ಉಪಸಭಾಪತಿಯಾಗಿ ಧರ್ಮೇಗೌಡ ಆಯ್ಕೆ
Team Udayavani, Dec 19, 2018, 8:47 AM IST
ಸುವರ್ಣಸೌಧ: ವಿಧಾನಪರಿಷತ್ ಉಪಸಭಾಪತಿ ಸ್ಥಾನಕ್ಕೆ ಜೆಡಿಎಸ್‌ನ ಎಸ್.ಎಲ್.ಧರ್ಮೇಗೌಡ ನಾಮಪತ್ರ ಸಲ್ಲಿಸಿದ್ದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಶ್ರೀಕಂಠೇ ಗೌಡರಿಗೆ ಉಪ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಪಕ್ಷದ ವರಿಷ್ಠರು ಸೂಚನೆ ನೀಡಿದ್ದರಾದರೂ ಸಭಾಪತಿ ಸ್ಥಾನದಂತೆ ಉಪ ಸಭಾಪತಿ ಸ್ಥಾನಕ್ಕೂ ಕೊನೇ ಕ್ಷಣದಲ್ಲಿ ಅಚ್ಚರಿ ಅಭ್ಯರ್ಥಿಯಾಗಿ ಧರ್ಮೇಗೌಡ ನಾಮಪತ್ರ ಸಲ್ಲಿಸಿದರು.
ಹಿರಿಯ ನಾಯಕ ಬಸವರಾಜ ಹೊರಟ್ಟಿ ಸೇರಿ ಪಕ್ಷದ ನಾಯಕರ ಜತೆ ಎಸ್.ಎಲ್.ಧರ್ಮೇಗೌಡ ವಿಧಾನ ಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮಿ ಅವರಿಗೆ ನಾಮಪತ್ರ ಸಲ್ಲಿಸಿದರು. ಬುಧವಾರ ಚುನಾವಣೆ ನಿಗದಿಯಾಗಿತ್ತು. ಒಬ್ಬರೇ ನಾಮಪತ್ರ ಸಲ್ಲಿಸಿರುವುದರಿಂದ ಅವಿರೋಧವಾಗಿ ಆಯ್ಕೆಯಾದಂತಾಗಿದೆ. ಮಲೆನಾಡು ಭಾಗಕ್ಕೆ ಸಂಪುಟದಲ್ಲಿ ಅವಕಾಶವಿಲ್ಲದ ಕಾರಣ ಧರ್ಮೇ ಗೌಡರಿಗೆ ಉಪ ಸಭಾಪತಿ ಸ್ಥಾನ ಕಲ್ಪಿಸಲಾಗಿದೆ ಎಂದು ಹೇಳಲಾಗಿದೆ.
ಬೀರೂರು ಕ್ಷೇತ್ರದಿಂದ ಒಂದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಧರ್ಮೇಗೌಡ ಇತೀ¤ಚೆಗೆ ವಿಧಾನ ಸಭೆಯಿಂದ ವಿಧಾನಪರಿಷತ್‌ಗೆ ಆಯ್ಕೆ ಯಾಗಿದ್ದರು. ಇವರ ಸಹೋದರ ಭೋಜೇಗೌಡ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಪರಿಷತ್‌ಗೆ ಆಯ್ಕೆಯಾಗಿದ್ದಾರೆ. ಈ ಮಧ್ಯೆ, ವಿಧಾನಪರಿಷತ್‌ನಲ್ಲಿ ಸರ್ಕಾರದ ಮುಖ್ಯ ಸಚೇತಕ ಸ್ಥಾನವೂ ಜೆಡಿಎಸ್‌ಗೆ ನೀಡಲಾಗುವುದು ಎಂದು ಹೇಳಲಾಗಿದ್ದು ಟಿ.ಎ.ಶರವಣ ಹಾಗೂ ತೂಪಲ್ಲಿ ನಾರಾಯಣಸ್ವಾಮಿ ಹೆಸರು ಪರಿಶೀಲನೆಯಲ್ಲಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
E-Khata ಇದ್ದರಷ್ಟೇ ಆಸ್ತಿ ನೋಂದಣಿ: ಸಚಿವ ಕೃಷ್ಣ ಬೈರೇಗೌಡ
Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.