಾಜಿಬೀಡು ಇವರನ್ನು ಗಣ್ಯರ ಸಮ್ಮುಖದಲ್ಲಿ ಬಿರುದು ಪ್ರದಾನಿಸಿ ಗೌರವಿಸಲಾಯಿತು.
ರಂಗಕಲಾವಿದ ಅಶೋಕ್ ಪಕ್ಕಳ, ಕಲಾ ಸಂಘಟಕ ಕರ್ನೂರು ಮೋಹನ್ ರೈ, ಸುಶೀಲಾ ದೇವಾಡಿಗ ಇವರು ಕಾರ್ಯಕ್ರಮ ನಿರ್ವಹಿಸಿದರು. ಮಧ್ಯಾಹ್ನ 1.30 ರಿಂದ ಮಹಾ ಅನ್ನಸಂತರ್ಪಣೆ ನಡೆಯಿತು. ತುಳು-ಕನ್ನಡಿಗರು ಸೇರಿದಂತೆ ಸಾವಿರಾರು ಭಕ್ತರು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವಾಗಿ ಕು| ಐಶ್ವರ್ಯಾ ಸುಭಾಶ್ ಇವರಿಂದ ಭರತನಾಟ್ಯ ಹಾಗೂ ಡಾ| ಬಿ. ಇ. ಕಮಲ್ ಕುಮಾರ್ ಅವರಿಂದ ಭಜನ ಸಂಗೀತ ಕಾರ್ಯಕ್ರಮ ನೆರವೇರಿತು.
ಸಂಸ್ಥೆಯ ಗೌರವ ಪ್ರಧಾನ ಕಾರ್ಯದರ್ಶಿ ಪೆರ್ಮುದೆ ಅಶೋಕ್ ಕುಮಾರ್ ಶೆಟ್ಟಿ, ಕೋಶಾಧಿಕಾರಿ ಅವಿನಾಶ್ ಶಾಸ್ತಿÅà, ಟ್ರಸ್ಟಿಗಳಾದ ವಿರಾರ್ ಶಂಕರ್ ಬಿ. ಶೆಟ್ಟಿ, ಗೋಪಾಲ್ ಎಸ್. ಪುತ್ರನ್, ರಮೇಶ್ ಡಿ. ಸಾವಂತ್, ಸುಮಾ ವಿ. ಭಟ್, ಸುರೇಂದ್ರ ಎ. ಪೂಜಾರಿ, ಜತೆ ಕಾರ್ಯದರ್ಶಿಗಳಾದ ಶಶಿಧರ ಬಿ. ಶೆಟ್ಟಿ, ಕುಕ್ಕೆಹಳ್ಳಿ ಸದಾನಂದ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುನಂದಾ ಎಸ್. ಉಪಾಧ್ಯಾಯ, ಕಾರ್ಯದರ್ಶಿ ಸುಶೀಲಾ ದೇವಾಡಿಗ, ಯುವ ವಿಭಾಗದ ಸಂಚಾಲಕ ನವೀನ್ ಪಡುಇನ್ನ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾ ಗದ ಸದಸ್ಯೆಯರ ಉಪಸ್ಥಿತಿಯಲ್ಲಿ ಸಮಾರಂಭವು ಜರಗಿತು.
ಚಿತ್ರ-ವರದಿ : ಸುಭಾಷ್ ಶಿರಿಯಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.