ಮದ್ಯದಂಗಡಿಗೆ ಸಮಯ ನಿಗದಿ ಮಾಡಿ

Team Udayavani, Dec 19, 2018, 8:38 AM IST

5.jpg

ವಿಧಾನಸಭೆ: ಮದ್ಯದ ಅಂಗಡಿಗಳು ಬೆಳ್ಳಂಬೆಳಗ್ಗೆ ತೆರೆದಿರುತ್ತದೆ. ಇದರಿಂದ ರಾಜ್ಯದ ಆದಾಯ ಹೆಚ್ಚಬಹುದು. ಆದರೆ, ಜನ ಸಾಮಾನ್ಯರಿಗೆ ಸಮಸ್ಯೆಯಾಗುತ್ತಿದೆ. ಮದ್ಯದ ಅಂಗಡಿಗಳಿಗೆ ನಿರ್ದಿಷ್ಟ ಸಮಯ ನಿಗದಿ ಮಾಡಬೇಕೆಂದು ಬಿಜೆಪಿಯ ಸುರೇಶ್‌ ಕುಮಾರ್‌ ಒತ್ತಾಯಿಸಿದರು.

ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಶಾಸಕ ಐಹೊಳೆ ಡಿ. ಮಹಾಲಿಂಗಪ್ಪ ಪ್ರಶ್ನೆ ಸಂಬಂಧ ಮಧ್ಯಪ್ರವೇಶಿಸಿದ ಸುರೇಶ್‌ ಕುಮಾರ್‌ ಮಾತನಾಡಿ, ಮದ್ಯದ ಅಂಗಡಿಗಳು ಬೆಳಗ್ಗೆ 6 ಗಂಟೆಯಿಂದಲೇ ಆರಂಭವಾಗುತ್ತಿದೆ. ಇದು ಕೂಲಿ ಕಾರ್ಮಿಕರ ಬದುಕಿಗೆ ಇನ್ನಷ್ಟು ತೊಂದರೆ ತಂದೊಡ್ಡುತ್ತಿದೆ. ಹೀಗಾಗಿ ನಿರ್ದಿಷ್ಟ ಸಮಯಕ್ಕೆ ಮದ್ಯದ ಅಂಗಡಿ ತೆರೆಯುವಂತೆ ಮಾಡಬೇಕು ಎಂದು ಮನವಿ
ಮಾಡಿದರು. ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಭೂಮಿಯೇ ಕಾಣದಂತಾಗಿದ್ದು, ಬರೀ ಬಾಟಲಿಗಳೇ ಕಾಣುತ್ತಿವೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ ಎಂದರು.

ಇದಕ್ಕೆ ಸ್ಪೀಕರ್‌ ಪ್ರತಿಕ್ರಿಯಿಸಿ. ಕೆಲವರಿಗೆ ಬೆಳಗ್ಗೆಯಿಂದಲೇ ಅಗತ್ಯವಿರುತ್ತದೆ. ನಿರ್ದಿಷ್ಟ ಸಮಯ ನಿಗದಿ ಮಾಡಿದರೆ ಅಂಥವರ ಗತಿ ಏನು ಎಂದಾಗ ಸಭೆ ನಗೆಗಡಲಲ್ಲಿ ತೇಲಿತು. ಈ ಮಧ್ಯೆ ಸಿ.ಟಿ.ರವಿ, ನಾನು ನಿಮ್ಮನ್ನು ಗುರುವಾಗಿ ಸ್ಪೀಕರಿಸಿದ್ದೇನೆ ಎಂದರು. ಆದರೆ, ಈ ಒಂದು ವಿಷಯ (ಲಿಕ್ಕರ್‌) ಹೊರತುಪಡಿಸಿ ಎಂದು ಮಾತು ಮುಗಿಸುವುದರೊಳಗೆ ಸ್ಪೀಕರ್‌ ಪ್ರತಿಕ್ರಿಯಿಸಿ, ನಾನು ನಿಮಗೆ ದೀಕ್ಷೆ ನೀಡಿಲ್ಲ ಎಂದು ಚರ್ಚೆಗೆ ತೆರೆ ಎಳೆದರು.

ಸ್ಪೀಕರ್‌ ಅಸಮಾಧಾನ
ಪ್ರಶ್ನೋತ್ತರ ಸಂದರ್ಭದಲ್ಲಿ ಬಿಜೆಪಿ ಶಾಸಕರು ಪದೇಪದೆ ಎದ್ದುನಿಲ್ಲುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಸ್ಪೀಕರ್‌ ರಮೇಶ್‌ ಕುಮಾರ್‌, ಪ್ರಶ್ನೋತ್ತರದ ಸಂದರ್ಭದಲ್ಲಿ ವಿಷಯ ಮಂಡನೆಗೆ ಅವಕಾಶ ಇರುವುದಿಲ್ಲ. ಪ್ರಶ್ನೆಗೆ ಉಪ ಪ್ರಶ್ನೆ ಮಾತ್ರ ಕೇಳಲು ಅವಕಾಶ ಇರುತ್ತದೆ. ಇದು ಹೊಸ ಶಾಸಕರಿಗೆ ತಿಳಿದಿಲ್ಲ. ಮನಸ್ಸಿಗೆ ಬಂದಂತೆ ಎದ್ದು ನಿಲ್ಲುವುದು ಸರಿಯಲ್ಲ. ಸದನದ ಹಿರಿಯ ಸದಸ್ಯರು ಕಿರಿಯರಿಗೆ ತರಬೇತಿ ನೀಡಬೇಕು. ಇಲ್ಲದಿದ್ದರೆ ನನ್ನ ಕೊಠಡಿಗೆ ಬನ್ನಿ. ನಾನೇ ತಿಳಿಸಿಕೊಡುತ್ತೇನೆ ಎಂದು ಕಿರಿಯ
ಶಾಸಕರಿಗೆ ಸೂಚ್ಯವಾಗಿ ಹೇಳಿದರು.

ಟಾಪ್ ನ್ಯೂಸ್

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

1-indi

INDIA Bloc ಖತಂ?: ದಿಲ್ಲಿ ವಿಧಾನಸಭಾ ಚುನಾವಣೆ ಕಾವೇರಿರುವಾಗಲೇ ಬಿರುಕು

baby 2

Russia; 25ರ ವಿದ್ಯಾರ್ಥಿನಿ ಮಗು ಹೆತ್ತರೆ 81,000 ರೂ.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

CT Ravi

CID; ಶಾಸಕ ಸಿ.ಟಿ. ರವಿ ಬೆಳಗಾವಿ ದೌರ್ಜನ್ಯ ವಿವರಣೆ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’

“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.