ಕೆರೆಗಳಿಗೆ ನೀರು: ಯೋಜನಾ ವರದಿ ತರಿಸಿ ಪರಿಶೀಲನೆ
Team Udayavani, Dec 19, 2018, 8:42 AM IST
ವಿಧಾನಪರಿಷತ್ತು: ರಾಜ್ಯದಲ್ಲಿ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಕುರಿತಾಗಿ ಸಮಗ್ರ ವರದಿ ತರಿಸಿಕೊಂಡು ಪರಿಶೀಲನೆ ನಡೆಸುವೆ, ತಪ್ಪು ಕಂಡುಬಂದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ಹೇಳಿದರು.
ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಎನ್.ರವಿಕುಮಾರ ಪ್ರಶ್ನೆಗೆ ಉತ್ತರಿಸಿದ ಅವರು, ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಕುರಿ ತಾಗಿ ಸದಸ್ಯರ ಹಲವು ಆರೋಪಗಳನ್ನು ಗಮನಿಸಿದ್ದೇನೆ. ಇದರ ಪರಿಶೀಲನೆಗೆ ಕ್ರಮ ಕೈಗೊಂಡಿದ್ದೇನೆ. ಕೆರೆ ತುಂಬಿಸುವುದು ಸೇರಿ ವಿವಿಧ ಕಾಮಗಾರಿ ಗಳನ್ನು ಕೇವಲ ಕಾಗದಗಳಲ್ಲಿ ತೋರಿಸುವ ಬದಲು, ಹಂತ ಹಂತದ ಕಾಮಗಾರಿ ಫೋಟೊ ಹಾಗೂ ವಿಡಿ
ಯೊ ಚಿತ್ರೀಕರಣ ಕಡ್ಡಾಯ ಮಾಡಲಾಗಿದೆ. ಅದೇ ಆಧಾರದಲ್ಲಿ ಬಿಲ್ ಪಾವತಿ ಮಾಡಲಾಗುತ್ತದೆ ಎಂದರು. 2016-17ಮತ್ತು 2017-18ರ ಸಾಲಿನಲ್ಲಿ ನದಿಗಳಿಂದ ನೀರನ್ನು ಎತ್ತಿ ಕೆರೆಗಳಿಗೆ ತುಂಬಿಸುವ ಯೋಜನೆಗಳಿಗಂದ ಕ್ರಮವಾಗಿ 197 ಮತ್ತು 266 ಕೆರೆಗಳನ್ನು ತುಂಬಿಸಲಾಗಿದೆ. ಕೆಲವೊಂದು ಕಡೆ ನೀರು ಲಿಫ್ಟ್ ಮಾಡಬೇಕಾಗಿದೆ. ಇದಕ್ಕೆ ವಿದ್ಯುತ್ ಅವಶ್ಯಕತೆ ಇದ್ದು, ಇದರ ನಿರ್ವಹಣೆ ಹೇಗೆ ಎಂಬುದಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದಿಂದಲೇ ವಿದ್ಯುತ್ ವೆಚ್ಚ ಭರಿಸುವ ಚಿಂತನೆಯಿದೆ ಎಂದರು.
ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಸೇರಿ ಕೆಲ ಸದಸ್ಯರು ಮಾತನಾಡಿ, ಸರ್ಕಾರ ಹೇಳಿದ ಕೆರೆಗಳಲ್ಲಿ ಶೇ.75ರಷ್ಟು ಕೆರೆ ತುಂಬಿಲ್ಲ ಎಂಬ ಆರೋಪವಿದ್ದು, ಈ ಬಗ್ಗೆ ತನಿಖೆ ಮಾಡಿಸಿ ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.